ನವದೆಹಲಿ:ಇತರೆ ಹಿಂದುಳಿದ ವರ್ಗಗಳ ಅಡಿಯಲ್ಲಿ ಮುಸ್ಲಿಮರಿಗೆ ನೀಡಲಾಗಿದ್ದ ಶೇ.4ರಷ್ಟು ಮೀಸಲಾತಿಯನ್ನು ರದ್ದುಪಡಿಸಿ ಆರ್ಥಿಕ ಹಿಂದುಳಿದ ವರ್ಗ(EWS)ಗಳಿಗೆ ಸೇರಿಸಿದ ಕುರಿತು ನ್ಯಾಯಾಲಯಕ್ಕೆ ಉತ್ತರಿಸಲು ಕರ್ನಾಟಕ ಸರ್ಕಾರ ಕಾಲಾವಕಾಶ ಕೋರಿದೆ.
ಮೀಸಲಾತಿ ರದ್ದು ಮಾಡಿರುವುದನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಯನ್ನು ನ್ಯಾಯಾಲಯ ಏಪ್ರಿಲ್ 13ರಂದು ವಿಚಾರಣೆ ನಡೆಸಿತ್ತು. ಮುಂದಿನ ವಿಚಾರಣೆಯನ್ನು ಏಪ್ರಿಲ್​ 18ಕ್ಕೆ ಮುಂದೂಡಿತ್ತು.
ಮಂಗಳವಾರ ಅರ್ಜಿ ವಿಚಾರಣೆಯನ್ನು ಮುಂದರುವರೆಸಿದ ನ್ಯಾಯಮೂರ್ತಿ ಕೆ.ಎಂ. ಜೋಸೆಫ್​ ಹಾಗೂ ಬಿ.ವಿ. ನಾಗರತ್ನ ಅವರಿದ್ದ ದ್ವಿಸದಸ್ಯ ಪೀಠವು ಸಾಲಿಸಿಟರ್​ ಜನರಲ್​ ತುಷಾರ್​ ಮೆಹ್ತಾ ಅವರ ಮನವಿ ಮೇರೆಗೆ ವಿಚಾರಣೆಯನ್ನು ಏಪ್ರಿಲ್​​ 15ಕ್ಕೆ ಮುಂದೂಡಿತ್ತು.
ಇದನ್ನೂ ಓದಿ:ಮುಸ್ಲಿಮರ ಮೀಸಲಾತಿ ರದ್ದು; ಕರ್ನಾಟಕ ಸರ್ಕಾರದ ನಿರ್ಧಾರಕ್ಕೆ ಸುಪ್ರೀಂ ಕೋರ್ಟ್​ ಗರಂ
ಇದಕ್ಕೆ ಪ್ರತಿಕ್ರಿಯಿಸಿದ ಅರ್ಜಿದಾರರ ಪರ ವಖೀಲರಾದ ಕಪಿಲ್​ ಸಿಬಲ್​ ವಾರಾಂತ್ಯದೊಳಗೆ ಕರ್ನಾಟಕ ಸರ್ಕಾರ ಉತ್ತರ ನೀಡಿದ್ದಲ್ಲಿ ಮುಂದಿನ ವಿಚಾರಣೆ ವೇಳೆ ನಾವು ಆಕ್ಷೇಪ ಸಲ್ಲಿಸಲು ಅನುಕೂಲವಾಗುತ್ತದೆ ಎಂದು ಪ್ರತಿಕ್ರಿಯಿಸಿದ್ದರು.
ವಾದ-ಪ್ರತಿವಾದವನ್ನು ಆಲಿಸಿದ ನ್ಯಾಯಪೀಠವು ಅರ್ಜಿ ವಿಚಾರಣೆಯನ್ನು ಏಪ್ರಿಲ್​ 25ಕ್ಕೆ ಮುಂದೂಡಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 + 12 =
Remember me
