ಮಂಡ್ಯ:ಸಕ್ಕರೆ ನಾಡು ಮಂಡ್ಯ ವಿಧಾನಸಭಾ ಕ್ಷೇತ್ರ ದಿನದಿಂದ ದಿನಕ್ಕೆ ರೋಚಕ ತಿರುವು ಪಡೆದುಕೊಳ್ಳುತ್ತಿದೆ. ಚನ್ನಪಟ್ಟಣದ ಜತೆಗೆ ಮಂಡ್ಯ ಕ್ಷೇತ್ರದಿಂದಲೂ ಚುನಾವಣ ಕಣಕ್ಕೆ ಇಳಿಯಲು ಮಾಜಿ ಮುಖ್ಯಮಂತ್ರಿ ಎಚ್​.ಡಿ. ಕುಮಾರಸ್ವಾಮಿ ಚಿಂತನೆ ನಡೆಸಿದ್ದಾರೆ ಎಂಬ ಚರ್ಚೆ ರಾಜಕೀಯ ವಲಯದಲ್ಲಿ ನಡೆದಿದೆ. ಇದರ ಬೆನ್ನಲ್ಲೇ ಮತ್ತೊಂದು ಸ್ಫೋಟಕ ಬೆಳವಣಿಗೆಯೊಂದು ನಡೆದಿದ್ದು, ಮಂಡ್ಯ ಮತ್ತೊಮ್ಮೆ ಜಿದ್ದಾಜಿದ್ದಿನ ಕಣವಾಗುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.
ಹೌದು, ಎಚ್​.ಡಿ. ಕುಮಾರಸ್ವಾಮಿ ಅವರು ಮಂಡ್ಯದಿಂದ ಚುನಾವಣಾ ಕಣಕ್ಕೆ ಇಳಿದರೆ, ಅವರ ವಿರುದ್ಧ ಸಂಸದೆ ಸುಮಲತಾ ಅಂಬರೀಷ್​ ಪಕ್ಷೇತರವಾಗಿ ಸ್ಪರ್ಧಿಸುವ ಸಾಧ್ಯತೆ ಇದೆ. ಈ ಬಗ್ಗೆ ಸುಮಲತಾ ಅವರ ಆಪ್ತ ಹಾನಗೆರೆ ಶಿವಕುಮಾರ್​ ಅವರು ಸುಳಿವು ನೀಡಿದ್ದಾರೆ.
ಇದನ್ನೂ ಓದಿ:ಆರೋಪಗಳ ಸುಳಿಯಲ್ಲಿ ಖಾಕಿ! ಲಂಚ, ಲೈಂಗಿಕ ಕಿರುಕುಳ, ಬೆಳೆಯುತ್ತಿದೆ ಅಮಾನತುಗೊಳ್ಳವವರ ಪಟ್ಟಿ
ನಾಮಪತ್ರ ಸಲ್ಲಿಕೆಗೆ ಸಿದ್ಧತೆಸುಮಲತಾ ಅವರು ಪಕ್ಷೇತರವಾಗಿ ನಿಲ್ಲಲಿದ್ದಾರೆ ಎಂದು ಹೇಳಲಾಗುತ್ತಿದೆ. ಈಗಾಗಲೇ ತೆರೆಮರೆಯಲ್ಲಿ ನಾಮಪತ್ರ ಸಲ್ಲಿಕೆಗೆ ಸಿದ್ಧತೆ ನಡೆಯುತ್ತಿದೆ ಎಂದು ಚರ್ಚೆಯಾಗುತ್ತಿದೆ. ಎಚ್​ಡಿಕೆ ತೀರ್ಮಾನದ ಮೇಲೆ ಸುಮಲತಾ ಸ್ಪರ್ಧೆಯ ನಿರ್ಧಾರ ನಿಂತಿದೆ ಎಂದು ಹೇಳಲಾಗುತ್ತಿದೆ. ಒಂದು ವೇಳೆ ಎಚ್​ಡಿಕೆ ಸ್ಪರ್ಧಿಸಿದ್ದೇ ಆದಲ್ಲಿ ಸುಮಲತಾ ಪಕ್ಷೇತರವಾಗಿ ಸ್ಪರ್ಧಿಸಲಿದ್ದಾರೆ.
ಮಂಡ್ಯ ಕ್ಷೇತ್ರ ರಾಷ್ಟ್ರದ ಗಮನ ಸೆಳೆಯಲಿದೆಸುಮಲತಾ ಮತ್ತು ಎಚ್​ಡಿಕೆ ಸ್ಪರ್ಧೆ ಮಾಡಿದರೆ, ಮತ್ತೊಮ್ಮೆ ಮಂಡ್ಯ ಕ್ಷೇತ್ರ ರಾಷ್ಟ್ರದ ಗಮನ ಸೆಳೆಯಲಿದೆ. ಕಳೆದ ಲೋಕಸಭಾ ಚುನಾವಣೆಯಲ್ಲಿ ಎಚ್​ಡಿಕೆ ಪುತ್ರ ನಿಖಿಲ್​ ವಿರುದ್ಧ ನಿಂತು ಸುಮಲತಾ ಅವರು ಗೆಲುವು ದಾಖಲಿಸಿದ್ದಾರೆ. ಈ ಬಾರಿ ಮಾಜಿ ಸಿಎಂ ಎಚ್​ಡಿಕೆ ವಿರುದ್ಧವೇ ಸ್ಪರ್ಧಿಸಲು ಸುಮಲತಾ ಮುಂದಾಗಿದ್ದಾರೆ ಎನ್ನಲಾಗುತ್ತಿದೆ.
ಇದನ್ನೂ ಓದಿ:500 ವರ್ಷಗಳ ಹಿಂದೆ ನಿರ್ಮಾಣವಾದ ಮ್ಯಾಜಿಕಲ್​ ಬಾವಿಯ ಬಗ್ಗೆ ತಿಳಿದ್ರೆ ನಿಮ್ಮ ಹುಬ್ಬೇರುವುದು ಗ್ಯಾರೆಂಟಿ!
ಸ್ಪರ್ಧೆ ಖಚಿತಮಾಜಿ ಸಿಎಂ ಎಚ್​ಡಿಕೆ ಮಂಡ್ಯದಿಂದ ಸ್ಪರ್ಧಿಸುವುದು ಖಚಿತ ಎಂದು ಹೇಳಲಾಗುತ್ತಿದೆ. ನಾಮಪತ್ರ ಸಲ್ಲಿಕೆಗಾಗಿ ಮಂಡ್ಯ ನಗರದ ಬ್ಯಾಂಕ್‌ನಲ್ಲಿ ಖಾತೆ ಓಪನ್ ಮಾಡಿದ್ದಾರೆ ಎನ್ನಲಾಗಿದೆ. ಕುಮರಸ್ವಾಮಿ ಹೆಸರಿನಲ್ಲಿ ಕಳೆದ ಶನಿವಾರ ಮಂಡ್ಯದ ಎಚ್‌ಡಿಎಫ್‌ಸಿ ಬ್ಯಾಂಕ್‌ನಲ್ಲಿ ಖಾತೆ ತೆರೆದಿರುವುದಾಗಿ ಮಾಹಿತಿ ಸಿಕ್ಕಿದೆ. ನಾಮಪತ್ರ ಸಲ್ಲಿಸಬೇಕು ಎಂದರೆ ಸ್ಥಳೀಯ ಬ್ಯಾಂಕ್ ಶಾಖೆಯಲ್ಲಿ ಖಾತೆ ಇರಬೇಕು. ಈ‌ ನಿಟ್ಟಿನಲ್ಲಿ ಮಂಡ್ಯದ ಎಚ್‌ಡಿಎಫ್‌ಸಿ ಬ್ಯಾಂಕ್‌ನಲ್ಲಿ ಎಚ್​ಡಿಕೆ ಖಾತೆ ಓಪನ್‌ ಮಾಡಿದ್ದಾರೆಂದು ತಿಳಿದುಬಂದಿದೆ. ಇಂದಿನ ಸಭೆಯಲ್ಲಿ ಎಚ್​ಡಿಕೆ ತಮ್ಮ ಅಂತಿಮ ನಿರ್ಧಾರ ಹೇಳಲಿದ್ದಾರೆ. ಹೀಗಾಗಿ ಕುಮಾರಸ್ವಾಮಿ ಸಭೆಯ ಮೇಲೆ ಎಲ್ಲರ ಕಣ್ಣು ನೆಟ್ಟಿದೆ.
ಇತರ ಪಕ್ಷದವರು ಕಾಂಗ್ರೆಸ್​​ಗೆ ಬರುತ್ತಿದ್ದಂತೆ ಕನ್ವರ್ಟ್ ಆಗುತ್ತಾರೆ; ಜಿ.ಪರಮೇಶ್ವರ್

ನಾಮಪತ್ರ ಸಲ್ಲಿಕೆಗೂ ಮುನ್ನ ಅಭ್ಯರ್ಥಿಗಳ ಟೆಂಪಲ್​ ರನ್​

ಲಕ್ಕಿ ಡ್ರಾನಲ್ಲಿ ಒಲಿದ ಅದೃಷ್ಟ; 2 ಕೋಟಿ ರೂಪಾಯಿ ಹಣ ಗೆದ್ದ ಮಹಿಳೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eighteen − five =
Remember me
