ಬೆಳಗಾವಿ:ಉತ್ತರಕರ್ನಾಟಕದ ಮಂದಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸಿಹಿಸುದ್ದಿ ನೀಡಿದ್ದಾರೆ. ಅರ್ಥಾತ್, ಸುವರ್ಣ ಸೌಧವನ್ನು ಆಡಳಿತದ ಶಕ್ತಿಕೇಂದ್ರ ಮಾಡುವುದಾಗಿ ಭರವಸೆ ನೀಡಿರುವ ಅವರು, ಸಕ್ಕರೆ ಆಯುಕ್ತರ ಕಚೇರಿ ಸೇರಿ ಮಹತ್ವದ ಕಚೇರಿಗಳನ್ನು ಬೆಳಗಾವಿ ಸುವರ್ಣ ವಿಧಾನಸೌಧಕ್ಕೆ ಸ್ಥಳಾಂತರಿಸಲಾಗುವುದು ಎಂದು ಹೇಳಿದ್ದಾರೆ.
ಸುವರ್ಣ ವಿಧಾನಸೌಧದಲ್ಲಿ ಇಂದು ಅಧಿಕಾರಿಗಳ ಸಭೆ ಕರೆದ ಬಳಿಕದ ಸುದ್ದಿಗೋಷ್ಠಿಯಲ್ಲಿ ಅವರು ಈ ವಿಷಯ ತಿಳಿಸಿದರು. ಸುವರ್ಣ ವಿಧಾನಸೌಧವನ್ನು ಆಡಳಿತದ ಶಕ್ತಿಕೇಂದ್ರ ಆಗಿಸಲು ಬದ್ಧರಿದ್ದೇವೆ. ಡಿಸೆಂಬರ್​ನಲ್ಲಿ ಚಳಿಗಾಲದ ಅಧಿವೇಶನವನ್ನೂ ನಡೆಸಲಿದ್ದೇವೆ ಎಂದ ಅವರು ಸಕ್ಕರೆ ಆಯುಕ್ತಾಲಯ ಬೆಳಗಾವಿಗೆ ಸ್ಥಳಾಂತರಿಸಲು ಆದೇಶ ನೀಡಲಾಗುವುದು ಎಂದರು.
ಇದನ್ನೂ ಓದಿ:ಇವರಿಷ್ಟು ಮಂದಿಗೆ ಎರಡೂ ಡೋಸ್ ಲಸಿಕೆ ಪಡೆದಿದ್ದರೂ ಕರೊನಾ ಬಂತು!; ಈ ಪೈಕಿ ಕೇರಳದಲ್ಲೇ ಗರಿಷ್ಠ ಪ್ರಕರಣ…
ಕೋವಿಡ್​ ಪರಿಸ್ಥಿತಿ ನಿರ್ವಹಣೆ ಕುರಿತು ಮಾತನಾಡಿದ ಅವರು, ಅದಕ್ಕಾಗಿ ಎಲ್ಲ ಕ್ರಮಗಳನ್ನು ತೆಗೆದುಕೊಳ್ಳಲಾಗಿದ್ದು, ಗಡಿಜಿಲ್ಲೆಗಳಲ್ಲಿ ಕಟ್ಟುನಿಟ್ಟಿನ ಕ್ರಮ ಜರುಗಿಸಲಾಗಿದೆ. ಆಸ್ಪತ್ರೆ, ಆಕ್ಸಿಜನ್, ಔಷಧ ಮತ್ತಿತರ ವ್ಯವಸ್ಥೆಯನ್ನೂ ಮಾಡಲಾಗಿದೆ ಎಂದರು. ಬೆಳಗಾವಿ ಪಾಸಿಟಿವಿಟಿ ದರ ಕಡಿಮೆಯಾಗಿದೆ. ಗೋಕಾಕ, ಚಿಕ್ಕೋಡಿ, ಸವದತ್ತಿ, ಬೆಳಗಾವಿ ಮತ್ತಿತರೆಡೆ ಸೇರಿ ಒಟ್ಟು ಹತ್ತು ಆಕ್ಸಿಜನ್ ‌ಉತ್ಪಾದನಾ ಘಟಕ ಸ್ಥಾಪನೆಗೆ ತೀರ್ಮಾನಿಸಲಾಗಿದೆ. ಇಪ್ಪತ್ತು ದಿನಗಳಲ್ಲಿ ಎಲ್ಲ ಆಕ್ಸಿಜನ್ ಘಟಕಗಳನ್ನೂ ಸಿದ್ಧಪಡಿಸಲಾಗುವುದು ಎಂದು ಸಿಎಂ ತಿಳಿಸಿದರು.
ಸರ ಕದ್ದು ಪರಾರಿ ಆಗುವಾಗಲೇ ಸಾರ್ವಜನಿಕರ ಕೈಗೆ ಸಿಕ್ಕಿಬಿದ್ದ; ಬೈಕ್​ ಕಳವು ಪ್ರಕರಣದಲ್ಲೂ ತಗಲಾಕೊಂಡ..

ಟೇಬಲ್ ಮೇಲಿತ್ತು ಮೂರು ಟೀ ಕಪ್​; ದಂಪತಿಯನ್ನು ಪರಿಚಿತರೇ ಕೊಂದರಾ?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:one × 1 =
Remember me
