ನಂಜನಗೂಡು:ಧಾರ್ವಿುಕ, ಸಾಮಾಜಿಕ ಹಾಗೂ ಸಾಂಸ್ಕೃತಿಕವಾಗಿ ಜನಜಾಗೃತಿ ಪ್ರತೀಕವಾಗಿರುವ ಸುತ್ತೂರು ಶ್ರೀವೀರಸಿಂಹಾಸನ ಮಹಾಸಂಸ್ಥಾನ ಸಂಸ್ಥಾಪನಾಚಾರ್ಯ ಆದಿಜಗದ್ಗುರು ಶ್ರೀ ಶಿವರಾತ್ರೀಶ್ವರ ಶಿವಯೋಗಿಗಳ ಜಾತ್ರಾ ಮಹೋತ್ಸವ ಜ.21ರಿಂದ 26ವರೆಗೆ ನಡೆಯಲಿದೆ. ಕಪಿಲಾ ನದಿ ತಟದಲ್ಲಿರುವ ಸುಕ್ಷೇತ್ರವನ್ನು ಜಾತ್ರಾ ಮಹೋತ್ಸವಕ್ಕಾಗಿ ಸಕಲ ಸಿದ್ಧತೆಯೊಂದಿಗೆ 15 ಲಕ್ಷಕ್ಕೂ ಹೆಚ್ಚು ಭಕ್ತರ ಆತಿಥ್ಯಕ್ಕೆ ಸನ್ನದ್ಧಗೊಳಿಸಲಾಗಿದೆ.
ಮಹಾ ದಾಸೋಹಕ್ಕೆ ಸಕಲ ತಯಾರಿ ಆರಂಭಗೊಂಡಿದೆ. ವಸ್ತುಪ್ರದರ್ಶನ ಹಾಗೂ ಕೃಷಿ ಮೇಳಕ್ಕೆ ಪೂರಕ ಸಿದ್ಧತೆ ಕೈಗೊಳ್ಳಲಾಗಿದೆ. ಕೊಂಡೋತ್ಸವ, ಹಾಲರವಿ ಉತ್ಸವ, ಲಕ್ಷದೀಪೋತ್ಸವ ಸೇರಿ ವೈವಿಧ್ಯಮಯ ಕಾರ್ಯಕ್ರಮಗಳ ಮೂಲಕ ಕಳೆಗಟ್ಟಲಿದೆ ಎಂದು ಜೆಎಸ್​ಎಸ್ ಮಹಾವಿದ್ಯಾಪೀಠ ಕಾರ್ಯದರ್ಶಿ ಎಸ್.ಪಿ. ಮಂಜುನಾಥ್ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಜ.21ರಂದು ಬೆಳಗ್ಗೆ 8ಕ್ಕೆ ಜಾತ್ರೋತ್ಸವಕ್ಕೆ ಚಾಲನೆ. ಧಾರ್ವಿುಕ, ಸಾಂಸ್ಕೃತಿಕ ಕಾರ್ಯಕ್ರಮ ಪ್ರತಿದಿನ ನಡೆಯಲಿದ್ದು, ವಿವಿಧ ಮಠಗಳ ಸ್ವಾಮೀಜಿಗಳು ಹಾಜರಿರುವರು. ಸಿಎಂ ಯಡಿಯೂರಪ್ಪ, ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ, ಮಾಜಿ ಮುಖ್ಯಮಂತ್ರಿಗಳು, ಕೇಂದ್ರ ಹಾಗೂ ರಾಜ್ಯ ಸಚಿವರು ಸೇರಿ ನಾಡಿನ ಗಣ್ಯರು ಪಾಲ್ಗೊಳ್ಳಲಿದ್ದಾರೆ ಎಂದರು.
ಜಾತ್ರಾ ವಿಶೇಷ
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:10 − 10 =
Remember me
