ಬೆಂಗಳೂರು:ವಿಧ್ವಂಸಕ ಕೃತ್ಯಕ್ಕೆ ಸಂಚು ಹೂಡಿದ್ದ ಐವರು ಶಂಕಿತ ಉಗ್ರರನ್ನು ಇಂದು ಬೆಂಗಳೂರಿನ ಸಿಸಿಬಿ ಪೊಲೀಸರು ಬಂಧಿಸಿದ್ದು, ಬಂಧಿತರಿಂದ ಹಲವು ಆತಂಕಕಾರಿ ಸಂಗತಿಗಳು ಬೆಳವಣಿಗೆಗಳು ಬೆಳಕಿಗೆ ಬಂದಿವೆ.
ಮಾತ್ರವಲ್ಲ, ಶಂಕಿತ ಉಗ್ರರು ಸೆಂಟ್ರಲ್ ಜೈಲ್​ನಲ್ಲಿದ್ದವರ ಜತೆ ಸಂಪರ್ಕ ಹೊಂದಿದ್ದರು ಎಂಬ ಸಂಗತಿಯೂ ಬಹಿರಂಗಗೊಂಡಿದೆ. ಇಂಥದ್ದೊಂದು ವಿಷಯ ಬಯಲಾಗುತ್ತಿದ್ದಂತೆ ಕೇಂದ್ರ ಕಾರಾಗೃಹ ವ್ಯಾಪ್ತಿಯಲ್ಲಿ ಸಂಚಲನ ಉಂಟಾಗಿದೆ.
ಇದನ್ನೂ ಓದಿ:ಚಿಕಿತ್ಸೆಗೆಂದು ದಾಖಲಾಗಿದ್ದ ಡಾಕ್ಟರ್​ ಬೆಳಗಾಗುವಷ್ಟರಲ್ಲಿ ಇಲ್ಲ!; ಪತ್ನಿಗೆ ಶವ ಸಿಗುವವರೆಗೂ ಆಸ್ಪತ್ರೆಯವರಿಗೆ ವಿಷ್ಯ ಗೊತ್ತಾಗ್ಲಿಲ್ಲ!
ಶಂಕಿತ ಉಗ್ರರ ಬಂಧನ ಹಾಗೂ ಸೆಂಟ್ರಲ್ ಜೈಲ್​ನಲ್ಲಿದ್ದವರ ಜತೆ ಅವರ ಸಂಪರ್ಕದ ಹಿನ್ನೆಲೆಯಲ್ಲಿ ಎಡಿಜಿಪಿ (ಬಂದೀಖಾನೆ) ಮಾಲಿನಿ ಕೃಷ್ಣಮೂರ್ತಿ ಅವರು ಪರಪ್ಪನ ಅಗ್ರಹಾರದಲ್ಲಿರುವ ಕೇಂದ್ರ ಕಾರಾಗೃಹಕ್ಕೆ ಇಂದು ಭೇಟಿ ನೀಡಿದ್ದಾರೆ. ಆದರೆ ಭೇಟಿ ಬಳಿಕ ಅವರು ಸುದ್ದಿಗಾರರಿಗೆ ಯಾವುದೇ ಪ್ರತಿಕ್ರಿಯೆ ನೀಡದೆ ಹೊರಟು ಹೋಗಿದ್ದಾರೆ.
ಇದನ್ನೂ ಓದಿ:ಆಕೆ ಸಾವಿನ ಕುರಿತಂತೆ ವಿಚಾರಣೆ ಎದುರಿಸೋಕೆ ಬಂದ ಈತ ಠಾಣೆ ಹಿಂಭಾಗವೇ ಪ್ರಾಣ ಕಳ್ಕೊಂಡ!
ಸೆಂಟ್ರಲ್ ಜೈಲ್​​​ಗೆ ಭೇಟಿ ನೀಡಿದ ಅವರು ಅಲ್ಲಿನ ಅಡುಗೆ ಮನೆ ಸೇರಿದಂತೆ ಎಲ್ಲಾ ಬ್ಯಾರಕ್​ಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಜೈಲಿನ ಅಧಿಕಾರಿಗಳಿಗೆ ಫುಲ್ ಕ್ಲಾಸ್ ತೆಗೆದುಕೊಂಡಿದ್ದಾರೆ. ಇಡೀ ಜೈಲನ್ನು ಜಾಲಾಡಿರುವ ಅವರು ಅಲ್ಲಿನ ಅವ್ಯವಸ್ಥೆ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಜೊತೆಗೆ ಜೈಲ್​ನಲ್ಲಿನ ಗಾಂಜಾ, ಮೊಬೈಲ್​​ಫೋನ್​ ದಂಧೆ ನಿಲ್ಲಿಸಲು ಖಡಕ್ ಸೂಚನೆ ನೀಡಿದ್ದು, ತಪ್ಪಿದರೆ ಜೈಲು ಅಧಿಕಾರಿಗಳ ವಿರುದ್ಧ ಕ್ರಮಕೈಗೊಳ್ಳುವುದಾಗಿಯೂ ಎಚ್ಚರಿಕೆ ನೀಡಿದ್ದಾರೆ.
ಅವರನ್ನು ಟೆರರಿಸ್ಟ್ ಅಂತ ಈಗಲೇ ಹೇಳಲು ಸಾಧ್ಯವಿಲ್ಲ: ಗೃಹಸಚಿವ ಪರಮೇಶ್ವರ್

ಮಕ್ಕಳನ್ನು ಡೌನ್​ಲೋಡ್ ಮಾಡಿಕೊಳ್ಳುವ ಕಾಲ ಬರಬಹುದಾ?; ಇದೇನಿದು ಅಪ್ಪ-ಅಮ್ಮ ಇಲ್ಲದೆ ಮಗು ಹುಟ್ಟಿಸೋ ಪ್ರಯತ್ನ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 + four =
Remember me
