ನವದೆಹಲಿ:2016ರಲ್ಲಿ ಕೇಂದ್ರ ಸರ್ಕಾರ 500 ಮತ್ತು 1000 ರೂಪಾಯಿ ಮುಖಬೆಲೆಯ ನೋಟುಗಳನ್ನು ಅಮಾನ್ಯಗೊಳಿಸಿ ಅಚ್ಚರಿಯ ನಡೆ ಇಟ್ಟಿದ್ದರು. ಈ ಬಗ್ಗೆ ಅನೇಕರು ವಿರೋಧ ವ್ಯಕ್ತಪಡಿಸಿದ್ದರು. ಈ ಹಿನ್ನೆಲೆಯಲ್ಲಿ ಪ್ರಕರಣ ಸುಪ್ರೀಂ ಮೆಟ್ಟಿಲೇರಿತ್ತು. ಇದೀಗ ಪ್ರಕರಣದ ಬಗ್ಗೆ ನಿರ್ಣಯವನ್ನು ತಳೆದಿರುವ ಸುಪ್ರೀಂ ಕೋರ್ಟ್​ ಕೇಂದ್ರ ಸರ್ಕಾರದ ನಿರ್ಧಾರವನ್ನು ಎತ್ತಿ ಹಿಡಿದಿದೆ.
ಪ್ರಕರಣವನ್ನು ಅಧ್ಯಯನ ಮಾಡಿದ ಐವರು ನ್ಯಾಯಾಧೀಶರ ಪೀಠ, ಕೇಂದ್ರದ ನೋಟು ಅಮಾನ್ಯೀಕರಣದ ನಿರ್ಧಾರವನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗಳನ್ನು ವಜಾಗೊಳಿಸಿದೆ. 500 ಮತ್ತು 1000ರೂ. ಕರೆನ್ಸಿ ನೋಟುಗಳ ನಿಷೇಧ ಸರ್ಕಾರದ ಆರ್ಥಿಕ ನೀತಿಯಾಗಿರುವುದರಿಂದ ಆ ನಿರ್ಧಾರವನ್ನು ವಾಪಾಸ್​ ತೆಗೆದುಕೊಳ್ಳಲು ಸಾಧ್ಯ ಆಗುವುದಿಲ್ಲ ಎಂದು ಸುಪ್ರೀಂ ಕೋರ್ಟ್​ ಹೇಳಿದೆ.
‘ನೋಟು ಅಮಾನ್ಯೀಕರಣಕ್ಕೂ ಮುನ್ನ ಕೇಂದ್ರ ಮತ್ತು ಆರ್‌ಬಿಐ ನಡುವೆ ಸಮಾಲೋಚನೆ ನಡೆದಿತ್ತು. ಅಂತಹ ಕ್ರಮವನ್ನು ಕಾರ್ಯರೂಪಕ್ಕೆ ತರಲು ಅಗತ್ಯವಾದ ಮಾಹಿತಿ ವಿನಿಮಯ ನಡೆದಿದೆ. ಹಾಗೂ ನೋಟು ಅಮಾನ್ಯೀಕರಣ ದೇಶದ ಆರ್ಥಿಕತೆಗೆ ಪರಿಣಾಮ ಬೀರಲಿಲ್ಲ ಎಂದು ನಾವು ನಂಬುತ್ತೇವೆ’ ಎಂದು ಸುಪ್ರೀಂ ಕೋರ್ಟ್ ಹೇಳಿದೆ.
ಸುಪ್ರೀಂ ಕೋರ್ಟ್​ 2016ರ ನೋಟು ಅಮಾನ್ಯೀಕರಣವನ್ನು ಎತ್ತಿ ಹಿಡಿದಿದ್ದು ನೋಟು ಅಮಾನ್ಯೀಕರಣವನ್ನು ಜಾರಿಗೆ ತರಲು ಆರ್‌ಬಿಐಗೆ ಯಾವುದೇ ಸ್ವತಂತ್ರ ಅಧಿಕಾರವಿಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಕೇಂದ್ರ ಮತ್ತು ಆರ್‌ಬಿಐ ನಡುವಿನ ಸಮಾಲೋಚನೆಯ ನಂತರವೇ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಎಂದು ಸುಪ್ರೀಂ ಕೋರ್ಟ್​ ಹೇಳಿದೆ.
ಆದರೆ ಸುಪ್ರೀಂ ಕೋರ್ಟ್​ ನ್ಯಾಯಾಧೀಶರ ಬಹುಮತಕ್ಕೆ ವಿರುದ್ಧವಾಗಿ ನ್ಯಾಯಮೂರ್ತಿ ಬಿ.ವಿ ನಾಗರತ್ನಾ ಅಭಿಪ್ರಾಯ ಹೊಂದಿದ್ದು ಭಿನ್ನ ತೀರ್ಪು ಬರೆದಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 × three =
Remember me
