ನವದೆಹಲಿ:ಕರ್ನಾಟಕದ ಬಳ್ಳಾರಿ, ಚಿತ್ರದುರ್ಗ ಮತ್ತು ತುಮಕೂರು ಜಿಲ್ಲೆಗಳ ಗಣಿಗಳಿಂದ ಅಗೆದ ಕಬ್ಬಿಣದ ಅದಿರನ್ನು ಕೇಂದ್ರ ಸರ್ಕಾರದ ನಿಯಮಗಳಿಗೆ ಅನುಗುಣವಾಗಿ ರಫ್ತು ಮಾಡಲು ಗಣಿಗಾರಿಕೆ ಸಂಸ್ಥೆಗಳಿಗೆ ಸುಪ್ರೀಂಕೋರ್ಟ್ ಅನುಮತಿ ನೀಡಿದೆ. ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಎನ್.ವಿ.ರಮಣ, ನ್ಯಾ.ಕೃಷ್ಣ ಮುರಾರಿ, ನ್ಯಾ.ಹಿಮಾ ಕೊಹ್ಲಿ ಒಳಗೊಂಡ ತ್ರಿಸದಸ್ಯ ನ್ಯಾಯಪೀಠ, ಕೇಂದ್ರ ಸರ್ಕಾರದ ನಿಲುವನ್ನು ಗಮನಿಸಿ ಕಬ್ಬಿಣದ ಅದಿರು ರಫ್ತು ಮೇಲಿನ ನಿರ್ಬಂಧವನ್ನು ತೆಗೆದುಹಾಕಿದೆ. ಅಧಿಕಾರಿಗಳು ವಿಧಿಸಿರುವ ಷರತ್ತುಗಳನ್ನು ಗಮನಿಸುವಂತೆ ಸಂಸ್ಥೆಗಳಿಗೆ ಸೂಚಿಸಿತು. ಕರ್ನಾಟಕದ 3 ಜಿಲ್ಲೆಗಳಲ್ಲಿ ಈಗಾಗಲೆ ಅಗೆದು ದಾಸ್ತಾನು ಮಾಡಿದ ಕಬ್ಬಿಣದ ಅದಿರನ್ನು ಮಾರಾಟ ಮಾಡಲು ಅನುಮತಿ ನೀಡುತ್ತೇವೆ ಎಂದ ನ್ಯಾಯಪೀಠ, ಇ-ಹರಾಜನ್ನು ಆಶ್ರಯಿಸದೆ ನೇರ ಒಪ್ಪಂದಗಳನ್ನು ಮಾಡಿಕೊಳ್ಳುವ ಮೂಲಕ ಅದಿರು ಹಂಚಿಕೆ ಮಾಡಬಹುದು. ಈ ಮೂಲಕ ರಾಜ್ಯದಲ್ಲಿರುವ ಅದಿರನ್ನು ವಿದೇಶಗಳಿಗೆ ರಫ್ತು ಮಾಡಬಹುದು ಎಂದು ನ್ಯಾಯಪೀಠ ತನ್ನ ತೀರ್ಪಿನಲ್ಲಿ ತಿಳಿಸಿದೆ. ಕರ್ನಾಟಕದಲ್ಲಿನ ಗಣಿಗಳು ದೇಶದ ಇತರ ಗಣಿಗಳ ಜತೆಗೆ ಸ್ಪರ್ಧಾತ್ಮಕತೆ ಕಾಪಾಡಬೇಕು ಎಂಬ ಕೇಂದ್ರ ಸರ್ಕಾರದ ನಿಲುವಿಗೆ ಸಹಮತವಿದೆ. 3 ಜಿಲ್ಲೆಗಳಲ್ಲಿ ಕಬ್ಬಿಣದ ಅದಿರಿಗಾಗಿ ಜಾರಿಗೆ ತಂದಿರುವ ವ್ಯವಸ್ಥೆಯನ್ನು ಮರು ಪರಿಶೀಲಿಸುವ ಸಮಯ ಬಂದಿದೆ. ಅಂದಿನಿಂದ ಇ-ಹರಾಜು ಮಾತ್ರ ಕಂಪನಿಗಳಿಗೆ ಆಯ್ಕೆಯಾಗಿತ್ತು. ಆದರೆ ಪರಿಸ್ಥಿತಿ ಈಗ ಸುಧಾರಿಸಿದೆ. ಪರಿಸರ ಹಾನಿ ತಡೆಗಟ್ಟುವಿಕೆ ಸಂಬಂಧಿಸಿ 2011ರ ಆದೇಶವನ್ನು ಸಡಿಲಿಸುವುದು ಸೂಕ್ತ. ಇ-ಹರಾಜುಗಳಿಗೆ ಸೂಕ್ತ ಪ್ರತಿಕ್ರಿಯೆ ಬರುತ್ತಿಲ್ಲ. ಈ ಎಲ್ಲಾ ಪರಿಸ್ಥಿತಿಗಳನ್ನು ಗಮನಿಸಿ, ಅದಿರು ಮಾರಾಟ ಮತ್ತು ಬೆಲೆಗಳ ಮೇಲಿನ ನಿರ್ಬಂಧ ತೆಗೆದುಹಾಕುವ ಅಗತ್ಯವಿದೆ ಎಂದು ನ್ಯಾಯಪೀಠ ಅಭಿಪ್ರಾಯಪಟ್ಟಿದೆ.
ಎಸ್​ಐಟಿ ಅವಧಿ ವಿಸ್ತರಣೆ:ಅಕ್ರಮ ಗಣಿಗಾರಿಕೆಗಳ ಶೋಧಕ್ಕೆ ನೇಮಕವಾದ ವಿಶೇಷ ತನಿಖಾ ತಂಡ (ಎಸ್​ಐಟಿ)ದ ಕಾರ್ಯಾವಧಿಯನ್ನು ಮತ್ತೆ ಐದು ತಿಂಗಳು ವಿಸ್ತರಣೆಯಾಗಿದೆ. ವಿಧಾನಸೌಧದಲ್ಲಿ ಶುಕ್ರವಾರ ನಡೆದ ಸಚಿವ ಸಂಪುಟ ಉಪಸಮಿತಿ ಸಭೆಯಲ್ಲಿ ಈ ನಿರ್ಧಾರ ಕೈಗೊಂಡಿದ್ದು, ಮುಂದಿನ ಐದು ತಿಂಗಳೊಳಗೆ ಸಂಪೂರ್ಣ ವರದಿ ಸಲ್ಲಿಸಲೇಬೇಕು ಎಂದು ಲೋಕಾಯುಕ್ತ ಸಂಸ್ಥೆಯಲ್ಲಿ ಅಸ್ತಿತ್ವದಲ್ಲಿರುವ ಎಸ್​ಐಟಿಗೆ ತಾಕೀತು ಮಾಡಲಾಗಿದೆ.
ಬಳ್ಳಾರಿ, ಚಿತ್ರದುರ್ಗ, ತುಮಕೂರು ಸೇರಿ ವಿವಿಧೆಡೆ ಅಕ್ರಮ ಗಣಿಗಾರಿಕೆಗಳ ಕುರಿತು ಕಳೆದ ಏಳು ವರ್ಷಗಳಿಂದ ಎಸ್​ಐಟಿ ತನಿಖೆ ನಡೆಸುತ್ತಲಿದ್ದು, ವಿವಿಧ ಕಾರಣಗಳಿಗಾಗಿ ಅವಧಿ ಪದೇ ಪದೆ ಮುಂದುವರಿಸಲಾಗಿದೆ. ನಿಗದಿತ ಗಡುವಿನೊಳಗೆ ತನಿಖೆ ಪೂರ್ಣಗೊಳಿಸಲೇಬೇಕು ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವರೂ ಆದ ಸಂಪುಟ ಉಪಸಮಿತಿ ಅಧ್ಯಕ್ಷ ಜೆ.ಸಿ.ಮಾಧುಸ್ವಾಮಿ ಸೂಚಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ತನಿಖಾ ಹಂತದಲ್ಲಿ ಇಲಾಖೆಗಳ ಪರಸ್ಪರ ನಿಂದನೆ ಬೇಡ. ಐದು ತಿಂಗಳಲ್ಲಿ ಎಲ್ಲ ಮುಗಿಸಿ ಎಸ್​ಐಟಿ ಕ್ಲೋಸ್ ಮಾಡಲೇಬೇಕು ಎಂದು ಎಸ್​ಐಟಿಗೆ ಜೆ.ಸಿ. ಮಾಧುಸ್ವಾಮಿ ಸ್ಪಷ್ಟ ಸೂಚನೆ ನೀಡಿದರು ಎನ್ನಲಾಗಿದೆ.
ಕೆನಡಾದಲ್ಲಿ ಕನ್ನಡ ಮಾತು: ಚಂದ್ರ ಆರ್ಯರಿಗೆ ಭಾರಿ ಬೆಂಬಲ; ಹಿಂಬಾಲಕರ ಸಂಖ್ಯೆಯಲ್ಲಿ ಹೆಚ್ಚಳ…

ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ…
Sign in to your account
Please enter an answer in digits:nine − 4 =
Remember me
