ಬೆಂಗಳೂರು:ಪೂರಕ ಪೌಷ್ಠಿಕ ಆಹಾರ ಇನ್ನು ಮತ್ತಷ್ಟು ಪೌಷ್ಠಿಕಾಂಶ ಭರಿತವಾಗಲಿದೆ. ರಾಜ್ಯದ 69,899 ಅಂನವಾಡಿ ಕೇಂದ್ರಗಳ ಮೂಲಕ ಪೂರಕ ಪೌಷ್ಠಿಕ ಆಹಾರ ಸರಬರಾಜು ಮಾಡಲಾಗುತ್ತದೆ. ಈ ಅಂಗನವಾಡಿ ಮಕ್ಕಳಿಗೆ ಪಾಮೋಲಿನ್ ಬದಲು ಸೂರ್ಯಕಾಂತಿ ಎಣ್ಣೆ ಬಳಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸಚಿವ ಸಂಪುಟ ಸಭೆ ನಿರ್ಧರಿಸಿದೆ.
ಸೂರ್ಯಕಾಂತಿ ಎಣ್ಣೆ ಏಕೆ?ರಾಜ್ಯದ ಪಾಮೋಲಿನ್ ಬಳಕೆ ಬಗ್ಗೆ ಸಾಕಷ್ಟು ದೂರುಗಳು ಬಂದಿದ್ದವು. ಅಲ್ಲದೆ, ಸೂರ್ಯಕಾಂತಿ ಎಣ್ಣೆಯಲ್ಲಿ ಪಾಲಿ ಅನ್ ಸ್ಯಾಚುರೇಟೆಡ್ ್ಯಾಟಿ ಆಸಿಡ್‌ಗಳಾದ ಲಿನೋಲಿಕ್ ಆಸಿಡ್ ಮತ್ತು ಅಲ್ಪಾ ಲಿನೋಲಿಕ್ ಆಸಿಡ್‌ಗಳಿದ್ದು, ಇವು ಮಕ್ಕಳ ದೈಹಿಕ ಮತ್ತು ಬೌದ್ಧಿಕ ಬೆಳವಣಿಗೆ ಅವಶ್ಯವಾಗಿವೆ. ಆದ್ದರಿಂದ ಪಾಮ್ ಆಯಿಲ್ ಬದಲಿಗೆ ಸೂರ್ಯಕಾಂತಿ ಎಣ್ಣೆ ಉಪಯೋಗಿಸಲು ತೀರ್ಮಾನಿಸಲಾಗಿದೆ.
9.90 ಕೋಟಿ ರೂ. ಹೆಚ್ಚುವರಿ ಹೊರೆಸಮಗ್ರ ಶಿಶು ಅಭಿವೃದ್ಧಿ ಯೋಜನೆಯಡಿ ಅಂಗನವಾಡಿ ಕೇಂದ್ರಗಳ ಮೂಲಕ ಪೂರಕ ಪೌಷ್ಟಿಕ ಆಹಾರ ವಿತರಿಸಲು ಪಾಮೋಲಿನ್ ಬದಲಾಗಿ ಸೂರ್ಯಕಾಂತಿ ಎಣ್ಣೆಯನ್ನು 66.04 ಕೋಟಿ ರೂ.ಗಳ ಅಂದಾಜು ವೆಚ್ಚದಲ್ಲಿ ಟೆಂಡರ್ ಮೂಲಕ ಖರೀದಿಸಲು ನಿರ್ಧರಿಸಲಾಗಿದೆ. ಇದರಿಂದಾಗಿ, ಸರ್ಕಾರಕ್ಕೆ 9.9 ಕೋಟಿ ರೂ.ಹೆಚ್ಚುವರಿ ಹೊರೆಯಾಗಲಿದೆ ಎಂದು ಸಚಿವ ಸಂಪುಟ ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಕಾನೂನು ಸಚಿವ ಎಚ್.ಕೆ.ಪಾಟೀಲ ಈ ವಿಷಯ ತಿಳಿಸಿದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:12 − 4 =
Remember me
