ವಿಜಯನಗರ:ಹೂವಿನಹಡಗಲಿ ತಾಲೂಕಿನ ಮೈಲಾರ ಗ್ರಾಮದಲ್ಲಿ ಸುಕ್ಷೇತ್ರ ಐತಿಹಾಸಿಕ ಮೈಲಾರಲಿಂಗೇಶ್ವರ ಕಾರ್ಣಿಕೋತ್ಸವ ಜರುಗಿತು. 14 ಅಡಿ ಎತ್ತರದ ಬಿಲ್ಲನ್ನೇರಿ ಗೊರವಯ್ಯ ರಾಮಪ್ಪ, ‘ಅಂಬಲಿ ಹಳಸೀತು, ಕಂಬಳಿ ಬೀಸೀತಲೇ ಪರಾಕ್’ ಎಂದು ವರ್ಷದ ಕಾರ್ಣಿಕ ಭವಿಷ್ಯ ನುಡಿದಿದೆ.
ಡೆಂಕಣಮರಡಿಯಲ್ಲಿ ಕಾರ್ಣಿಕ ವಿಶ್ಲೇಷಣೆ ಮಾಡಿದ ದೇವಸ್ಥಾನದ ಧರ್ಮದರ್ಶಿ ವೆಂಕಪ್ಪಯ್ಯ ಒಡೆಯರ್, ಪ್ರಾಮಾಣಿಕವಾಗಿ, ನಿಷ್ಠಯಿಂದ ಇರುವ ವ್ಯಕ್ತಿಯು ರಾಜ್ಯ ಹಾಗೂ ರಾಷ್ಟ್ರವನ್ನಾಳುತ್ತಾನೆ ಎಂದು ಹೇಳಿದ್ದಾರೆ.
ಮಳೆ ಬೆಳೆ ಜಾಸ್ತಿ ಆಗಲಿದೆ, ರೈತರಿಗೆ ಒಳ್ಳೆಯದಾಗುತ್ತದೆ. ಇದರ ಜತೆಗೆ ಮಳೆ ಜಾಸ್ತಿಯಾಗಿ ಬೆಳೆ ಹಾನಿಯಾಗಲಿದೆ ಎಂದು ಗೊರವಯ್ಯ ನುಡಿದ ಕಾರ್ಣಿಕದ ಮಾತನ್ನು ರೈತಾಪಿ ವರ್ಗದ ಮೇಲೆ ವಿಶ್ಲೇಷಣೆ ಮಾಡಲಾಗಿದೆ.
11 ದಿನ ಉಪವಾಸ ವೃತ ಆಚರಣೆ ನಂತರ ಇಂದು ಕಾರ್ಣಿಕೋತ್ಸವ ನಡೆದಿದೆ. ಪ್ರತಿ ವರ್ಷವೂ ಮೈಲಾರ ಕ್ಷೇತ್ರದಲ್ಲಿ ನಡೆಯುವ ಪ್ರತೀತಿ ಇದ್ದು, ವಿವಿಧೆಡೆಯಿಂದ ಆಗಮಿಸಿದ ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ಕಾರ್ಣಿಕೋತ್ಸವ ನಡೆಯುತ್ತಾ ಬರುತ್ತಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:12 − 10 =
Remember me
