ಬೆಂಗಳೂರು: ಕಲುಷಿತ ನೀರು ಸೇವನೆಯಿಂದ ಮರಣ ಪ್ರಕರಣಗಳು ಮರುಕಳಿಸಿದರೆ ನಗರಸಭೆ ಆಯುಕ್ತರು, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳನ್ನೇ ನೇರವಾಗಿ ಹೊಣೆಗಾರರನ್ನಾಗಿಸಿ ಅಮಾನತು ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ ನೀಡಿದ್ದಾರೆ.ರಾಜ್ಯದ ಕುಡಿಯುವ ನೀರಿನ ಸಮಸ್ಯೆ ಕುರಿತಂತೆ ಸಭೆ ನಡೆಸಿದ ಅವರು, ಕಲುಷಿತ ನೀರಿನ ಸೇವನೆಯಿಂದಾಗಿ ರಾಜ್ಯದಲ್ಲಿ ಇತ್ತೀಚೆಗೆ 13-14 ಜನ ಸಾವಿಗೀಡಾಗಿದ್ದು, ಚಿತ್ರ ದುರ್ಗದಲ್ಲಿಯೇ 6-7 ಜನ ಅಸುನೀಗಿದ್ದಾರೆ. ಇದನ್ನು ತಪ್ಪಿಸಲು ಸಾಧ್ಯವಿದೆ. ಕೆಲವೆಡೆ ನಿರ್ವಹಣೆ ಇಲ್ಲದೆ ಇರುವುದರಿಂದ ಈ ರೀತಿ ಅವಘಡಗಳು ಸಂಭವಿಸುತ್ತದೆ ಎಂದು ಹೇಳಿದರು.ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಬಡವರು ವಾಸಿಸುವ ಕೊಳಗೇರಿಗಳಲ್ಲಿ ಕುಡಿಯುವ ನೀರಿನ ಪೈಪ್ ಲೈನ್ ಹಾಗೂ ಚರಂಡಿ ನೀರಿನ ಪೈಪುಗಳು ಪ್ರತ್ಯೇಕವಾಗಿರುವುದನ್ನು ಖಾತ್ರಿಪಡಿಸಬೇಕು. ಪ್ರತ್ಯೇಕ ಇಲ್ಲದಿರುವ ಸ್ಥಳಗಳನ್ನು ಗುರುತಿಸಿ ಈ ಕುರಿತು ನೈರ್ಮಲ್ಯ ಅಭಿಯಾನ ಕೈಗೊಂಡು 15 ದಿನಗಳಲ್ಲಿ ಈ ಕುರಿತು ವರದಿ ಸಲ್ಲಿಸಬೇಕೆಂದು ಸೂಚಿಸಿದರು.ಕಾವಾಡಿಗರಹಟ್ಟಿಯಲ್ಲಿ ಇತ್ತೀಚೆಗೆ ಒಬ್ಬರು ಮರಣ ಹೊಂದಿದ್ದಾರೆ. ಅಧಿಕಾರಿಗಳ ನಿರ್ಲಕ್ಷ್ಯದಿಂದ ಇಂಥ ಪ್ರಕರಣಗಳು ಸಂಭವಿಸುತ್ತದೆ. ಗ್ರಾಮೀಣಾಭಿವೃದ್ಧಿ, ಆರೋಗ್ಯ, ಪೌರಾಡಳಿತ ಹಾಗೂ ನಗರಾಭಿವೃದ್ಧಿ – ಈ ನಾಲ್ಕು ಇಲಾಖೆಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು ಎಂದು ಸೂಚನೆ ನೀಡಿದರು.ಹಾಸ್ಟೆಲ್ ಗಳಲ್ಲಿಯೂ ವಿದ್ಯಾರ್ಥಿಗಳು ಕಲುಷಿತ ನೀರು ಕುಡಿದು ಆಸ್ಪತ್ರೆ ಸೇರಿದ್ದಾರೆ . ಈ ಬಗ್ಗೆ ಸಮರೋಪಾದಿಯಲ್ಲಿ ಕೆಲಸಗಳಾಗಬೇಕು, ಪೈಪ್‌ಲೈನ್ ಸರಿಪಡಿಸುವುದು, ಟ್ಯಾಂಕ್ ಸ್ವಚ್ಛತಾ ಕಾರ್ಯ ತುರ್ತಾಗಿ ಕೈಗೊಳ್ಳಬೇಕು ಎಂದು ಸೂಚಿಸಿದರು.ನೈರ್ಮಲ್ಯ ಮತ್ತು ಸ್ವಚ್ಛತೆಗೆ ಪ್ರತ್ಯೇಕವಾಗಿ ಕನಿಷ್ಠ ಮೊತ್ತವನ್ನು ನಿಗದಿ ಮಾಡಬೇಕು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಇದೇ ವೇಳೆ ಅಭಿಪ್ರಾಯಪಟ್ಟರು. ಸಾಮಾನ್ಯವಾಗಿ ಎಸ್‌ಸಿಎಸ್‌ಪಿ, ಟಿಎಸ್‌ಪಿಯಡಿ ಆದ್ಯತೆಯನ್ನು ರಸ್ತೆ, ಇನ್ನಿತರ ಕಾಮಗಾರಿಗಳಿಗೆ ವಹಿಸಲಾಗುತ್ತದೆ ಎಂದರು.39 ತಾಲ್ಲೂಕುಗಳಲ್ಲಿ ಕುಡಿಯುವ ನೀರಿನ ಅಭಾವವಿದೆ. 121 ಹಳ್ಳಿಗಳಲ್ಲಿ ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡಲಾಗುತ್ತಿದೆ. ಇದಕ್ಕೆ 86 ಕೋಟಿ ರೂ.ಗಳ ಅನುದಾನ ಅಗತ್ಯವಿದೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಸಭೆಯ ಗಮನಕ್ಕೆ ತಂದರು.ಎಲ್ಲಿಯೂ ಕುಡಿಯುವ ನೀರಿಗೆ ಸಮಸ್ಯೆಯಾಗಬಾರದು. ನೀರಿನ ಸ್ವಚ್ಛತೆ ಬಗ್ಗೆ ಆದ್ಯತೆ ವಹಿಸಿ ಎಂದು ಮುಖ್ಯಮಂತ್ರಿಗಳು ಸೂಚಿಸಿದರು.ಸಭೆಯಲ್ಲಿ ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್, ಸಹಕಾರ ಸಚಿವ ಕೆ.ಎನ್.ರಾಜಣ್ಣ, ಪೌರಾಡಳಿತ ಸಚಿವ ರಹೀಮ್ ಖಾನ್, ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ, ಮುಖ್ಯಮಂತ್ರಿಯವರ ಅಪರ ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯಲ್, ಸೇರಿದಂತೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:thirteen − 2 =
Remember me
