ಬೆಂಗಳೂರು:ಲೋಕಸಭಾ ಚುನಾವಣೆಯಲ್ಲಿ ಭಾರೀ ಬಹುಮತದಿಂದ ಆಳುವ ಪಕ್ಷಕ್ಕೆ ಅಧಿಕಾರ ಸಿಕ್ಕರೆ ಪತ್ರಿಕೋದ್ಯಮ ಮತ್ತು ಪ್ರಜಾಪ್ರಭುತ್ವ ವ್ಯವಸ್ಥೆ ಉಳಿಯುವುದಿಲ್ಲ. ಈ ಅಂಶಗಳನ್ನು ತಿಳಿದು ಮತದಾರರು ತಮ್ಮಹಕ್ಕು ಚಲಾಯಿಸಬೇಕೆಂದು ಹಿರಿಯ ಪತ್ರಕರ್ತ ಸುಧೀಂದ್ರ ಕುಲಕರ್ಣಿ ಎಚ್ಚರಿಸಿದರು.
ಬೆಂಗಳೂರು ನಗರ ವಿಶ್ವವಿದ್ಯಾಲಯದ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮ ವಿಭಾಗ ಹಾಗೂ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಸಹಯೋಗದಲ್ಲಿ ಶುಕ್ರವಾರ ಜ್ಞಾನಜ್ಯೋತಿ ಸಭಾಂಗಣದಲ್ಲಿ ಆಯೋಜಿಸಿದ್ದ ‘ಜನತಂತ್ರ ವ್ಯವಸ್ಥೆಯಲ್ಲಿ ಮಾಧ್ಯಮ ಮತ್ತು ಪತ್ರಕರ್ತರು’ ಎಂಬ ವಿಶೇಷ ಉಪನ್ಯಾಸ ಹಾಗೂ ಸಂವಾದದಲ್ಲಿ ಅವರು ಮಾತನಾಡಿದರು.
ದೊಡ್ಡ ಆದರ್ಶವನ್ನು ಮುಂದಿಟ್ಟುಕೊಂಡು ಜನಸಂಘವು ರಾಜಕೀಯ ಪಕ್ಷವನ್ನು ಆರಂಭಿಸಿತು. ತುರ್ತು ಪರಿಸ್ಥಿತಿ, ನಂತರದ ದಿನಗಳಲ್ಲಿ, ವಾಜಪೇಯಿ ಮತ್ತು ನರೇಂದ್ರ ಮೋದಿ ಅವಧಿಯಲ್ಲಿ ಸಾಕಷ್ಟು ಅಭಿವೃದ್ಧಿ ಕಾರ್ಯಗಳಾಗಿವೆ. ಆದರೆ, ಕಳೆದ 10 ವರ್ಷಗಳಲ್ಲಿ ವ್ಯಕ್ತಿ ಕೇಂದ್ರಿತ ರಾಜಕೀಯವು ಪ್ರಜಾಪ್ರಭುತ್ವಕ್ಕೆ ಮಾರಕವಾಗಿದೆ. ಪ್ರಜಾಪ್ರಭುತ್ವ, ಸಂವಿಧಾನದ ಆಶಯಗಳು, ಜಾತ್ಯಾತೀತತೆಗಳ ಗಮನ ನೀಡಬೇಕಿದೆ ಎಂದು ಹೇಳಿದರು.
ಕಾಂಗ್ರೆಸ್ ಪರಿಸ್ಥಿತಿಯೇ ಬಿಜೆಪಿಗೂ ಬರಲಿದೆ:
ಭ್ರಷ್ಟಾಚಾರ, ವ್ಯಕ್ತಿ ಕೇಂದ್ರಿತ ಮತ್ತು ಪರಿವಾರ ಕೇಂದ್ರಿತ ರಾಜಕಾರಣದಿಂದ ಕಾಂಗ್ರೆಸ್ ಜನ ಮಾನ್ಯತೆ ಕಳೆದುಕೊಂಡಿದೆ. ಅಲ್ಲದೆ, ಆತ್ಮಚಿಂತನೆ ಮಾಡಿಕೊಳ್ಳದಿರುವುದು ಕೂಡ ಕಾಂಗ್ರೆಸ್ ಅವನತಿಗೆ ಕಾರಣವಾಗುತ್ತಿದೆ.ಹಾಗೆಯೇ ಐಟಿ, ಇಡಿ, ಸಿಬಿಐ ಗಳನ್ನು ಈ ಹಿಂದಿನ ಸರ್ಕಾರಗಳು ಕೂಡ ದುರುಪಯೋಗ ಮಾಡಿಕೊಂಡಿವೆ. ಅದರ ಪ್ರಮಾಣ ಇಂದು ಹೆಚ್ಚಳವಾಗಿದೆ. ಪ್ರತಿ ದಿನ ದುರುಪಯೋಗ ನಡೆಯುತ್ತಿದೆ. ಈ ಹಿಂದೆ ಕಾಂಗ್ರೆಸ್ ಮಾಡಿದ ಕೆಲಸವನ್ನೇ ಇಂದು ಬಿಜೆಪಿ ಮಾಡುತ್ತಿದೆ. ಒಂದು ವೇಳೆ ಹೀಗೆ ಮುಂದುವರಿಸಿದರೆ ಇಂದಿನ ಕಾಂಗ್ರೆಸ್ ಪರಿಸ್ಥಿತಿಯೇ ಬಿಜೆಪಿಗೂ ಬರಲಿದೆ ಎಂಬ ಅಭಿಪ್ರಾಯ ವ್ಯಕ್ತಪಡಿಸಿದರು.
ವಸ್ತುನಿಷ್ಠ ಮಾಧ್ಯಮ ಮರೆ:
ಹಿರಿಯ ಪತ್ರಕರ್ತ ಅನಂತ ಚಿನಿವಾರ ಮಾತನಾಡಿ, ಮಾಧ್ಯಮಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಹೆಚ್ಚಿನ ಪತ್ರಕರ್ತರು ಮಾಡಬೇಕು ಎಂದುಕೊಂಡಿರುವ ಸುದ್ದಿ ಮತ್ತು ಮಾಡಬೇಕಾದ ಸುದ್ದಿಯ ನಡುವೆ ಇಬ್ಬಂದಿತನ ಅನುಭವಿಸುತ್ತಿದ್ದಾರೆ. ಕಳೆದ ಕೆಲವು ವರ್ಷಗಳಲ್ಲಿ ಮಾಧ್ಯಮಗಳು ಸಾಗುತ್ತಿರುವ ದಿಕ್ಕು ಎಂತಹದ್ದು ಎಂಬ ಪ್ರಶ್ನೆ ಎದ್ದಿದೆ. ಮಾಧ್ಯಮಗಳು ತಮ್ಮ ಇಷ್ಟದ, ಅನುಕೂಲ ಮತ್ತು ಯಾವುದೋ ಒತ್ತಡಕ್ಕೆ ಸಿಲುಕಿ ಬೇಕಾದ ದ್ರುವವನ್ನು ಆಯ್ಕೆ ಮಾಡಿಕೊಂಡು ಅತ್ತ ಸಾಗಿದೆ. ಇದರಿಂದ ವಸ್ತುನಿಷ್ಠ ಮಾಧ್ಯಮ ಕಡಿಮೆಯಾಗುತ್ತಿದೆ ಎಂದು ಅನಿಸಿಕೆ ವ್ಯಕ್ತಪಡಿಸಿದರು.
ಸಂವಾದದಲ್ಲಿ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು, ಬೆಂ.ನಗರ ವಿವಿ ಕುಲಪತಿ ಪ್ರೊ. ಲಿಂಗರಾಜ ಗಾಂಧಿ ಹಾಗೂ ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥ ಪ್ರೊ. ಎನ್. ನರಸಿಂಹಮೂರ್ತಿ ಉಪಸ್ಥಿತರಿದ್ದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:two × two =
Remember me
