ಬೆಂಗಳೂರು:ಸುಮಲತಾ ಅಂಬರೀಷ್ ಇಂದು ಬಿಜೆಪಿ ಸೇರ್ಪಡೆಯಾಗಲಿದ್ದು, ಇದಕ್ಕೂ ಮುನ್ನ ಅಂಬರೀಷ್ ಸಮಾಧಿಗೆ ಪೂಜೆ ಸಲ್ಲಿಸಿದರು. ಕಂಠೀರವ ಸ್ಟುಡಿಯೋದಲ್ಲಿರುವ ಅಂಬರೀಷ್ ಸಮಾಧಿಗೆ ದೀಪ ಹಚ್ಚಿ ಪೂಜೆ ಸಲ್ಲಿಸಿದರು. ಈ ವೇಳೆ ಪುತ್ರ ಅಭಿಷೇಶ್ ಅಂಬರೀಷ್ ಮತ್ತಿತರಿದ್ದರು.
ಮಂಡ್ಯದಲ್ಲಿ ಬುಧವಾರ ನಡೆದ ಬಹಿರಂಗ ಸಭೆಯಲ್ಲಿ ಸುಮಲತಾ ಅವರು ಬಿಜೆಪಿಗೆ ಸೇರ್ಪಡೆಯಾಗುವುದಾಗಿ ಘೋಷಿಸಿದ್ದರು. ಈ ಹಿನ್ನೆಲೆಯಲ್ಲಿ ಇಂದು ಶುಕ್ರವಾರ ಪಕ್ಷ ಸೇರ್ಪಡೆ ಕಾರ್ಯಕ್ರಮ ನಿಗದಿಯಾಗಿದೆ.
ಬೆಂಗಳೂರಿನ ಮಲ್ಲೇಶ್ವರಂ ಬಿಜೆಪಿ ಕಚೇರಿಯಲ್ಲಿ ಶುಕ್ರವಾರ ಬೆಳಗ್ಗೆ 11:30ಕ್ಕೆ ನಡೆಯಲಿರುವ ಕಾರ್ಯಕ್ರಮದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ, ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್ ಯಡಿಯೂರಪ್ಪ, ಡಿ.ವಿ. ಸದಾನಂದ ಗೌಡ, ವಿಧಾನಸಭೆ ವಿಪಕ್ಷ ನಾಯಕ ಆರ್ ಆಶೋಕ್,  ಮಾಜಿ ಸಚಿವ ಸಿ.ಟಿ. ರವಿ ಮೊದಲಾದವರ ಸಮ್ಮುಖದಲ್ಲಿ ಸುಮಲತಾ ಅಂಬರೀಶ್ ಬಿಜೆಪಿ ಸೇರ್ಪಡೆಯಾಗಲಿದ್ದಾರೆ.
ಕಳೆದ ಬಾರಿ ಲೋಕಸಭೆ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಗೆಲುವು ಸಾಧಿಸಿದ ನಟಿ ಸುಮಲತಾ ಅಂಬರೀಶ್  ಈ ಬಾರಿ ಮಂಡ್ಯ ಕ್ಷೇತ್ರದಲ್ಲಿ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದರು. ಆದರೆ, ಜೆಡಿಎಸ್ ನೊಂದಿಗೆ ಬಿಜೆಪಿ ಮೈತ್ರಿ ಮಾಡಿಕೊಂಡಿದ್ದರಿಂದ ಮಂಡ್ಯ ಕ್ಷೇತ್ರ ಜೆಡಿಎಸ್ ಪಾಲಾಗಿದ್ದು ಮೈತ್ರಿಕೂಟದ ಅಭ್ಯರ್ಥಿಯಾಗಿ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಸ್ಪರ್ಧಿಸಿದ್ದಾರೆ. ಸುಮಲತಾ ಮಂಡ್ಯದಲ್ಲಿ ಈ ಬಾರಿ ಮೈತ್ರಿ ಅಭ್ಯರ್ಥಿಗೆ ಬೆಂಬಲ ನೀಡುತ್ತಿದ್ದಾರೆ. ಈ ಕುರಿತು ಅವರು ಸೋಷಿಯಲ್ ಮೀಡಿಯಾದಲ್ಲಿ ಸಹ ಬರೆದುಕೊಂಡಿದ್ದಾರೆ.
ಅಶ್ವಿನಿ ಪುನೀತ್‌ರಾಜಕುಮಾರ್‌ ವಿರುದ್ಧ ಅವಹೇಳನಕಾರಿ ಪೋಸ್ಟ್: ಕಾನೂನು ಕ್ರಮಕ್ಕೆ ಮುಂದಾದ ಅಪ್ಪು ಅಭಿಮಾನಿಗಳು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 × two =
Remember me
