ಬೆಂಗಳೂರುಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿಯು ಸುಪ್ರೀಂಕೋರ್ಟ್‌ನ ಅಂತಿಮ ತೀರ್ಪಿನ ಷರತ್ತಿಗೆ ಒಳಪಟ್ಟಿರುತ್ತದೆ ಎಂಬುದನ್ನು ಈಗಾಗಲೇ ನೇಮಕವಾಗಿರುವ ಶಿಕ್ಷಕರ ಗಮನಕ್ಕೆ ತಂದು ಸ್ವೀಕೃತಿ ಪಡೆದುಕೊಳ್ಳುವಂತೆ ಜಿಲ್ಲಾ ಉಪನಿರ್ದೇಶಕರಿಗೆ ಶಾಲಾ ಶಿಕ್ಷಣ ಇಲಾಖೆಯು ಸೂಚನೆ ನೀಡಿದೆ.
2022ನೇ ಸಾಲಿನ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ (6ರಿಂದ 8ನೇ ತರಗತಿ) ನೇಮಕಾತಿಗೆ ಸಂಬಂಧಪಟ್ಟಂತೆ ಸರ್ವೋಚ್ಛ ನ್ಯಾಯಾಲಯದಲ್ಲಿ ದಾಖಲಾಗಿರುವ ಪ್ರಕರಣ ವಿಚಾರಣೆಯನ್ನು ಜ.22ರಂದು ನಡೆಸಿ ಮಧ್ಯಂತರ ಆದೇಶ ನೀಡಿದೆ.
ಈಗಾಗಲೇ ಆದೇಶ ಪಡೆದು ಕರ್ತವ್ಯಕ್ಕೆ ಹಾಜರಾಗಿರುವ ಅಭ್ಯರ್ಥಿಗಳಿಗೆ ಅವರ ನೇಮಕಾತಿಯು ನ್ಯಾಯಾಲಯದ ಅಂತಿಮ ತೀರ್ಪಿಗೆ ಒಳಪಟ್ಟಿರುತ್ತದೆ ಎಂಬುದಾಗಿದೆ. ಅದರಂತೆ, ಈಗಾಗಲೇ ಆದೇಶ ಪಡೆದು ನೇಮಕವಾಗಿರುವ 11,494 ಅಭ್ಯರ್ಥಿಗಳಿಗೆ ಈ ವಿಷಯವನ್ನು ತಿಳಿಸಿ ಜಿಲ್ಲಾ ಉಪ ನಿರ್ದೇಶಕರು ಅವರಿಂದ ಲಿಖಿತವಾಗಿ ಸ್ವೀಕೃತಿ ಪಡೆದುಕೊಳ್ಖುವಂತೆ ಇಲಾಖೆ ಆಯುಕ್ತರು ಸೂಚಿಸಿದ್ದಾರೆ.
ಸ್ವೀಕೃತಿಯನ್ನು ನೇಮಕಾತಿ ಆದೇಶ ನೀಡಲಾದ ಕಡತದಲ್ಲಿ ಕಾಯ್ದಿರಿಸಲು ತುರ್ತು ಅಗತ್ಯ ಕ್ರಮಗಳನ್ನು ಕೈಗೊಂಡು ಕೇಂದ್ರೀಕೃತ ದಾಖಲಾತಿ ಘಟಕದ ವಿಶೇಷಾಧಿಕಾರಿಗಳಿಗೆ ಸಲ್ಲಿಸಬೇಕು. ವಿಳಂಬಕ್ಕೆ ಅವಕಾಶ ಮಾಡಿಕೊಡದೆ ಜವಾಬ್ದಾರಿಯುತವಾಗಿ ಕಾರ್ಯ ನಿರ್ವಹಿಸುವಂತೆ ಸೂಚನೆ ನೀಡಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 × 2 =
Remember me
