ಬೆಂಗಳೂರು: ಬಿಜೆಪಿ- ಜೆಡಿಎಸ್​ ಮೈತ್ರಿ ಚರ್ಚೆ ನಡೆಯುತ್ತಿರುವ ಸಂದರ್ಭದಲ್ಲಿಯೇ ಮಾಜಿ ಪ್ರಧಾನಿ ಎಚ್​.ಡಿ ದೇವೇಗೌಡರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅನಿರೀಕ್ಷಿತವಾಗಿ ಭೇಟಿಯಾದರು.
ಕಾಂಗ್ರೆಸ್​ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಪಾಲ್ಗೊಳ್ಳಲು ದೆಹಲಿಗೆ ತೆರಳಲು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ , ಮಂಗಳೂರಿಗೆ ತೆರಳಲು ಆಗಮಿಸಿದ್ದ ಮಾಜಿ ಪ್ರಧಾನಿ ದೇವೇಗೌಡರು ಮತ್ತು ಇವರ ಧರ್ಮಪತ್ನಿ ಚನ್ನಮ್ಮ ಅವರು ಅನಿರೀಕ್ಷಿತವಾಗಿ ಮುಖಾಮುಖಿಯಾದರು.
ಈ ವೇಳೆ ಮುಖ್ಯಮಂತ್ರಿಗಳು ದೇವೇಗೌಡರು ಮತ್ತು ಚನ್ನಮ್ಮ ಅವರ ಆರೋಗ್ಯ ವಿಚಾರಿಸಿದರು.‌ ಬಳಿಕ ದೇವೇಗೌಡರೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆರೋಗ್ಯ ವಿಚಾರಿಸಿದರು. ಕೆಲ ಕಾಲ ಕುಶಲೋಪರಿ, ಮಾತುಕತೆ ಬಳಿಕ ಪರಸ್ಪರರು ಬೀಳ್ಕೊಟ್ಟರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:nineteen − nine =
Remember me
