
ಬೆಂಗಳೂರು:ದಾಖಲೆಯ 15ನೇ ಬಜೆಟ್ ಮಂಡಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಮಂಡಿಸಿದ್ದ ಐತಿಹಾಸಿಕ 15ನೇ ಬಜೆಟ್ ಕುರಿತಂತೆ ಯಶವಂತಪುರ ಬಿಜೆಪಿ ಶಾಸಕ ಎಸ್.ಟಿ.ಸೋಮಶೇಖರ್ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಇದನ್ನೂ ಓದಿ:ಡಿ.ಕೆ ಶಿವಕುಮಾರ್​ ಇಲಾಖೆಗೂ ಅನ್ಯಾಯ ಮಾಡಿದ ಸಿಎಂ ಸಿದ್ದರಾಮಯ್ಯ:​ ಯಡಿಯೂರಪ್ಪ
ನನ್ನ ಕ್ಷೇತ್ರಕ್ಕೆ ಕುಡಿಯುವ ನೀರು, ಘನತ್ಯಾಜ್ಯ ಸಮಸ್ಯೆ ಬಹೆಹರಿಸಿದ್ದಾರೆ. 110 ಹಳ್ಳಿಗಳಿಗೆ ಇದರಿಂದ ಅನುಕೂಲ ಆಗಲಿದೆ, ನಾನು ಶಾಸಕನಾಗಿ ನನ್ನ‌ ಕ್ಷೇತ್ರದ ಬಗ್ಗೆ ಮಾತನಾಡುತ್ತೇನೆ ಎಂದಿದ್ದಾರೆ. ಬೇರೆ ಶಾಸಕರ ಹೇಳಿಕೆಗಳು ನನಗೆ ಬೇಕಿಲ್ಲ. ಬೆಂಗಳೂರು ಅಭಿವೃದ್ಧಿಗೆ ಪೂರಕವಾದ ಬಜೆಟ್ ಇದು, ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಶಿವಕುಮಾರ್​ ಅವರಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದಿದ್ದಾರೆ.
ಬೆಂಗಳೂರಿಗೆ ಸಂಬಂಧಿಸಿ ಬಗ್ಗೆ ಮಾತ್ರ ಮಾತನಾಡುತ್ತೇನೆ. ಕುಡಿಯುವ ನೀರು, ಕಸ ವಿಲೇವಾರ, ಟ್ರಾಫಿಕ್, ವೈಟ್ ಟ್ಯಾಪಿಂಗ್, ಫ್ಲೈ ಓವರ್ ಅಭಿವೃದ್ಧಿಗೆ ಹೆಚ್ಚು ಒತ್ತು ನೀಡಿದ್ದಾರೆ ಇನ್ನು ಪೂರ್ಣ ಪ್ರಮಾಣದ ಬಜೆಟ್ ನೋಡಿಲ್ಲ. ಬಜೆಟ್ ವಿರೋಧ ಮಾಡುವವರಿಗೆ ನಾನು ಏನೂ ಹೇಳುವುದಿಲ್ಲ. ಟೀಕೆ ಮಾಡುವುದು ಅವರ ವೈಯಕ್ತಿಕ ವಿಚಾರ. ಅದರ ಬಗ್ಗೆ ನಾನು ಕಮೆಂಟ್ ಮಾಡುವುದಿಲ್ಲ ಎಂದು ಹೇಳಿದ್ದಾರೆ.
15ನೇ ಬಜೆಟ್​ ಮಂಡಿಸಿದ ಸಿಎಂ ಸಿದ್ದರಾಮಯ್ಯ ವಿರುದ್ಧ ಎಲ್ಲಾ ಬಿಜೆಪಿ ಹಾಗೂ ಜೆಡಿಎಸ್​ ನಾಯಕರು “ಅಡ್ಡಕಸುಬಿ” ಬಜೆಟ್‌ನಂತೆ ಕಾಣುತ್ತಿದೆ. ಇದರಲ್ಲಿ ಅರ್ಥಶಾಸ್ತ್ರವೂ ಇಲ್ಲ, ಅಭಿವೃದ್ಧಿಯೂ ಇಲ್ಲ, ದೂರದೃಷ್ಟಿಯೂ ಎಂದು ಟೀಕಿಸುತ್ತಿರುವಾಗ ಸೋಮಶೇಖರ್ ಮಾತ್ರ ಅಭಿನಂದನೆ ತಿಳಿಸಿದ್ದು ಅಚ್ಚರಿಗೆ ಕಾರಣವಾಗಿದೆ.
ಈಗಾಗಲೇ ಶಾಸಕ ಸೋಮಶೇಖರ್ ಅವರು ಪಕ್ಷದ ಕಾರ್ಯಚಟುವಟಿಕೆಗಳಿಂದ ದೂರು ಉಳಿದಿದ್ದು, ಕಾಂಗ್ರೆಸ್ ಸರ್ಕಾರ ಪರ ಬ್ಯಾಟಿಂಗ್ ಮಾಡುತ್ತಿದ್ದಾರೆ. ಲೋಕಸಭೆ ಚುನಾವಣೆ ದಿನಗಣನೆ ಶುರುವಾಗಿದೆ. ಈ ವೇಳೆ ಸೋಮಶೇಖರ್ ಅವರಿಂದ ಇಂತಹ ಹೇಳಿಕೆಗಳು, ಅವರ ನಡೆ ಬಿಜೆಪಿ ನಾಯಕರಿಗೆ ದೊಡ್ಡ ತಲೆ ನೋವಾಗಿದೆ.

ಟೆಸ್ಟ್ ಕ್ರಿಕೆಟ್​​ನಲ್ಲಿ 500 ವಿಕೆಟ್ ಪಡೆದ ಸ್ಪಿನ್​ ಮಾಂತ್ರಿಕ ಆರ್​.ಅಶ್ವಿನ್!
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:seventeen + 7 =
Remember me
