ಬೆಂಗಳೂರು:ಮುಂದಿನ ಕೆಲವೇ ತಿಂಗಳುಗಳಲ್ಲಿ ನಡೆಯಲಿರುವ ಲೋಕಸಭೆ ಚುನಾವಣೆಗೆ ಈಗಾಗಲೇ ರಾಜಕೀಯ ಪಕ್ಷಗಳು ಈಗಾಗಲೇ ಭರ್ಜರಿ ಸಿದ್ಧತೆಯನ್ನು ಆರಂಭಿಸಿದ್ದು, ಬಿಜೆಪಿ ಹಾಗೂ ಜೆಡಿಎಸ್​ ಈ ಬಾರಿ ಮೈತ್ರಿ ಮಾಡಿಕೊಂಡು ಜಂಟಿಯಾಗಿ ಕಣಕ್ಕಿಳಿಯುತ್ತಿವೆ. ಆದರೆ, ಮಹತ್ವದ ಬೆಳವಣಿಗೆ ಒಂದರಲ್ಲಿ ಜೆಡಿಎಸ್​ನ ವಿಧಾನಪರಿಷತ್​ ಸದಸ್ಯ ಸೂರಜ್​ ರೇವಣ್ಣ ಕೆಪಿಸಿಸಿ ಅಧ್ಯಕ್ಷ, ಡಿಸಿಎಂ ಡಿ.ಕೆ. ಶಿವಕುಮಾರ್​ ಅವರನ್ನ ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ.
ಸದಾಶಿವನಗರದಲ್ಲಿರುವ ತಮ್ಮ ಮನೆಗೆ ಬೆಳಿಗ್ಗೆ ಬಂದ ಸೂರಜ್‌ ಜೊತೆ ಶಿವಕುಮಾರ್‌ ಗೌಪ್ಯವಾಗಿ ಮಾತುಕತೆ ನಡೆಸಿದ್ದಾರೆ. ಆದರೆ, ಸೂರಜ್​ ಡಿ.ಕೆ. ಶಿವಕುಮಾರ್​ ಅವರನ್ನು ಯಾವ ಕಾರಣಕ್ಕೆ ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ ಎಂಬುದರ ಕುರಿತು ಈವರೆಗೆ ಬಹಿರಂಗಗೊಂಡಿಲ್ಲ.
ಇದನ್ನೂ ಓದಿ:WPL 2024| ಟೂರ್ನಿ ಆರಂಭಕ್ಕೂ ಮುನ್ನ ಆರ್​ಸಿಬಿಗೆ ಬಿಗ್​ ಶಾಕ್​; ಟೂರ್ನಿಯಿಂದ ಹೊರಬಿದ್ದ ಸ್ಟಾರ್ ಪ್ಲೇಯರ್
ಮುಂಬರುವ ಲೋಕಸಭೆ ಚುನಾವಣೆಗೆ ಬಿಜೆಪಿ ಜೊತೆ ಜೆಡಿಎಸ್‌ ಮೈತ್ರಿ ಮಾಡಿಕೊಂಡಿದೆ. ಈಗಾಗಲೇ ಜೆಡಿಎಸ್‌ ಶಾಸಕಾಂಗ ಪಕ್ಷದ ನಾಯಕ ಎಚ್‌.ಡಿ. ಕುಮಾರಸ್ವಾಮಿ ಅವರು ಬಿಜೆಪಿ ನಾಯಕರ ಜೊತೆ ಸೀಟು ಹಂಚಿಕೆಗೆ ಸಂಬಂಧಿಸಿದಂತೆ ಪ್ರಾಥಮಿಕ ಚರ್ಚೆಯಲ್ಲಿ ತೊಡಗಿದ್ದು, ಈ ಸಂದರ್ಭದಲ್ಲಿ ಸೂರಜ್‌ ಅವರು ಕೆಪಿಸಿಸಿ ಅಧ್ಯಕ್ಷರನ್ನು ಭೇಟಿ ಮಾಡಿರುವುದು ರಾಜಕೀಯ ವಲಯದಲ್ಲಿ ಕುತೂಹಲ ಮೂಡಿಸಿದೆ.
ಡಿ.ಕೆ. ಶಿವಕುಮಾರ್​ ಭೇಟಿ ಬಳಿಕ ಮಾತನಾಡಿದ ಸೂರಜ್​ ರೇವಣ್ಣ, ಒಬ್ಬ ಚುನಾಯಿತ ಪ್ರತಿನಿಧಿಯಾಗಿರುವ ನಾನು ಜಿಲ್ಲೆಗೆ ಸಂಬಂಧಿಸಿದ ಕೆಲಸಗಳನ್ನು ಮಾಡಲು ಅವರನ್ನು ಭೇಟಿ ಮಾಡಿದೆ. ತಮ್ಮ ಜಿಲ್ಲೆಯ ಅಭಿವೃದ್ಧಿ ಕಾಮಗಾರಿಗಳ ಕುರಿತು ಚರ್ಚಿಸಲು ಉಪಮುಖ್ಯಮಂತ್ರಿ ಅವರನ್ನು ಭೇಟಿಯಾಗಿರುವುದಾಗಿ ತಿಳಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:six + nineteen =
Remember me
