ಬೆಂಗಳೂರು:ಕರೊನಾ ಸೋಂಕಿಗೆ ಒಳಗಾಗಿದ್ದ ಮಂಡ್ಯ ಸಂಸದೆ, ನಟಿ ಸುಮಲತಾ ಅಂಬರೀಷ್ ಹಾಗೂ ನಿರ್ಮಾಪಕ ರಾಕ್ ಲೈನ್ ವೆಂಕಟೇಶ್ ಗುಣಮುಖರಾಗಿದ್ದಾರೆ.
ಸುಮಲತಾ ಅವರಿಗೆ ಜು.6ರಂದು ಕರೊನಾ ಸೋಂಕು ದೃಢಪಟ್ಟಿತ್ತು. ಇದಾದ ಎರಡು ದಿನದ ನಂತರ ಅಂದರೆ ಜು.8ರಂದು ರಾಕ್​ಲೈನ್​ ವೆಂಕಟೇಶ್​ಗೂ ಕರೊನಾ ಪಾಸಿಟಿವ್​ ಬಂದಿತ್ತು.
ಇದನ್ನೂ ಓದಿರಿಕರೊನಾಗೆ ಮನೆಯಲ್ಲೇ ಚಿಕಿತ್ಸೆ ಪಡೆಯುತ್ತೀರಾ? ಹಾಗಿದ್ದಲ್ಲಿ ತಪ್ಪದೇ ಈ ರೂಲ್ಸ್ ಫಾಲೋ ಮಾಡಿ
ಕರೊನಾ ಸೋಂಕು ತಗುಲಿದ್ದ ಸುಮಲತಾ ಮತ್ತು ರಾಕ್​ಲೈನ್​ ವೆಂಕಟೇಶ್​ ಅವರು ಚಿಕಿತ್ಸೆ ಪಡೆದ ಬಳಿಕ ಗುಣಮುಖರಾಗಿದ್ದಾರೆ. ಭಾನುವಾರದಿಂದ ಸಾಮಾಜಿಕ ಚಟುವಟಿಕೆಯಲ್ಲಿ ತೊಡಗುವರು ಎಂದು ಕಲಾವಿದ ದೊಡ್ಡಣ್ಣ ತಿಳಿಸಿದ್ದಾರೆ.
ಸೋಂಕು ದೃಢಪಟ್ಟ ಕೂಡಲೇ ಸುಮಲತಾ ಅಂಬರೀಶ್​ ಮನೆಯಲ್ಲಿಯೇ ಕ್ವಾರಂಟೈನ್​ ಆಗಿ ವೈದ್ಯರ ಸಲಹೆ ಮೇರೆಗೆ ಚಿಕಿತ್ಸೆ ಪಡೆಯುತ್ತಿದ್ದರು. ಆ ವೇಳೆ ಟ್ವಿಟರ್​ನಲ್ಲಿ ಮಾಹಿತಿಹಂಚಿಕೊಂಡಿದ್ದ ಅವರು, ‘ನನ್ನ ಕ್ಷೇತ್ರಗಳ ಕಾರ್ಯದಲ್ಲಿ ತೊಡಗಿಕೊಂಡಿದ್ದೆ. ಕರೊನಾ ಪೀಡಿತ ಪ್ರದೇಶಗಳಿಗೂ ಭೇಟಿ ನೀಡಿದ್ದೆ. ಹಾಗಾಗಿ ಸೋಂಕು ತಗುಲಿದೆ. ನನ್ನಲ್ಲಿ ರೋಗನಿರೋಧಕ ಶಕ್ತಿ ಪ್ರಬಲವಾಗಿದೆ. ನಿಮ್ಮೆಲ್ಲರ ಆಶೀರ್ವಾದದಿಂದ ಖಂಡಿತ ಬೇಗ ಗುಣವಾಗುತ್ತೇನೆ’ ಎಂದಿದ್ದರು.
ಸುಮಲತಾ ಅಂಬರೀಷ್‌ಗೆ ಕರೊನಾ ದೃಢಪಟ್ಟ ಬೆನ್ನಲ್ಲೇ ಅವರ ನಿಕಟವರ್ತಿ ಆಗಿರುವ ರಾಕ್​ಲೈನ್ ವೆಂಕಟೇಶ್​ಗೂ ಸೋಂಕಿನ ಲಕ್ಷಣ ಕಾಣಿಸಿಕೊಂಡಿತ್ತು. ಗಂಟಲದ್ರವದ ಪರೀಕ್ಷೆ ಮಾಡಿದಾಗ ಸೋಂಕು ಇರುವುದು ದೃಢಪಟ್ಟಿದ್ದರಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಸದ್ಯ ಕನ್ನಡ ಚಿತ್ರರಂಗದ ಕಲಾವಿದರಿಬ್ಬರೂ ಗುಣಮುಖರಾಗಿರುವುದು ಅಭಿಮಾನಿಗಳಲ್ಲಿ ಸಂತಸ ತರಿಸಿದೆ.
ಕೋವಿಡ್ ಆಸ್ಪತ್ರೆಗೆ ಹೋದ ದಿನವೇ ಧ್ರುವ ಸರ್ಜಾ, ಪತ್ನಿ ಪ್ರೇರಣಾ ಡಿಸ್ಚಾರ್ಜ್​

ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ…
ಬೆಂಗಳೂರು:  ಇಡ್ಲಿ ಅಂದ್ರೆ ಯಾರಿಗೆ ತಾನೇ ಇಷ್ಟವಿಲ್ಲ ಹೇಳಿ.  ಹೆಚ್ಚಿನವರು ಇಡ್ಲಿಯನ್ನು ಇಷ್ಟಪಟ್ಟು ತಿನ್ನುತ್ತಾರೆ. ಇಡ್ಲಿ…
Sign in to your account
Please enter an answer in digits:three × 1 =
Remember me
