ಬೆಂಗಳೂರು:ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕರೊನಾ ಪ್ರಕರಣಗಳ ಸಂಖ್ಯೆ ಹೆಚ್ಚಾದ ಬೆನ್ನಲ್ಲೇ ಬೆಡ್​ ಬ್ಲಾಕಿಂಗ್​ ದಂಧೆ ಕೂಡ ಆರಂಭವಾಗಿದೆ. ಈ ವಿಚಾರವಾಗಿ ಅನೇಕ ನಾಯಕರು ಧ್ವನಿ ಎತ್ತಿದ್ದಾರೆ. ಇದೀಗ ಈ ಸಂಬಂಧ ಲೋಕಾಯುಕ್ತ ಇಲಾಖೆಯು ಸುಮೋಟೋ ಕೇಸ್​ ದಾಖಲಿಸಿಕೊಂಡಿದೆ.
ಬೆಂಗಳೂರಿನಲ್ಲಿ ಕೃತಕವಾಗಿ ಬೆಡ್ ಕೊರತೆ ಸೃಷ್ಟಿಸಲಾಗಿದೆ. ಈ ಬಗ್ಗೆ ಸಾಕಷ್ಟು ದಿನಪತ್ರಿಕೆಗಳು ಹಾಗೂ ವಿದ್ಯುನ್ಮಾನ ಮಾಧ್ಯಮಗಳು ವರದಿ ಮಾಡಿವೆ. ಈ ವರದಿ ಆಧರಿಸಿ ಲೋಕಾಯುಕ್ತ ಇಲಾಖೆ ಸುಮೋಟೋ ಕೇಸ್ ದಾಖಲಿಸಿಕೊಂಡಿದೆ. ಪ್ರಕರಣ ಸಂಬಂಧ 31 ಹಿರಿಯ ಅಧಿಕಾರಿಗಳಿಗೆ ನೊಟೀಸ್ ನೀಡಲಾಗಿದೆ.
ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ, ಬಿಬಿಎಂಪಿ ಮುಖ್ಯ ಆಯುಕ್ತ, ಆರೋಗ್ಯ ಇಲಾಖೆ ಆಯುಕ್ತರು ಸೇರಿ 31 ಮಂದಿಗೆ ನೊಟೀಸ್ ಜಾರಿ ಮಾಡಲಾಗಿದೆ. ನೊಟೀಸ್​ಗೆ ಉತ್ತರಿಸಲು ಮೂರು ವಾರಗಳ ಗಡುವು ಕೊಡಲಾಗಿದೆ. ಅವರೆಲ್ಲರು ಲೋಕಾಯುಕ್ತ ಎಡಿಜಿಪಿಗೆ ಮೂರುವಾರದೊಳಗಾಗಿ ವರದಿ ನೀಡಬೇಕು ಬೇಕು ಎಂದು ಲೋಕಾಯುಕ್ತ ನ್ಯಾಯಮೂರ್ತಿ ಪಿ.ವಿಶ್ವನಾಥ ಶೆಟ್ಟಿ ಆದೇಶ ಹೊರಡಿಸಿದ್ದಾರೆ.

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:ten + 10 =
Remember me
