ಕೊಡಗು:ಏನೋ ಮಾಡಲು ಹೋಗಿ ಇನ್ನೇನೋ ಆದಂತಾಗಿದೆ ಇಲ್ಲಿನ ಪರಿಸ್ಥಿತಿ. ನಗರಸಭೆ ಕೌನ್ಸಿಲರ್ ಮತ್ತು ಕಮಿಷನರ್​ ಅವರನ್ನು ವ್ಯಂಗ್ಯವಾಗಿ ಚಿತ್ರಿಸಿ ಫೇಸ್​ಬುಕ್​ನಲ್ಲಿ ಪೋಸ್ಟ್ ಮಾಡಿಕೊಂಡಿದ್ದ ಚಿತ್ರಕಲಾವಿದನೊಬ್ಬ ಬಳಿಕ ಪರಿಣಾಮ ಎದುರಿಸಲು ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಬೆದರಿಸಿದ ಪ್ರಕರಣವೊಂದು ನಡೆದಿದೆ.
ಮಡಿಕೇರಿ ನಗರದ ಚೈನ್ ಗೇಟ್ ಬಳಿಯ ನಿವಾಸಿ, ಚಿತ್ರಕಲಾವಿದ ಸಂದೀಪ್ ನಗರಸಭೆಗೆ ಸೇರಿದ್ದ ಜಾಗದಲ್ಲಿ ಅಕ್ರಮವಾಗಿ ಮನೆ ನಿರ್ಮಾಣ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಅಲ್ಲದೆ ಅಕ್ರಮಸಕ್ರಮ ಅಡಿಯಲ್ಲಿ ಅರ್ಜಿಯನ್ನೂ ಹಾಕಿರುವ ಸಂದೀಪ್, ಕೌನ್ಸಿಲರ್ ಹಾಗೂ ಕಮಿಷನರ್ ಅವರನ್ನು ವ್ಯಂಗ್ಯವಾಗಿ ಚಿತ್ರಿಸಿ ಫೇಸ್​ಬುಕ್​ನಲ್ಲಿ ಪೋಸ್ಟ್ ಮಾಡಿದ್ದರು.
ಆ ಬಳಿಕ ಕಮಿಷನರ್ ರಾಮದಾಸ್ ಜೆಸಿಬಿ ತರಿಸಿಕೊಂಡು ಮನೆಯನ್ನು ಕೆಡವಲು ಬಂದಾಗ ಸಂದೀಪ್ ಮತ್ತು ಮನೆಯವರು ಅಡುಗೆ ಅನಿಲದ ಸಿಲಿಂಡರ್ ಆನ್ ಮಾಡಿಟ್ಟು, ಬೆಂಕಿಪೊಟ್ಟಣ ಹಿಡಿದುಕೊಂಡು ಸಾಮೂಹಿಕವಾಗಿ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಬೆದರಿಸಿದ್ದಾರೆ. ಸದ್ಯ ಸಂದೀಪ್ ವಿರುದ್ಧ ಮಡಿಕೇರಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಧ್ಯರಾತ್ರಿಯಲ್ಲಿ ಓಡೋ ಹುಡುಗ.. ಪರೀಕ್ಷೆಗೂ ಮೊದಲೇ ಸೇನಾಧಿಕಾರಿಯ ಮನಗೆದ್ದ..!
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:nineteen + eighteen =
Remember me
