ಬೆಂಗಳೂರು:ಕರೊನಾ ಸಂಕಷ್ಟ ಕಾಲದಲ್ಲಿ ಸದ್ಯಕ್ಕೆ ಶಾಲೆಗಳನ್ನು ತೆರೆಯುವ ಅವಸರ ಸರ್ಕಾರದ ಮುಂದಿಲ್ಲ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್​.ಸುರೇಶ್​ ಕುಮಾರ್​ ಸ್ಪಷ್ಟಪಡಿಸಿದರು.
ಶಿಕ್ಷಣ ಕ್ಷೇತ್ರದಲ್ಲಿ ತೊಡಗಿಸಿಕೊಂಡ 36ಕ್ಕೂ ಹೆಚ್ಚು ಸರ್ಕಾರೇತರ ಸಂಸ್ಥೆಗಳ ಪ್ರತಿನಿಧಿಗಳೊಂದಿಗೆ ಶಿಕ್ಷಣ ಸಚಿವರು ಮಂಗಳವಾರ ವೆಬಿನಾರ್​ ಮೂಲಕ ಸಂವಾದ ನಡೆಸಿದರು. ಈ ವೇಳೆ ಮಾತನಾಡಿದ ಸಚಿವರು, ಕರೊನಾ ಸೋಂಕು ಹೆಚ್ಚುತ್ತಿರುವ ಸಮಯದಲ್ಲಿ ಶಾಲೆಗಳನ್ನು ತೆರೆಯುವ ಅವಸರ ಸರ್ಕಾರದ ಮುಂದಿಲ್ಲ ಎಂದರು.
ಇದನ್ನೂ ಓದಿರಿಡಿಸಿಎಂ ಲಕ್ಷ್ಮಣ ಸವದಿಗೆ ಯೋಗ ಇದ್ರೆ ಸಿಎಂ ಆಗಲಿ; ರಮೇಶ ಜಾರಕಿಹೊಳಿ
ವಿದ್ಯಾರ್ಥಿಗಳನ್ನು ಕಲಿಕೆಯಲ್ಲಿ ತೊಡಗಿಸಬೇಕು ಎಂಬ ಕಾರಣಕ್ಕೆ ತಂತ್ರಜ್ಞಾನ ಆಧಾರಿತ ಶಿಕ್ಷಣ ಮತ್ತು ಶಾಲಾ ಚಟುವಟಿಕೆ ಪ್ರಾರಂಭಿಸಲು ಸರ್ಕಾರ ಆಲೋಚಿಸುತ್ತಿದೆ. ವಠಾರ ಶಾಲೆ, ಪಡಶಾಲೆ ಶಾಲೆ, ಮನೆಶಾಲೆ, ತಂತ್ರಜ್ಞಾನ ಬಳಕೆ ಮಾಡಿಕೊಂಡು ಆಕಾಶವಾಣಿ, ಚಂದನ ದೂರದರ್ಶನ, ಶಿಕ್ಷಣ ಇಲಾಖೆಯ ಚಾನೆಲ್​ ಸೇರಿ ಲಭ್ಯ ಆಗಬಹುದಾದ ಎಲ್ಲ ಅವಕಾಶಗಳನ್ನೂ ಮುಕ್ತವಾಗಿರಿಸಿಕೊಂಡು ಮಕ್ಕಳ ಹಿತದೃಷ್ಟಿಯಿಂದ ಯಾವ ಮಾದರಿ ಉತ್ತಮ ಎಂದು ಆಲೋಚಿಸುತ್ತಿದೆ ಎಂದು ಸಚಿವ ಸುರೇಶ್​ಕುಮಾರ್​ ತಿಳಿಸಿದರು.
ಯೂ ಟ್ಯೂಬ್​, ವಾಟ್ಸ್ಆ್ಯಪ್​ ಮೂಲಕ ಬೋಧನೆ, ಶಾಲೆಗಳ ಗ್ರಂಥಾಲಯದಲ್ಲಿ ಪುಸ್ತಕ ಪಡೆದು ಒಂದು ದಿನ ಓದಿ ಮತ್ತೊಂದು ದಿನ ಒಪ್ಪಿಸುವುದು, ಸಿಲೆಬಸ್​ ಪಾಠವೇ ಬೋಧನೆ ಮಾಡಬೇಕೆಂದಿಲ್ಲ, ಸ್ವಯಂ ಸೇವಕರನ್ನು ಬಳಸಿಕೊಂಡು ಗುಂಪು ಆಧಾರಿತ ಶಿಕ್ಷಣ ನೀಡುವುದು, ಮಾಡುವ ಬೋಧನೆ ತಲುಪುತ್ತಿದೆಯೇ ಎಂದು ನಿರ್ವಹಣೆ ಮಾಡಬೇಕು ಎಂಬುತ್ಯಾದಿ ವಿಚಾರಗಳು ಸಂವಾದಲ್ಲಿ ಪ್ರಸ್ತಾಪವಾದವು.
ಶಿಕ್ಷಣ ಕ್ಷೇತ್ರದಲ್ಲಿ ತೊಡಗಿರುವ ಎನ್​ಜಿಒಗಳಾದ ಆಜೀಂ ಪ್ರೇಮ್​ಜಿ ಪ್ರತಿಷ್ಠಾನ, ಗ್ರಾಮ್ಸ್​, ಆಕ್ಷರ ಫೌಂಡೇಷನ್​, ಯೂನಿಸೆಫ್​, ಸಿಇಇ, ಪೋರ್ತ್​ ಫೌಂಡೇಷನ್​, ಅಗತ್ಯ ಸೇರಿ 36ಕ್ಕೂ ಹೆಚ್ಚಿನ ಸಂಸ್ಥೆಗಳ ಪ್ರತಿನಿಧಿಗಳು ಹಾಗೂ ಶಿಕ್ಷಣ ತಜ್ಞರಾದ ಎಂ.ಕೆ.ಶ್ರೀಧರ್​, ಡಾ.ಗುರುರಾಜ ಕರಜಗಿ, ಡಾ.ವಿ.ಪಿ. ನಿರಂಜನಾರಾಧ್ಯ, ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಎಸ್​.ಆರ್​.ಉಮಾಶಂಕರ್​, ಆಯುಕ್ತ ಡಾ.ಕೆ.ಜಿ .ಜಗದೀಶ್​ ಇತರರು ಭಾಗವಹಿಸಿದ್ದರು.
ರಾತ್ರಿಯಿಡೀ ಪರದಾಡಿದ ನಟಿ ಸುಧಾರಾಣಿ, ಖಾಸಗಿ ಆಸ್ಪತ್ರೆ ವಿರುದ್ಧ ಕ್ರಮ; ಡಾ.ಕೆ. ಸುಧಾಕರ್

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:two + nine =
Remember me
