ಬೆಂಗಳೂರು:ನಗರ-ಪಟ್ಟಣಗಳನ್ನು ಮಲಿನ ಮುಕ್ತಗೊಳಿಸಲು ಸ್ವಚ್ಛ ಭಾರತ ಮಿಷನ್ ಎರಡನೇ ಹಂತದಲ್ಲಿ ಆದ್ಯತೆ ನೀಡಿದೆ. ಪೂರ್ವಸಿದ್ಧತೆಗಳು ತಯಾರಿಯನ್ನು ರಾಜ್ಯ ಸರ್ಕಾರ ಖಚಿತಪಡಿಸಿಕೊಂಡು, ಕಾರ್ಯಕ್ರಮ ಅನುಷ್ಠಾನಕ್ಕೆ ಅಸ್ತು ಎಂದಿದೆ.
ಮೊದಲ ಹಂತದಲ್ಲಿ ಗ್ರಾಮೀಣ ಪ್ರದೇಶಕ್ಕೆ ಪ್ರಾಶಸ್ತ್ಯ ನೀಡಲಾಗಿತ್ತು. ಗ್ರಾಮಗಳನ್ನು ಬಯಲು ಶೌಚ ಮುಕ್ತಗೊಳಿಸಲೆಂದು ವೈಯಕ್ತಿಕ, ಸಮುದಾಯ ಶೌಚಗೃಹ ನಿರ್ಮಾಣ, ನೈರ್ಮಲ್ಯೀಕರಣ, ಅರಿವು ಚಟುವಟಿಕೆಗಳನ್ನು ನಡೆಸಲಾಗಿತ್ತು.
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಸೇರಿ ರಾಜ್ಯದ ಎಲ್ಲ ನಗರ-ಪುರ, ಪಟ್ಟಣಗಳನ್ನು ಸ್ವಚ್ಛ ಭಾರತ್ ಮಿಷನ್ 2.0 ಕೇಂದ್ರೀಕರಿಸಿದೆ. ಮಲಿನ ಮುಕ್ತಗೊಳಿಸುವ ಮೂಲಕ ಸ್ವಚ್ಛ, ಸುಂದರ ವಾತಾವರಣ ನಿರ್ಮಾಣಕ್ಕೆ ಗಮನ ನೀಡಲಿದೆ.
ಕೇಂದ್ರ, ರಾಜ್ಯ ಸರ್ಕಾರಗಳ ಸಹಭಾಗಿತ್ವದಲ್ಲಿ ಈ ಅಭಿಯಾನ ನಡೆಯಲಿದೆ. ಇದಕ್ಕಾಗಿ ಕೇಂದ್ರ ಸರ್ಕಾರದ ಪಾಲು 2,185 ಕೋಟಿ ರೂ. ಸೇರಿ 5,072 ಕೋಟಿ ರೂ. ಅನುದಾನ ನಿಗದಿಯಾಗಿದೆ.
ಪ್ರಸಕ್ತ ವರ್ಷದಲ್ಲಿ ಜಲ ಮೂಲಗಳನ್ನು ಮಲಿನಗೊಳಿಸುವ ದ್ರವ ತ್ಯಾಜ್ಯಗಳ ಸಂಸ್ಕರಣೆ, ಘನ ತ್ಯಾಜ್ಯದ ವೈಜ್ಞಾನಿಕ ವಿಲೇವಾರಿ ಮತ್ತು ವಿಂಗಡಣೆ, ಮರುಬಳಕೆ ಇತ್ಯಾದಿ ಕಾರ್ಯಚಟುವಟಿಕೆಯು ಇರಲಿವೆ.
ಕಾರ್ಯಕ್ರಮ ಸಮರ್ಪಕ, ಪರಿಣಾಮಕಾರಿ ಅನುಷ್ಠಾನಕ್ಕಾಗಿ ಕೆಯುಐಡಿಎ್ಸಿ ಸಂಸ್ಥೆಯನ್ನು ನೋಡಲ್ ಏಜನ್ಸಿಯನ್ನಾಗಿ ಸರ್ಕಾರ ನೇಮಿಸಿದೆ. ಕಾಲಮಿತಿಯೊಳಗೆ ಕ್ರಿಯಾ ಯೋಜನೆ ರೂಪಿಸಿ ಅನುಮೋದನೆ ಪಡೆಯಲು ಸೂಚಿಸಿದೆ.
ದ್ರವ ತ್ಯಾಜ್ಯ ನಿರ್ವಹಣೆ ಕಾರ್ಯನೀತಿ, ಮಾರ್ಗಸೂಚಿ, ಕೇಂದ್ರ-ರಾಜ್ಯ ಸರ್ಕಾರಗಳು ಕಾಲಕ್ಕೆ ಹೊರಡಿಸುವ ಆದೇಶ ಪಾಲನೆ ಸೇರಿ ಹಲವು ಷರತ್ತುಗಳನ್ನು ವಿಧಿಸಿ ನಗರಾಭಿವೃದ್ಧಿ ಇಲಾಖೆ (ಯೋಜನೆ) ಆದೇಶಿಸಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:16 − 3 =
Remember me
