ಚಿತ್ರದುರ್ಗ:ಜಿಲ್ಲಾ ಕುಷ್ಠರೋಗ ನಿವಾರಣಾಧಿಕಾರಿ ಡಾ.ರೂಪಾ ಅನುಮಾನಾಸ್ಪದವಾಗಿ ಸಾವಿಗೀಡಾಗಿದ್ದು, ಅವರ ಪತಿ ಡಾ.ರವಿ ಪೊಲೀಸರಿಗೆ ದೂರು ನೀಡಿದ್ದಾರೆ. ಚಿತ್ರದುರ್ಗ ಜಿಲ್ಲೆಯಲ್ಲಿ ಇಂದು ಈ ಪ್ರಕರಣ ನಡೆದಿದೆ.
ಜಿಲ್ಲಾ ಕುಷ್ಠರೋಗ ನಿವಾರಣಾಧಿಕಾರಿ ಡಾ.ರೂಪಾ ಇಂದು ಮನೆಯಲ್ಲಿ ಕಾಲು ಜಾರಿ ಬಿದ್ದಿದ್ದರು ಎಂಬ ಮಾಹಿತಿ ಬಂದಿತ್ತು. ಚಿತ್ರದುರ್ಗದ ವಿ.ಪಿ. ಎಕ್ಸ್​ಟೆನ್ಷನ್ ಬಡಾವಣೆಯ‌ ಮನೆಯಲ್ಲಿ ಈ ಘಟನೆ ನಡೆದಿದೆ.
ಮನೆಯಲ್ಲಿ ಕಾಲು ಜಾರಿ ಬಿದ್ದು, ತಲೆಗೆ ಪೆಟ್ಟು ಬಿದ್ದು ರಕ್ತಸ್ರಾವವಾಗಿದೆ ಎನ್ನಲಾಗಿದೆ. ಅದರಲ್ಲೂ ಜಿಲ್ಲಾಸ್ಪತ್ರೆಗೆ ತೆರಳುವಷ್ಟರಲ್ಲಿ ಸಾವು ಎಂಬ ಮಾಹಿತಿ ಬಂದಿರುವುದು ಅನುಮಾನಕ್ಕೆ ಕಾರಣವಾಗಿದೆ ಎನ್ನಲಾಗಿದೆ.
ಪ್ರಕರಣದ ಬಗ್ಗೆ ಡಾ.ರೂಪಾ ಪತಿ ಡಾ.ರವಿ ಪೊಲೀಸರಿಗೆ ಮಾಹಿತಿ ನೀಡಿದ್ದು, ಚಿತ್ರದುರ್ಗ ನಗರ ಠಾಣೆ ಪೊಲೀಸರು ಸ್ತಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿ ಇನ್ನಷ್ಟೇ ಹೊರಬರಬೇಕಾಗಿದೆ. ಇನ್ನೊಂದು ಮಾಹಿತಿ ಪ್ರಕಾರ, ತಲೆಗೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂಬ ಶಂಕೆಯೂ ಇದೆ.
ಖ್ಯಾತ ಗಾಯಕನ ಆಸ್ತಿಯೇ ಒತ್ತುವರಿ; ಭೂಮಾಫಿಯಾಗೆ ಕೈಜೋಡಿಸಿದ ಐಎಎಸ್​ ಅಧಿಕಾರಿ ರೋಹಿಣಿ ಸಿಂಧೂರಿ!?
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 × 2 =
Remember me
