ಬೆಂಗಳೂರು:ರಾಜ್ಯದಲ್ಲಿ ಬಿಸಿಲಿನ ತೀವ್ರತೆ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ದೇವಾಲಯಗಳಿಗೆ ಬರುವ ಭಕ್ತರಿಗೆ ಬಿಸಿಲಿನಿಂದ ಆಗುವ ತೊಂದರೆ ತಪ್ಪಿಸಲು ಮುಜರಾಯಿ ಇಲಾಖೆ ವ್ಯಾಪ್ತಿಯ ದೇವಾಲಯಗಳ ಆವರಣದಲ್ಲಿ ಪೆಂಡಾಲ್ ಹಾಕಿ, ಸೂಕ್ತ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸುವಂತೆ ದೇವಾಲಯಗಳ ಆಡಳಿತ ಮಂಡಳಿಗಳಿಗೆ ಇಲಾಖೆ ಸೂಚನೆ ನೀಡಿದೆ.
ಈ ಸಂಬಂಧ ಇಲಾಖೆ ಆಯುಕ್ತರು ಸುತ್ತೋಲೆ ಹೊರಡಿಸಿದ್ದು, ಶಾಲಾ ಮತ್ತು ಕಾಲೇಜುಗಳ ರಜೆ ಹಿನ್ನೆಲೆಯಲ್ಲಿ ‘ಶಕ್ತಿ’ ಯೋಜನೆಯನ್ನು ಬಳಸಿಕೊಂಡು ದೂರದ ಊರುಗಳಿಂದ, ಜಿಲ್ಲೆಗಳಿಂದ ಮಹಿಳೆಯರು ಮಕ್ಕಳೊಂದಿಗೆ ಹೆಚ್ಚಿನ ಸಂಖ್ಯೆಯಲ್ಲಿ ದೇವಾಲಯಗಳಿಗೆ ಆಗಮಿಸುವ ಸಾಧ್ಯತೆಯಿದೆ. ಹೊರ ರಾಜ್ಯ ಹಾಗೂ ಹೊರ ದೇಶಗಳಿಂದಲೂ ಹೆಚ್ಚಿನ ಸಂಖ್ಯೆಯಲ್ಲಿ ದೇವಾಲಯಕ್ಕೆ ಭಕ್ತರು ಆಗಮಿಸಲಿದ್ದಾರೆ. ಈ ವೇಳೆ ಅಗತ್ಯ ಸೌಲಭ್ಯ ಕಲ್ಪಿಸುವಂತೆ ತಿಳಿಸಲಾಗಿದೆ.
ಮುಜರಾಯಿ ಇಲಾಖೆ ಸಚಿವ ರಾಮಲಿಂಗಾರೆಡ್ಡಿ ನಿರ್ದೇಶನದ ಮೇರೆಗೆ, ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಗೆ ಒಳಪಡುವ ಅಧಿಸೂಚಿತ ದೇವಾಲಯಗಳಲ್ಲಿ ದೇವರ ದರ್ಶನಕ್ಕೆ ಸಾಲಿನಲ್ಲಿ ಸಾಗಲು ಹಾಗೂ ವಿಶ್ರಮಿಸಿಕೊಳ್ಳಲು ಸೂಕ್ತ ನೆರಳಿಗೆ ಪೆಂಡಾಲ್ ಹಾಗೂ ಶುದ್ಧ ಕುಡಿಯುವ ನೀರಿನ ವ್ಯವಸ್ಥೆಯನ್ನು ಕಲ್ಪಿಸಬೇಕು. ಇದಕ್ಕಾಗಿ ದಾನಿಗಳು ಮುಂದೆ ಬಂದಲ್ಲಿ ಅವರಿಗೆ ಅವಕಾಶ ಮಾಡಿಕೊಡಬೇಕು. ದಾನಿಗಳು ಬಾರದಿದ್ದಲ್ಲಿ ದೇವಾಲಯದ ನಿಧಿಯಿಂದಲೇ ಅಗತ್ಯ ವೆಚ್ಚ ಭರಿಸುವಂತೆ ಸೂಚಿಸಲಾಗಿದೆ.
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:8 − eight =
Remember me
