ಮಂಡ್ಯ:ಸಂಸದೆ ಸುಮಲತಾ ಅಂಬರೀಶ್‌ ಅವರು ತಮಗೆ ಕರೊನಾ ಸೋಂಕು ತಗುಲಿರುವ ಬಗ್ಗೆ ನಿನ್ನೆಯಷ್ಟೇ ದೃಢಪಡಿಸಿದ್ದರು. ಸಾಮಾಜಿಕ ಜಾಲತಾಣದಲ್ಲಿ ತಮ್ಮ ಅನಿಸಿಕೆ ಹಂಚಿಕೊಂಡಿದ್ದ ಅವರು, ತಾವು ಶೀಘ್ರದಲ್ಲಿ ಗುಣಮುಖರಾಗಿ ಬರುವ ವಿಶ್ವಾಸವನ್ನೂ ವ್ಯಕ್ತಪಡಿಸಿದ್ದರು.
ಆದರೆ ಇದೀಗ ಅನೇಕ ಸಚಿವರು, ಶಾಸಕರು ಸೇರಿದಂತೆ ಅನೇಕ ಗಣ್ಯರಿಗೆ ಆತಂಕ ಎದುರಾಗಿದೆ. ಇದಕ್ಕೆ ಕಾರಣ ಇಷ್ಟೇ. ಇದೇ 4ರಂದು ಮಂಡ್ಯದ ರೈತ ಸಭಾಂಗಣದಲ್ಲಿ ನಡೆದಿದ್ದ ಕಾರ್ಯಕ್ರಮದಲ್ಲಿ ಸುಮಲತಾ ಭಾಗವಹಿಸಿದ್ದರು. ಆಶಾ ಕಾರ್ಯಕರ್ತೆಯರಿಗೆ ಪ್ರೋತ್ಸಾಹ ಧನದ ಚೆಕ್ ವಿತರಣೆ ಕಾರ್ಯಕ್ರಮ ಅದಾಗಿತ್ತು. ಈ ಕಾರ್ಯಕ್ರಮದಲ್ಲಿ ಸಚಿವರಾದ ಎಸ್.ಟಿ.ಸೋಮಶೇಖರ್, ಕೆ.ಸಿ.ನಾರಾಯಣಗೌಡ, ಶಾಸಕ ಎಂ.ಶ್ರೀನಿವಾಸ್, ಮಂಡ್ಯ ಡಿಸಿ ಸೇರಿ ಹಲವರು ಗಣ್ಯರು ಉಪಸ್ಥಿತರಿದ್ದರು.
ಅದರ ವಿಡಿಯೋ ಇದೀಗ ವೈರಲ್‌ ಆಗಿದ್ದು, ಸುಮಲತಾ ಅವರು ಮಾಸ್ಕ್‌ ಧರಿಸದೇ ಕಾರ್ಯಕ್ರಮದಲ್ಲಿ ಭಾಗವಹಿಸಿರುವುದು ಕಂಡುಬಂದಿದೆ.ಇದರಿಂದಾಗಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಮಂಡ್ಯದ ಅಧಿಕಾರಿ ವರ್ಗ, ಜನಪ್ರತಿನಿಧಿಗಳು, ಬೆಂಬಲಿಗರು ಸೇರಿದಂತೆ ಸಾರ್ವಜನಿಕರಿಗೂ ಆತಂಕ ಶುರುವಾಗಿದೆ.
ಕುತೂಹಲ ಮೂಡಿಸುತ್ತಿದ್ದಾಳೆ ‘ಚಿನ್ನದ ರಾಣಿ’: ಐಎಎಸ್‌ ಅಧಿಕಾರಿ ತಲೆದಂಡ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:6 + 16 =
Remember me
