ಬೆಂಗಳೂರು:ಜೆಡಿಎಸ್​ ವಿಧಾನಪರಿಷತ್ ಸದಸ್ಯ ಸೂರಜ್ ರೇವಣ್ಣ ವಿರುದ್ಧ ಅಸಹಜ ಲೈಂಗಿಕ ಕ್ರಿಯೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್ ಸಿಕ್ಕಿದೆ. ಸೂರಜ್ ರೇವಣ್ಣ ಬಗ್ಗೆ ಸಂತ್ರಸ್ತ ಯುವಕ ಕುತೂಹಲಕಾರಿ ಹೇಳಿಕೆ ನೀಡಿದ್ದಾನೆ.
ಸೂರಜ್ ರೇವಣ್ಣ ಅವರ ಕುರಿತು ಜೆಡಿಎಸ್ ಕಾರ್ಯಕರ್ತ ಹಾಗೂ ಸಂತ್ರಸ್ತ ಯುವಕ ಖಾಸಗಿ ಸುದ್ದಿ ವಾಹಿನಿಗೆ ನೀಡಿದ ಸಂದರ್ಶನದಲ್ಲಿ ಬೆಚ್ಚಿಬೀಳುವಂತಹ ಮಾಹಿತಿ ನೀಡಿದ್ದಾನೆ.
ಮಾಜಿ ಸಚಿವ ಹೆಚ್.ಡಿ ರೇವಣ್ಣ ಅವರ ಹಿರಿಯ ಪುತ್ರ ಸೂರಜ್‌ ರೇವಣ್ಣನನ್ನು ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಪೊಲೀಸರು ಬಂಧಿಸಿದ್ದು, ಹೆಚ್ಚಿನ ವಿಚಾರಣೆಗಾಗಿ ವಶದಲ್ಲಿಟ್ಟುಕೊಂಡಿದ್ದಾರೆ. ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಈಗ ಪೊಲೀಸ್‌ ವಶದಲ್ಲಿರುವ ವಿಧಾನ ಪರಿಷತ್ ಸದಸ್ಯ ಸೂರಜ್ ರೇವಣ್ಣ ಬಗ್ಗೆ ಸಂತ್ರಸ್ತ ಯುವಕ, ಸೂರಜ್‌ ರೇವಣ್ಣ ಅಮಾವಾಸ್ಯೆ ದಿನ ಬಳೆ ತೊಟ್ಟು, ಸೀರೆ ಉಡುತ್ತಾರೆ ಎಂದು ಅಚ್ಚರಿಯ ಹೇಳಿಕೆ ನೀಡಿದ್ದಾರೆ.
ಸೂರಜ್ ರೇವಣ್ಣ ಅವರು Good Evening ಮೆಸೇಜ್ ಜತೆ ಲವ್ ಸಿಂಬಲ್ ಕಳಿಸಿ ಮಾತು ಆರಂಭಿಸಿದರು. ಬಳಿಕ ಫಾರ್ಮ್‌ಹೌಸ್‌ಗೆ ಒಂಟಿಯಾಗಿ ಕರೆಸಿಕೊಂಡು ಬಲಾತ್ಕಾರದಿಂದ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಸಂತ್ರಸ್ತ ಜೆಡಿಎಸ್ ಕಾರ್ಯಕರ್ತ ಹೇಳಿದ್ದಾನೆ.
2019ರ ಚುನಾವಣೆ ಸಂದರ್ಭದಲ್ಲಿ ನಾನು ಅವರನ್ನು ಭೇಟಿ ಮಾಡಿದ್ದೆ. ಅರಕಲಗೂಡಿನಲ್ಲಿ ಜೆಡಿಎಸ್ ಕಾರ್ಯಕ್ರಮ ಚೆನ್ನಾಗಿ ಮಾಡಿದ್ದೆ. ಈ ವೇಳೆ ಕಾರ್ಯಕ್ರಮ ಚೆನ್ನಾಗಿ ಮಾಡಿದೀಯ ಅಂತ ನನ್ನನ್ನು ಹೊಗಳಿ ನನ್ನ ಫೋನ್‌ ನಂಬರ್ ಅನ್ನು ತೆಗೆದುಕೊಂಡರು. ನಂತರ ಅವರ ವಿಸಿಟಿಂಗ್ ಕಾರ್ಡ್ ಕೊಟ್ಟರು. ನಂತರ ಅವರು ನನ್ನ ಜೊತೆಗೆ ದೂರವಾಣಿಯಲ್ಲಿ ಮಾತನಾಡಿದರು ಎಂದಿದ್ದಾನೆ. ಸೂರಜ್ ರೇವಣ್ಣ ಅವರು Good Evening ಮೆಸೇಜ್ ಜತೆ ಲವ್ ಸಿಂಬಲ್ ಕಳಿಸಿ ಮಾತು ಆರಂಭಿಸಿದರು. ಬಳಿಕ ಫಾರ್ಮ್‌ಹೌಸ್‌ಗೆ ಒಂಟಿಯಾಗಿ ಕರೆಸಿಕೊಂಡು ಬಲಾತ್ಕಾರದಿಂದ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ. ಯಾವುದಕ್ಕೂ ಯೋಚನೆ ಮಾಡಬೇಡ ನಾನು ಇದ್ದೇನೆ ಎಂದು ಹೇಳಿ ರೂಮ್ ಒಳಗೆ ಕರೆದುಕೊಂಡು ಹೋದ್ರು. ನಂತರ ನನ್ನ ಕಾಲು ಒತ್ತುವಂತೆ ಹೇಳಿದರು. ನಾನು ಕಾಲು ಒತ್ತಿದೆ.. ಮುಂದೆ ಏನಾಯ್ತು ಅಂತ ನಾನು ಹೇಳಲು ಸಾಧ್ಯವಿಲ್ಲ ಎಂದು ಸಂತ್ರಸ್ತ ಯುವಕ ವಿವರಿಸಿದ್ದಾನೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:13 − three =
Remember me
