ಬೆಂಗಳೂರು:ನ.1, ಕನ್ನಡ ರಾಜ್ಯೋತ್ಸವದಂದು ನಟ ಪುನೀತ್ ರಾಜ್​ಕುಮಾರ್ ಅವರಿಗೆ ಮರಣೋತ್ತರ ಕರ್ನಾಟಕ ರತ್ನ ಪ್ರಶಸ್ತಿ ಪ್ರಧಾನ ಕಾರ್ಯಕ್ರಮಕ್ಕೆ ಸೂಪರ್​ ಸ್ಟಾರ್ ರಜನಿಕಾಂತ್ ಆಗಮಿಸುತ್ತಿದ್ದಾರೆ. ಈ ಕಾರ್ಯಕ್ರಮದಲ್ಲಿ ಮತ್ತೋರ್ವ ನಟ ಜ್ಯೂ. ಎನ್​ಟಿಆರ್ ಭಾಗವಹಿಸುತ್ತಿದ್ದಾರೆ ಎಂದು ಕಂದಾಯ ಸಚಿವ ಆರ್. ಅಶೋಕ್ ವಿಧಾನ ಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿ ತಿಳಿಸಿದ್ದಾರೆ.
ನಟ ಪುನೀತ್ ರಾಜ್​ಕುಮಾರ್ ಕರ್ನಾಟಕ ಕಂಡಂತಹ ಅಪರೂಪದ ಕಲಾವಿದ. ಇಂದು ಅವರು ನಮ್ಮೆಲ್ಲರನ್ನು ಅಗಲಿ ಒಂದು ವರ್ಷ ಆಗಿದೆ. ರಾಜ್ಯದ ಇತಿಹಾಸದಲ್ಲಿ ಯಾರು ಪಡೆಯದಿರುವ ವ್ಯಕ್ತಿತ್ವವನ್ನು ಪುನೀತ್ ಪಡೆದಿದ್ದಾರೆ. ಅವರಿಗೆ ಗೌರವ ಕೊಡಲು ಕರ್ನಾಟಕ ರತ್ನ ಪ್ರಶಸ್ತಿ ಕೊಡುತ್ತಿದ್ದೇವೆ. ಪ್ರಶಸ್ತಿಯಲ್ಲಿ 50 ಗ್ರಾಂ.ನ ಚಿನ್ನದ ಪದಕ ಇರಲಿದೆ ಎಂದು ಹೇಳಿದರು.
ವಿಧಾನಸೌಧದ ಮುಂಭಾಗ ಪ್ರಶಸ್ತಿ ಪ್ರಧಾನ ಕಾರ್ಯಕ್ರಮ ನಡೆಯಲಿದೆ. ಈ ವೇಳೆ ಖ್ಯಾತ ಗಾಯಕ ವಿಜಯ್ ಪ್ರಕಾಶ್ ತಂಡದಿಂದ ಗಾಯನ ಕಾರ್ಯಕ್ರಮ ಜರುಗಲಿದೆ. ಪ್ರಶಸ್ತಿ ವಿತರಣಾ ಸಮಾರಂಭ ಸದಾ ಕಾಲ ನೆನಪಿನಲ್ಲಿ ಉಳಿಯುವಂತೆ ಮಾಡಲಾಗುತ್ತದೆ. ಈಗಾಗಲೇ ಕಾರ್ಯಕ್ರಮಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ, ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ, ಸೇರಿ ಹಲವರಿಗೆ ಆಹ್ವಾನ ನೀಡಲಾಗಿದೆ ಎಂದು ಹೇಳಿದರು.

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:8 − 5 =
Remember me
