ಗ್ರಾಮೀಣ ಭಾಗದ ಸಮಗ್ರ ಅಭಿವೃದ್ಧಿಯನ್ನು ಗಮನದಲ್ಲಿಟ್ಟುಕೊಂಡಿರುವ ಆಯ-ವ್ಯಯ ಇದಾಗಿದೆ. ಕೃಷಿ, ನೀರಾವರಿ, ಗ್ರಾಮೀಣ ಮೂಲಸೌಕರ್ಯ, ಗ್ರಾಮೀಣ ಕರ್ನಾಟಕದ ಶಿಕ್ಷಣ, ಆರೋಗ್ಯವನ್ನು ಗಮನದಲ್ಲಿಟ್ಟುಕೊಂಡು ಬಜೆಟ್ ರೂಪಿಸುವಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಯಶಸ್ವಿಯಾಗಿದ್ದಾರೆ. ನೀರಾವರಿಗೆ ಹೆಚ್ಚಿನ ಹಣಕಾಸು ಒದಗಿಸಿರುವುದರ ಪೂರ್ಣಫಲ ಸಿಕ್ಕುವುದು ಹಳ್ಳಿಗಳಲ್ಲಿರುವ ಕೃಷಿಕರಿಗೆ. ಅದರ ಜತೆಗೆ ಕೃಷಿಗೆ ಸಾಕಷ್ಟು ಆದ್ಯತೆ ನೀಡಿದ್ದಾರೆ. ಅವೆಲ್ಲವೂ ದೂರದೃಷ್ಠಿಯ ಯೋಜನೆಗಳಾಗಿವೆ. ಕರೊನಾ ಸಂಕಷ್ಟದಲ್ಲಿ ಅನೇಕ ಯುವಕರು ನಗರದಿಂದ ಗ್ರಾಮೀಣ ಭಾಗಕ್ಕೆ ವಲಸೆ ಹೋದರು. ಅವರಿಗೆ ಅನುಕೂಲವಾಗುವಂತೆ ಹೆಚ್ಚಿನ ನೆರವು ಕೃಷಿಗೆ ನೀಡಿರುವುದರಿಂದ ಗ್ರಾಮೀಣ ಭಾಗದಲ್ಲಿ ಉತ್ಪಾದಕತೆ ಹೆಚ್ಚಾಗಿ ಆರ್ಥಿಕ ಚಟುವಟಿಕೆಗಳು ಜಾಸ್ತಿಯಾಗುತ್ತವೆ. ಗ್ರಾಮೀಣ ಭಾಗದಲ್ಲಿ ರಸ್ತೆಗಳಿಗೆ ಹೆಚ್ಚಿನ ಹಣಕಾಸಿನ ನೆರವನ್ನು ಬೊಮ್ಮಾಯಿ ಆಯವ್ಯಯದಲ್ಲಿ ಒದಗಿಸಿದ್ದಾರೆ. ಇದರಿಂದ ಕೃಷಿ ಉತ್ಪನ್ನಗಳನ್ನು ಮಾರುಕಟ್ಟೆಗೆ ಸಾಗಿಸಲು ಅನುಕೂಲವಾಗುತ್ತದೆ. ಅದರಿಂದ ಬೇರೆ ಬೇರೆ ಚಟುವಟಿಕೆಗಳಿಗೆ ಪ್ರೋತ್ಸಾಹ ಸಿಕ್ಕಂತೆ ಆಗುತ್ತದೆ. ಇದೊಂದು ಒಳ್ಳೆಯ ಉಪಕ್ರಮವೇ ಆಗಿದೆ. ಶಾಲೆಗಳ ಅಭಿವೃದ್ಧಿಗೆ ಆದ್ಯತೆ ನೀಡಲಾಗಿದೆ. ಇದರಿಂದ ಗ್ರಾಮೀಣ ಭಾಗದ ಮಕ್ಕಳಿಗೂ ಉತ್ತಮ ಶಿಕ್ಷಣ ಸಿಕ್ಕುತ್ತದೆ. ನಮ್ಮ ಕ್ಲಿನಿಕ್ ಹಾಗೂ ಆರೋಗ್ಯ ಕ್ಷೇತ್ರಕ್ಕೆ ನೀಡಿರುವ ಆದ್ಯತೆ ಅದರಲ್ಲೂ ಯಶಸ್ವಿನಿ ಯೋಜನೆ ಮರು ಜಾರಿಯಿಂದಾಗಿ ಗ್ರಾಮೀಣ ಭಾಗದವರಿಗೆ ಆರೋಗ್ಯ ಕಾಪಾಡಿಕೊಳ್ಳಲು ಸಹಕಾರಿಯಾಗುತ್ತದೆ. ಆ ನಿಟ್ಟಿನಲ್ಲಿ ಬೊಮ್ಮಾಯಿ ಅವರ ಆಲೋಚನೆ ಸ್ವಾಗತರ್ಹವಾಗಿದೆ.
ಜಲಜೀವನ ಮಿಷನ್ ವಿಸ್ತರಣೆಯಿಂದ ಗ್ರಾಮೀಣ ಜನರಿಗೆ ಕುಡಿಯುವ ಶುದ್ಧ ನೀರು ಸಿಕ್ಕುತ್ತದೆ. ಹಾಲು ಉತ್ಪಾದಕರ ಆದಾಯ ಹೆಚ್ಚಿಸುವ ಪ್ರಯತ್ನ ಮಾಡಲಾಗಿದೆ. ಹೈನೋದ್ಯಮ ವನ್ನು ಅವಲಂಬಿಸಿದ ರೈತರಿಗೆ ಇದರಿಂದ ಅನುಕೂಲವಾಗುತ್ತದೆ. ಮೀನುಗಾರಿಕೆಗೆ ಪ್ರೋತ್ಸಾಹ ಇರುವುದು ಅದರ ಅವಲಂಬನೆ ಇರುವವರಿಗೆ ಅನುಕೂಲವಾಗಿದೆ. ಪರಿಶಿಷ್ಟರು, ಹಿಂದುಳಿದವರು ಸೇರಿ ದುರ್ಬಲ ವರ್ಗಗಳಿರುವುದು ಗ್ರಾಮೀಣ ಭಾಗದಲ್ಲಿಯೇ ಆ ವರ್ಗಗಳನ್ನು ಬೊಮ್ಮಾಯಿ ಮರೆತಿಲ್ಲ. ಅವರೆಲ್ಲರ ಅಭ್ಯುದಯಕ್ಕೆ ಯೋಜನೆಗಳ ಜತೆಗೆ ಕೆಲವೊಂದು ಪಿಂಚಣಿ ಹೆಚ್ಚಳ ಮಾಡಿರುವುದು ಸ್ವಲ್ಪ ಮಟ್ಟಿನ ಅನುಕೂಲವಾಗಿದೆ. ಕೆಲವು ಕ್ಲಸ್ಟರ್​ಗಳ ಅಭಿವೃದ್ಧಿ, ಕೈಗಾರಿಕಾ ಕಾರಿಡಾರ್​ಗಳಿಂದಾಗಿ ಆ ಭಾಗದ ಗ್ರಾಮೀಣ ಜನರಿಗೆ ಉದ್ಯೋಗದ ಅವಕಾಶಗಳು ಲಬ್ಯವಾಗುತ್ತವೆ. ಇತ್ತೀಚಿನ ದಿನಗಳಲ್ಲಿ ಕಡಿಮೆಯಾಗುತ್ತಿರುವ ರೇಷ್ಮೆಗೆ ನೀಡುತ್ತಿರುವ ಪ್ರೋತ್ಸಾಹದಿಂದ ಗ್ರಾಮೀಣ ಭಾಗದಲ್ಲಿ ರೈತರ ಆರ್ಥಿಕ ಚಟುವಟಿಕೆಗಳು ಹೆಚ್ಚಾಗುತ್ತವೆ. ಮಹಿಳೆಯರನ್ನು ಸರ್ಕಾರ ಮರೆತಿಲ್ಲ. ಮಹಿಳಾ ಸ್ವಸಹಾಯ ಸಂಘಗಳನ್ನು ಪ್ರೋತ್ಸಾಹಿಸಲಾಗುತ್ತಿದೆ. ಸರ್ಕಾರ ಮುಖ್ಯವಾಗಿ ಅಪೌಷ್ಠಿಕತೆ ನಿವಾರಣೆಗೆ ಕೈಗೊಂಡಿರುವ ಕ್ರಮಗಳಿಂದ ಗ್ರಾಮೀಣ ಭಾಗದಲ್ಲಿ ಅಪೌಷ್ಠಿಕತೆಯಿಂದ ಬಳಲುತ್ತಿರುವ ಮಕ್ಕಳಿಗೆ ಅನುಕೂಲವಾಗುತ್ತದೆ. ಒಟ್ಟಾರೆ ಎಲ್ಲ ವರ್ಗಗಳನ್ನು ಸಮಾಧಾನ ಮಾಡುವ ರೀತಿಯಲ್ಲಿ ಬಜೆಟ್ ರೂಪುಗೊಂಡಿದೆ. ಗ್ರಾಮೀಣ ಅಭಿವೃದ್ಧಿಯ ಯೋಜನೆಗಳನ್ನು ಅಧಿಕಾರಿಗಳು ಪ್ರಾಮಾಣಿಕವಾಗಿ ಜಾರಿ ಮಾಡಬೇಕು ಅಷ್ಟೇ.
ರಾಯರ ಸನ್ನಿಧಿಯಲ್ಲಿ ನಟ ಸುದೀಪ್​; ಶ್ರೀಸುಬುಧೇಂದ್ರ ತೀರ್ಥರಿಂದ ಸನ್ಮಾನ..
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:nineteen − ten =
Remember me
