ರಾಯಚೂರು:ಸ್ವಚ್ಛ ಭಾರತದ ಅಭಿಯಾನದ ಪ್ರೇರಣೆಯಾಗಿ ಸ್ವಚ್ಚ ಮಂತ್ರಾಲಯ ಶೀರ್ಷಿಕೆಯಡಿಯಲ್ಲಿ ಶ್ರೀಗುರು ರಾಘವೇಂದ್ರ ಸ್ವಾಮಿಗಳ ಸನ್ನಿಧಿ ಮಂತ್ರಾಲಯದಲ್ಲಿ ಎರಡು ದಿನಗಳ ಕಾಲ ಮಾಜಿ ಸಚಿವ ಅರವಿಂದ ಲಿಂಬಾವಳಿ ಅವರ ನೇತ್ರತ್ವದಲ್ಲಿ ಹಮ್ಮಿಕೊಂಡಿರುವ ಸ್ವಚ್ಛ ಮಂತ್ರಾಲಯ ಕಾರ್ಯಕ್ರಮಕ್ಕೆ ಮಠದ ಪೀಠಾಧಿಪತಿಗಳಾದ ಶ್ರೀಸುಬುಧೇಂದ್ರ ತೀರ್ಥ ಸ್ವಾಮಿಗಳು ಚಾಲನೆ ನೀಡಿದರು.
ಇದನ್ನೂ ಓದಿ:ನಾಳೆ ರೈತ ಸಂಘದಿಂದ ಬೃಹತ್ ಪಾದಯಾತ್ರೆ: ಕೋಡಿಹಳ್ಳಿ ಚಂದ್ರಶೇಖರ್
ನಂತರ ಮಾತನಾಡಿದ ಶ್ರೀಸುಬುಧೇಂದ್ರ ಸ್ವಾಮೀಜಿ, “ಮಹಾತ್ಮ ಗಾಂಧಿಯವರ ಕನಸಿನ ಭಾರತ ಸುಂದರವಾಗಿಸುವ ದೃಷ್ಟಿಯಿಂದ ಸ್ವಚ್ಛ ಭಾರತ ಅಭಿಯಾನ ಕಾರ್ಯಕ್ರಮ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ಹಮ್ಮಿಕೊಳ್ಳುತ್ತ ಬರಲಾಗುತ್ತದೆ. ಇದೇ ದೃಷ್ಟಿಯಿಂದ ತೀರ್ಥ ಕ್ಷೇತ್ರ ಮಠ ಮಂದಿರಗಳಲ್ಲಿನ ಸ್ವಚ್ಛತೆ ಕೊರತೆ ಇರುವುದನ್ನು ಮನಗಂಡು, ಸ್ವಚ್ಛ ಅಭಿಯಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಮಹದೇವಪುರ ಕ್ಷೇತ್ರದ ಮುಖಂಡರು ಕಾರ್ಯಕರ್ತರ ತಂಡ ಸ್ವಚ್ಛ ಮಂತ್ರಾಲಯ ಹಮ್ಮಿಕೊಂಡಿರುವುದು ಶ್ಲಾಘನೀಯ” ಎಂದರು.
“ಭಾರತ ದೇಶಕ್ಕೆ ವಿಶಿಷ್ಟ ಸ್ಥಾನವಿದೆ. ಭಾರತ ದೇಶ ಸ್ವಚ್ಛವಾಗಿಲ್ಲ ಎನ್ನುವ ಅಪವಾದ ಸರಿಯಲ್ಲ. ವಿದೇಶದಲ್ಲಿ ಸ್ವಚ್ಛತೆಗೆ ಪ್ರಾಮುಖ್ಯತೆ ಕೊಡಲಾಗುತ್ತದೆ. ಆದರೆ ಭಾರತ ದೇಶದಲ್ಲಿ ಕಸ ನಿರ್ವಹಣೆ ಬಗ್ಗೆ ಜಾಗೃತಿ ಇಲ್ಲದೆ ಇರುವುದರಿಂದ ಸ್ವಚ್ಛತೆಗೆ ಪ್ರಾಮುಖ್ಯತೆ ಕೊಡಲಾಗುತ್ತಿಲ್ಲ. ಈ ಬಗ್ಗೆ ಗಮನ ಕೊಡಬೇಕಾದ ಅವಶ್ಯಕತೆ ಇದೆ. ಉಪನ್ಯಾಸ ಮಾಡಿದರೆ ಸಾಲದು, ಕಸದ ಬಗ್ಗೆ ಪ್ರತಿಯೊಬ್ಬರೂ ಜಾಗೃತಿ ವಹಿಸಬೇಕು” ಎಂದರು.
ಇದನ್ನೂ ನೋಡಿ: https://youtu.be/rteKOLgLNLw
ಮಾಜಿ ಸಚಿವ ಹಾಗೂ ಮಂತ್ರಾಲಯ ಅಭಿವೃದ್ಧಿ ಸಮಿತಿ ಸದಸ್ಯ, ಅರವಿಂದ ಲಿಂಬಾವಳಿ ಮಾತನಾಡಿ, “ಎರಡು ದಿನಗಳ ಕಾಲ ನಡೆಯುತ್ತಿರುವ ಸ್ವಚ್ಛ ಮಂತ್ರಾಲಯ ಕಾರ್ಯಕ್ರಮದಲ್ಲಿ ಮಹದೇವಪುರದ ಕ್ಷೇತ್ರದ ಮುಖಂಡರು ಕಾರ್ಯಕರ್ತರ ತಂಡ ಮಠದ ವಿವಿಧ ಭಾಗಗಳಲ್ಲಿ ಸ್ವಚ್ಛತೆ ನಡೆಸಲಿದ್ದಾರೆ. ನರೇಂದ್ರ ಮೋದಿಯವರ ಸ್ವಚ್ಛ ಭಾರತ ಕಲ್ಪನೆಯ ದೃಷ್ಟಿಯಿಂದ ಸ್ವಚ್ಛ ಮಂತ್ರಾಲಯ ಅಭಿಯಾನ ಹಮ್ಮಿಕೊಂಡಿದ್ದೇವೆ” ಎಂದರು.
ಮಹದೇವಪುರ ಕ್ಷೇತ್ರದ ಮುಖಂಡರು, ಕಾರ್ಯಕರ್ತರು ಒಳಗೊಂಡಿರುವ ಕರಸೇವಕರ 800ಕ್ಕೂ ಹೆಚ್ಚು ಜನ ಒಳಗೊಂಡಿರುವ ತಂಡ ಮಠದ ವಿವಿಧ ಭಾಗಗಳಾದ ಗೋಶಾಲೆ, ತುಂಗಭದ್ರಾ ನದಿ ತೀರ, ಕಲ್ಯಾಣಿ, ಸಾರ್ವಜನಿಕ ಗಾರ್ಡನ್, ಪಾಕಶಾಲೆ, ಪ್ರಸಾದ ವಿತರಣೆ ಕೇಂದ್ರ ಮುಂತಾದಡೆ ಸ್ವಚ್ಛಗೊಳಿಸುವ ಕಾರ್ಯ ನಡೆಸಿದರು.
ಇದನ್ನೂ ಓದಿ:ಬೆಂಗಳೂರು ಬಂದ್: ಶಾಲೆ-ಕಾಲೇಜುಗಳಿಗೆ ರಜೆ, ಪರೀಕ್ಷೆಗಳು ಮುಂದೂಡಿಕೆ
ಈ ಸಂಧರ್ಭದಲ್ಲಿ ಮಹದೇವಪುರ ಕ್ಷೇತ್ರದ ನಗರ ಮಂಡಲ ಬಿಜೆಪಿ ಅಧ್ಯಕ್ಷ ಮನೋಹರ ರೆಡ್ಡಿ, ಗ್ರಾಮಾಂತರ ಮಂಡಲ ಅಧ್ಯಕ್ಷ ನಟರಾಜ್, ವೆಂಕಟಸ್ವಾಮಿ ರೆಡ್ಡಿ, ಮಹೇಂದ್ರ ಮೋದಿ, ಎಲ್.ರಾಜೇಶ್, ಪಿಳ್ಳಪ್ಪ, ಜಯದೇವ್, ಬಾಬುರೆಡ್ಡಿ, ಬಿದರಹಳ್ಳಿ ರಾಜೇಶ್, ಅಶೋಕ್, ನಲ್ಲೂರಹಳ್ಳಿ ಚಂದ್ರಶೇಖರ್ ರೆಡ್ಡಿ, ಚನ್ನಸಂದ್ರ ಚಂದ್ರಶೇಖರ್, ವರ್ತೂರು ಶ್ರೀಧರ್, ಜ್ಯೋತಿ ಪುರ ವೇಣು ಮತ್ತಿತ್ತರರು ಉಪಸ್ಥಿತರಿದ್ದರು.
ಕೇವಲ 18 ದಿನಗಳಲ್ಲಿ ಮೈಲಿಗಲ್ಲು ಸಾಧಿಸಿದ ‘ಜವಾನ್’​; ಬಾಕ್ಸ್​ ಆಫೀಸ್​ ಒಟ್ಟು ಗಳಿಕೆ ಹೀಗಿದೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:1 × one =
Remember me
