
ಬೆಂಗಳೂರು:ಕಾಳಿ ನದಿಗೆ ನಿರ್ಮಿಸಿರುವ ಸೂಪಾ ಜಲಾಶಯ ಗರಿಷ್ಠ ಮಟ್ಟ ತಲುಪುತ್ತಿರುವ ಹಿನ್ನೆಲೆಯಲ್ಲಿ ಜಲಾಶಯದಿಂದ ಹೆಚ್ಚುವರಿ ನೀರು ಹೊರಬಿಡುವ ಸಾಧ್ಯತೆ ಇದ್ದು, ಸುರಕ್ಷಿತ ಸ್ಥಳಕ್ಕೆ ಹೋಗುವಂತೆ ಅಣೆಕಟ್ಟೆಯ ಕೆಳದಂಡೆಯಲ್ಲಿರುವ ಜನರಿಗೆ ಕೆಪಿಸಿಎಲ್ ಮನವಿ ಮಾಡಿದೆ.ಸೂಪಾ ಜಲಾಶಯದ ಜಲಾನಯನ ಪ್ರದೇಶಗಳಲ್ಲಿ ವ್ಯಾಪಕ ಮಳೆಯಾಗುತ್ತಿದೆ. ನೀರಿನ ಒಳಹರಿವು ಹೆಚ್ಚಾಗಿರುವುದರಿಂದ ಜಲಾಶಯದ ನೀರಿನ ಮಟ್ಟ ಸತತವಾಗಿ ಏರಿಕೆಯಾಗುತ್ತಿದೆ. ಜಲಾಶಯದ ಗರಿಷ್ಠ ಮಟ್ಟ 564 ಮೀಟರ್ ಇದ್ದು, ನೀರಿನ ಸಂಗ್ರಹಣಾ ಸಾಮರ್ಥ್ಯ 147.55 ಟಿಎಂಸಿ ಆಗಿದೆ. ಸೋಮವಾರ 558.95 ಅಡಿಗೂ ಹೆಚ್ಚು ನೀರು ನಿಂತಿದ್ದು, 126.662 ಟಿಎಂಸಿ ನೀರು ಸಂಗ್ರಹವಾಗಿದೆ. ಅಲ್ಲದೆ, ಜಲಾಶಯದ ಒಳಹರಿವು 25,954 ಕ್ಯುಸೆಕ್ ಇದೆ.ಒಳಹರಿವು ಹೀಗೆ ಮುಂದುವರಿದರೆ ಜಲಾಶಯವು ಗರಿಷ್ಠ ಮಟ್ಟ ತಲುಪುವ ಸಾಧ್ಯತೆ ಇದ್ದು, ಸುರಕ್ಷತೆ ದೃಷ್ಟಿಯಿಂದ ಹೆಚ್ಚುವರಿ ನೀರನ್ನು ಯಾವುದೇ ಸಮಯದಲ್ಲಿ ಜಲಾಶಯದಿಂದ ಹೊರಬಿಡಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದು, ಅಣೆಕಟ್ಟೆಯ ದಂಡೆಯಲ್ಲಿರುವ ಮತ್ತು ನದಿಯ ಪಾತ್ರದುದ್ದಕ್ಕೂ ಇರುವ ಸಾರ್ವಜನಿಕರು ತಮ್ಮ ಜನ, ಜಾನುವಾರು ಇತ್ಯಾದಿಗಳೊಂದಿಗೆ ಸುರಕ್ಷಿತ ಪ್ರದೇಶಕ್ಕೆ ಸ್ಥಳಾಂತರಗೊಳ್ಳಬೇಕು ಎಂದು ಕೆಪಿಸಿಎಲ್ ಮನವಿ ಮಾಡಿದೆ.ಸೂಪಾ ಅಣೆಕಟ್ಟೆಯ ಕೆಳಭಾಗದ ನದಿ ಪಾತ್ರದಲ್ಲಿ ದೋಣಿ ಸಂಚಾರ, ಮೀನುಗಾರಿಕೆ, ಜಲ ಸಾಹಸ ಕ್ರೀಡೆಗಳು ಸೇರಿದಂತೆ ಇತರೆ ಚಟುವಟಿಕೆಗಳನ್ನು ಮಳೆಗಾಲ ಮುಗಿಯುವವರೆಗೂ ನಡೆಸಬಾರದು ಎಂದು ಇದೇ ವೇಳೆ ಕೋರಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:16 + nineteen =
Remember me
