ನವದೆಹಲಿ:ಈ ಹಿಂದೆ ರಾಜ್ಯ ರಾಜಕಾರಣದಲ್ಲಿ ಭಾರೀ ಗದ್ದಲವನ್ನುಂಟು ಮಾಡಿದ್ದ ಡಿವೈಎಸ್​ಪಿ ಎಂ.ಕೆ. ಗಣಪತಿ ಅವರ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್​ ಇಂಧನ ಸಚಿವ ಕೆ.ಜೆ. ಜಾರ್ಜ್​ ಹಾಗೂ ಇಬ್ಬರು ಐಪಿಎಸ್​ ಅಧಿಕಾರಿಗಳಾದ ಎ.ಎಂ ಪ್ರಸಾದ್ ಮತ್ತು ಪ್ರಣಬ್ ಮೊಹಂತಿಗೆ ಬಿಗ್​ ರಿಲೀಫ್​ ನೀಡಿದೆ.
ಮೂಲತಃ ಕೊಡಗಿನವರಾದ ಎಂ.ಕೆ. ಗಣಪತಿ ಅವರು ಮಂಗಳೂರು ಐಜಿಪಿ ಕಚೇರಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದರು. ಜುಲೈ 07, 2016ರಂದು ಮಡಿಕೇರಿಯ ವಿನಾಯಕ ಲಾಡ್ಜ್‌ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದರು. ಆತ್ಮಹತ್ಯೆಗೆ ಶರಣಾಗುವ ಮುನ್ನ ಕೊಡಗಿನ ಖಾಸಗಿ ಸುದ್ದಿ ವಾಹಿನಿಗೆ ಸಂದರ್ಶನ ನೀಡಿದ್ದ ಗಣಪತಿ ಅವರು, ಅಂದಿನ ಗೃಹ ಸಚಿವ ಕೆ. ಜೆ. ಜಾರ್ಜ್‌ ಹಾಗೂ ಐಪಿಎಸ್ ಅಧಿಕಾರಿಗಳಾದ ಪ್ರಣವ್ ಮೊಹಂತಿ ಹಾಗೂ ಎ. ಎಂ. ಪ್ರಸಾದ್ ತಮಗೆ ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿದ್ದರು. ನನ್ನ ಸಾವಿಗೆ ಈ ಮೂವರೇ ಕಾರಣ ಎಂದು ಅವರು ಹೇಳಿದ್ದರು.
ಇದನ್ನೂ ಓದಿ:ನಾಗಚೈತನ್ಯ ಜತೆ ಶೋಭಿತಾ ನಿಶ್ಚಿತಾರ್ಥ; Love Is Sacrifice ಎಂದು ಪ್ರೀತಿ ಪಾಠ ಮಾಡಿದ ಸಮಂತಾ
ಗಣಪತಿ ಅವರ ಆತ್ಮಹತ್ಯೆ ಪ್ರಕರಣವು ರಾಜ್ಯ ರಾಜಕಾರಣದಲ್ಲಿ ದೊಡ್ಡ ಸಂಚಲನವನ್ನೇ ಸೃಷ್ಟಿಸಿತ್ತು. ಅಂದಿನ ವಿಪಕ್ಷವಾದ ಬಿಜೆಪಿ ಹಾಗೂ ಜೆಡಿಎಸ್​ ಸರಣಿ ಪ್ರತಿಭಟನೆಗಳನ್ನು ನಡೆಸಿ ಜಾರ್ಜ್​ ಅವರ ರಾಜೀನಾಮೆ ಪಡೆದಿದ್ದವು. ಆರಂಭದಲ್ಲಿ ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸಲಾಗಿತ್ತು. ಆದರೆ, ವಿಪಕ್ಷಗಳ ಪ್ರತಿಭಟನೆ ಹೆಚ್ಚಾದ ಕಾರಣ ಅಂದಿನ ಕಾಂಗ್ರೆಸ್​ ಸರ್ಕಾರವು ಪ್ರಕರಣವನ್ನು ಸಿಬಿಐಗೆ ವಹಿಸಿತ್ತು. ಪ್ರಕರಣದ ತನಿಖೆ ನಡೆಸಿದ ಸಿಬಿಐ ಜಾರ್ಜ್​ ಅವರಿಗೆ ಕ್ಲೀನ್​ ಚಿಟ್​ ನೀಡಿತ್ತು.
ಸಚಿವ ಜಾರ್ಜ್​ ಅವರಿಗೆ ಕ್ಲೀನ್​ಚಿಟ್​ ನೀಡಿರುವುದನ್ನು ಪ್ರಶ್ನಿಸಿ ಮೃತ ಗಣಪತಿ ಅವರ ಸಹೋದರಿ ಸಬೀತ ಆಹೈಕೋರ್ಟ್​ ಮೆಟ್ಟಿಲೇರಿದ್ದರು. ವಿಚಾರನೆ ನಡೆಸಿದ ಹೈಕೋರ್ಟ್​ ಜಾರ್ಜ್​ ಅವರ ಪಾತ್ರವಿಲ್ಲ ಎಂದು ತೀರ್ಪು ನೀಡಿತ್ತು. ಇದನ್ನು ಪ್ರಶ್ನಿಸಿ ಗಣಪತಿ ಸಹೋದರಿ ಸಬೀತಾ ಸುಪ್ರೀಂಕೋರ್ಟ್​​ಗೆ ಮೇಲ್ಮನವಿ ಸಲ್ಲಿಸಿದ್ದರು. ಆದ್ರೆ, ಸುಪ್ರೀಂರ್ಟ್​ ಸಹ ಸಬೀತಾ ಅವರ ಅರ್ಜಿಯನ್ನು ವಜಾ ಮಾಡುವ ಮೂಲಕ ಸಚಿವ ಜಾರ್ಜ್​ ಅವರಿಗೆ ಬಿಗ್​ ರಿಲೀಫ್​ ನೀಡಿದೆ.
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:9 + 14 =
Remember me
