ಬೆಂಗಳೂರು:ಚಿಕ್ಕನಾಯಕಹಳ್ಳಿ ಶಾಸಕ ಸಿ.ಬಿ ಸುರೇಶ್ ಬಾಬು ಅವರನ್ನು ಜೆಡಿಎಸ್​ ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ದೆ ಮಾಡಲಾಗಿದೆ. ವಿಧಾನಸಭಾಧ್ಯಕ್ಷ ಯುಟಿ ಖಾದರ್ ಈ ಮಾಹಿತಿಯನ್ನು ಸದನದಲ್ಲಿ ಇಂದು ಘೋಷಿಸಿದರು.
ಇದನ್ನೂ ಓದಿ:ರೈತರು, ನಾಲೆ ನೆಪದಲ್ಲಿ ತಮಿಳುನಾಡಿಗೆ ನೀರು ಹರಿಸಿದ ರಾಜ್ಯ ಸರ್ಕಾರ: ಕೇಂದ್ರ ಸಚಿವ ಕುಮಾರಸ್ವಾಮಿ ಕಿಡಿ
ಈ ಹಿಂದೆ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕರಾಗಿದ್ದ ಎಚ್ ಡಿ ಕುಮಾರಸ್ವಾಮಿ ಲೋಕಸಭಾ ಚುನಾವಣೆಯಲ್ಲಿ ಮಂಡ್ಯ ಕ್ಷೇತ್ರದಿಂದ ಸ್ಪರ್ಧಿಸಿ ಗೆದ್ದು ಕೇಂದ್ರ ಸಚಿವರಾಗಿದ್ದಾರೆ.
ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆಯಾದ ಚಿಕ್ಕನಾಯಕನಹಳ್ಳಿ ಶಾಸಕರಾದ ಸಿ.ಬಿ. ಸುರೇಶ್ ಬಾಬು ಅವರಿಗೆ ಅಭಿನಂದನೆಗಳು.pic.twitter.com/CjFWRX6U73
— Janata Dal Secular (@JanataDal_S)July 15, 2024

ಈ ಹಿಂದೆ ಎಚ್.ಡಿ.ಕುಮಾರಸ್ವಾಮಿ ಅವರು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕರಾಗಿದ್ದರು. ಅಧಿಕೃತ ಬಿಜೆಪಿ ಪ್ರತಿಪಕ್ಷವಾಗಿದ್ದರೂ, ಕುಮಾರಸ್ವಾಮಿ ಹೇಳಿಕೆಗಳು ಸದನದಲ್ಲಿ ಹೆಚ್ಚು ಮಹತ್ವ ಪಡೆದುಕೊಂಡಿದ್ದವು. ಬದಲಾದ ರಾಜಕೀಯ ಪರಿಸ್ಥಿತಿಯಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ರಾಜಕಾರಣ ನಡೆಯುತ್ತಿದ್ದು, ಲೋಕಸಭೆ ಚುನಾವಣೆಯಲ್ಲಿ ಕುಮಾರಸ್ವಾಮಿ ಮಂಡ್ಯ ಕ್ಷೇತ್ರದಿಂದ ಸಂಸದರಾಗಿ ಆಯ್ಕೆಯಾಗಿದ್ದು, ಕೇಂದ್ರ ಸರಕಾರದಲ್ಲಿ ಬೃಹತ್ ಕೈಗಾರಿಕೆ ಹಾಗೂ ಉಕ್ಕು ಸಚಿವರಾಗಿದ್ದಾರೆ.
ಕರ್ನಾಟಕ ವಿಧಾನ ಪರಿಷತ್ ಗೆ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆಯಾದ ನೈಋತ್ಯ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಸದಸ್ಯರಾದ ಶ್ರೀ ಎಸ್ ಎಲ್ ಭೋಜೇಗೌಡ ಅವರಿಗೆ ಅಭಿನಂದನೆಗಳು.pic.twitter.com/FQXUkbMJPm
— Janata Dal Secular (@JanataDal_S)July 15, 2024

ಕುಮಾರಸ್ವಾಮಿ ಅವರ ಪತ್ರದ ಕುರಿತು ಪ್ರಕಟಿಸಿದ ಸಭಾಧ್ಯಕ್ಷರು ಸುರೇಶ್ ಬಾಬು ಅವರನ್ನು ಜೆಡಿಎಸ್ ಪಕ್ಷದ ಶಾಸಕಾಂಗ ಪಕ್ಷದ ನಾಯಕರನ್ನಾಗಿ ಆಯ್ಕೆ ಮಾಡಿರುವುದನ್ನು ಮಾನ್ಯ ಮಾಡಲಾಗಿದೆ. ರಾಜ್ಯ ವಿಧಾನ ಪರಿಷತ್‌ಗೆ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕರಾಗಿ ನೈಋತ್ಯ ಶಿಕ್ಷಕರ ಕ್ಷೇತ್ರದ ಸದಸ್ಯರಾದ ಎಸ್.ಎಲ್.ಭೋಜೇಗೌಡ ನೇಮಕಗೊಂಡಿದ್ದಾರೆ.
ನಾಳೆ ದ್ವಿತೀಯ ಪಿಯುಸಿ ಪರೀಕ್ಷೆ-3ರ ಫಲಿತಾಂಶ ಪ್ರಕಟ; ಚೆಕ್‌ ಮಾಡುವ ವಿಧಾನ, ಲಿಂಕ್ ಇಲ್ಲಿದೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twenty − 9 =
Remember me
