ಹಾವೇರಿ:ಕಲಬುರಗಿಯಲ್ಲಿ ಇನ್ನೋರ್ವರಿಗೆ ಕರೊನಾ ವೈರಸ್​ ತಗುಲಿರುವ ಬೆನ್ನಲ್ಲೇ ಹಾವೇರಿಯಲ್ಲಿ ಇಬ್ಬರಲ್ಲಿ ಶಂಕಿತ ಕರೊನಾ ವೈರಸ್ ಕಾಣಿಸಿಕೊಂಡಿದೆ.
60 ವರ್ಷದ ವೃದ್ಧ ಹಾಗೂ ಮೊಮ್ಮಗನಲ್ಲಿ ಕರೊನಾ ಲಕ್ಷಣಗಳು ಕಂಡುಬಂದಿದ್ದು, ಇಬ್ಬರ ರಕ್ತ ಮತ್ತು ಗಂಟಲಿನ ದ್ರವ ಮಾದರಿಯನ್ನು ಶಿವಮೊಗ್ಗದ ಲ್ಯಾಬೋರೇಟರಿಗೆ ಕಳಿಸಲಾಗಿದೆ. ಈ ಬಗ್ಗೆ ಡಿಎಚ್​ಒ ಡಾ. ರಾಜೇಂದ್ರ ದೊಡ್ಡಮನಿ ಮಾಹಿತಿ ನೀಡಿದ್ದಾರೆ.
ಇವರಿಬ್ಬರೂ ಹಾನಗಲ್​ ಪಟ್ಟಣದ ನಿವಾಸಿಗಳಾಗಿದ್ದಾರೆ. ಒಟ್ಟು ಮೂವರು ಹಜ್​ ಯಾತ್ರೆಗೆ ಹೋಗಿದ್ದರು. ವಿಮಾನದಲ್ಲಿ ಮುಂಬೈಗೆ ಬಂದು, ಅಲ್ಲಿಂದ ಹುಬ್ಬಳ್ಳಿಗೆ ಆಗಮಿಸಿದ್ದರು. ನಂತರ ಸಂಬಂಧಿಕರ ಮನೆಯಲ್ಲಿ ಉಳಿದುಕೊಂಡಿದ್ದರು. ನಿನ್ನೆ ಹಾನಗಲ್​ಗೆ ಆಗಮಿಸಿದ್ದ ಅಜ್ಜ-ಮೊಮ್ಮಗನಲ್ಲಿ ನೆಗಡಿ, ಜ್ವರ, ಕೆಮ್ಮು ಕಾಣಿಸಿಕೊಂಡಿತ್ತು. ಈ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದರು.
ಸದ್ಯ ಜಿಲ್ಲಾಸ್ಪತ್ರೆಯಲ್ಲಿ ಪ್ರತ್ಯೇಕ ವಾರ್ಡ್​ನಲ್ಲಿ ಇಟ್ಟು ಚಿಕಿತ್ಸೆ ನೀಡಲಾಗುತ್ತಿದೆ. ಇವರಿಬ್ಬರ ವೈದ್ಯಕೀಯ ವರದಿ ನಾಳೆ ಬರಲಿದೆ.
ಸಾರ್ಕ್​ ರಾಷ್ಟ್ರಗಳ ನಾಯಕರ ವಿಡಿಯೋ ಕಾನ್ಫರೆನ್ಸ್​; Covid19 ತುರ್ತು ನಿಧಿ ಸ್ಥಾಪನೆಯ ಪ್ರಸ್ತಾವನೆಯನ್ನಿಟ್ಟ ಪ್ರಧಾನಿ ನರೇಂದ್ರ ಮೋದಿ..

ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:3 × four =
Remember me
