ನವದೆಹಲಿ:ರಸ್ತೆ ತಡೆದು ಪ್ರತಿಭಟನೆ ನಡೆಸಿ ಸಾರ್ವಜನಿಕರಿಗೆ ತೊಂದರೆ ನೀಡಿದ ಆರೋಪಕ್ಕೆ ಸಂಬಂಧಿಸಿ ಕರ್ನಾಟಕ ಹೈಕೋರ್ಟ್ ವಿಧಿಸಿರುವ 10 ಸಾವಿರ ರೂ. ದಂಡವನ್ನು ಪ್ರಶ್ನಿಸಿ ಮತ್ತು ಎಫ್​ಐಆರ್​​ ರದ್ದತಿ ಕೋರಿ ಸಿಎಂ ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ನಾಯಕರು ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಇಂದು ಸೋಮವಾರ ನಡೆಸಿದೆ.
ಇದೇ ವೇಳೆ, ಮುಂದಿನ ಆದೇಶದವರೆಗೆ ಸಿದ್ದರಾಮಯ್ಯ ವಿರುದ್ಧದದ ಕ್ರಿಮಿನಲ್ ವಿಚಾರಣೆಗೆ ತಡೆ ನೀಡಿ ಸುಪ್ರೀಂ ಕೋರ್ಟ್ ಆದೇಶ ನೀಡಿದೆ. ಆದರೆ, ಆರು ವಾರಗಳ ಒಳಗಾಗಿ ಪ್ರತಿಕ್ರಿಯೆ ನೀಡುವಂತೆ ಸರ್ವೋಚ್ಚ ನ್ಯಾಯಾಲಯ ಸೂಚನೆ ನೀಡಿದೆ.
ರಸ್ತೆ ತಡೆದು ಪ್ರತಿಭಟನೆ ನಡೆಸಿ ಸಾರ್ವಜನಿಕರಿಗೆ ತೊಂದರೆ ನೀಡಿದ ಆರೋಪಕ್ಕೆ ಸಂಬಂಧಿಸಿ ಸಿಎಂ ಸಿದ್ದರಾಮಯ್ಯ ವಿರುದ್ಧದ ಎಫ್​ಐಆರ್ ರದ್ದು ಮಾಡಬೇಕೆಂದು ಕೋರಿ ಸುಪ್ರೀಂ ಕೋರ್ಟ್​​ನಲ್ಲಿ ಕೆಲವು ದಿನಗಳ ಹಿಂದೆ ಅರ್ಜಿ ಸಲ್ಲಿಕೆ ಮಾಡಲಾಗಿತ್ತು. ಪ್ರಕರಣಕ್ಕೆ ಸಂಬಂಧಿಸಿ ಕರ್ನಾಟಕ ಹೈಕೋರ್ಟ್ 10 ಸಾವಿರ ರೂ. ದಂಡ ವಿಧಿಸಿರುವುದನ್ನು ಕೂಡ ಸರ್ವೋಚ್ಚ ನ್ಯಾಯಾಲಯದಲ್ಲಿ ಪ್ರಶ್ನಿಸಲಾಗಿತ್ತು.
ಮುಖ್ಯಮಂತ್ರಿ ಸಿದ್ದರಾಮಯ್ಯ ಪರ ಹಿರಿಯ ವಕೀಲ ಕಪಿಲ್ ಸಿಬಲ್ ಹಾಗೂ ಕಾಂಗ್ರೆಸ್ ನಾಯಕರ ಪರ ಅಭಿಷೇಕ್ ಮನುಸಿಂಘ್ವಿ ವಾದ ಮಂಡನೆ ಮಾಡಿದರು.
ವಿಚಾರಣೆ ವೇಳೆ ನ್ಯಾಯಪೀಠವು, ರಾಜಕೀಯ ಪಕ್ಷಗಳ ಪ್ರತಿಭಟನೆ ಎಂದ ಕೂಡಲೆ ಕೇಸ್ ವಜಾ ಮಾಡಬೇಕೇ, ನೀವು ಪ್ರತಿಭಟನೆಗೆ ಅನುಮತಿ ಪಡೆದಿದಿದ್ದಿರೇ ಎಂದು ಪ್ರಶ್ನಿಸಿದೆ. ಇದಕ್ಕೆ ಉತ್ತರಿಸಿದ ವಕೀಲ ಸಿಬಲ್, ಪ್ರತಿಭಟಿಸುವುದು ಮೂಲಭೂತ ಹಕ್ಕು. ಪ್ರತಿಭಟಿಸುವುದು ಅಪರಾಧವಲ್ಲ ಎಂದು ವಾದ ಮಂಡಿಸಿದ್ದಾರೆ.
ಕರಾವಳಿ ಕರ್ನಾಟಕದ ಜನಪ್ರಿಯ ಕಥೆಗಾರ ಕೆ.ಟಿ.ಗಟ್ಟಿ ನಿಧನ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four × 5 =
Remember me
