ಬೆಂಗಳೂರು: ನಗರದ ಆನಂದರಾವ್ ವೃತ್ತದಲ್ಲಿರುವ ಕೆಪಿಟಿಸಿಎಲ್ ಲೆಕ್ಕಾಧಿಕಾರಿಗಳ ಭವನದಲ್ಲಿ, ಸಂಯುಕ್ತ ಸ್ವಕುಳಸಾಳಿ ಸಂಘವು ಶನಿವಾರ ಭಗವಾನ್ ಶ್ರೀ ಜಿಹ್ವೇಶ್ವರ ಜಯಂತಿ ಕಾರ್ಯಕ್ರಮವನ್ನು ಆಯೋಜಿಸಿತ್ತು. ಕೇಂದ್ರ ರೈಲ್ವೆ ಹಾಗೂ ಜಲಶಕ್ತಿ ರಾಜ್ಯ ಸಚಿವ ವಿ.ಸೋಮಣ್ಣ, ಮಾಜಿ ಶಾಸಕ ಎಂ.ಡಿ.ಲಕ್ಷ್ಮೀನಾರಾಯಣ ಮತ್ತಿತರರು ಪಾಲ್ಗೊಂಡಿದ್ದರು. ವಿಭೂತಿಪುರ ಮಠದ ಡಾ.ಮಹಾಂತಲಿಂಗ ಶಿವಾಚಾರ್ಯ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು.
ಸಮಾರಂಭದಲ್ಲಿ ಸಮಾಜದ ವಿವಿಧ ಕ್ಷೇತ್ರದ ಸಾಧಕರುಗಳಾದ ಈಶ್ವರ್‌ರಾವ್ ಕಾಪ್ಸೆ, ಡಾ.ನರೇಂದ್ರರಾವ್ ಪಾಂಡ್ರೆ, ಡಿ.ವೀಣಾ ಸರೋದೆ, ಶಿವಶಂಕರ ಹಾಲುಬಾಯಿ, ನಾಗರಾಜ ಸುರಸ್ಗಾರ್, ಸುರೇಶ್ ಬಾಬು, ವರ್ಧನ್ ಬಾಲು, ಸವಿತಾ ಹಾಗೂ ಶ್ರೀನಿವಾಸ್ ಪಾಣಿಭಾತೆರವರನ್ನು ಸನ್ಮಾನಿಸಲಾಯಿತು. ಇದೇ ವೇಳೆ ಎಸ್ಸೆಲ್ಸಿ ಮತ್ತು ಪಿಯುಸಿ ಹಾಗೂ ಪದವಿ ಪರೀಕ್ಷೆ ಗಳಲ್ಲಿ ಹೆಚ್ಚಿನ ಅಂಕ ಪಡೆದ ಸಮಾಜದ ವಿದ್ಯಾರ್ಥಿಗಳಿಗೆ ಬೆಳ್ಳಿ ಪದಕ ಹಾಗೂ ನಗದು ಬಹುಮಾನ ನೀಡಿ ಪ್ರೋತ್ಸಾಹಿಸಲಾಯಿತು.
ನಂತರ ನಡೆದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಅಂಧ ಕಲಾವಿದರು ಧಾರ್ಮಿಕಗೀತೆ ಹಾಡಿದರು. ಅಮರನಾಥ ಜಿಂದೆ, ಕಲಬುರ್ಗಿಯ ಗುಂಡಣ್ಣ ಡಿಗ್ಗಿ ಹಾಸ್ಯ ಕಾರ್ಯಕ್ರಮ ನಡೆಸಿಕೊಟ್ಟರು. ಸಂಯುಕ್ತ ಸ್ವಕುಳಸಾಳಿ ಸಂಘದ ರಾಜ್ಯಾಧ್ಯಕ್ಷ ಚಂದ್ರಕಾಂತ ಭಂಡಾರೆ, ಸಂಘದ ಅಧ್ಯಕ್ಷ ಪ್ರದೀಪ್ ರೋಖಡೆ, ಡಾ ಪುಷ್ಪಾ ಕ್ಷೀರಸಾಗರ, ಜಲಜಾ ಸವ್ವಾಸೇರೆ ಮತ್ತಿತರರು ಉಪಸ್ಥಿತರಿದ್ದರು.
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:fourteen + 19 =
Remember me
