ಶಿರಸಿ:ಮುಜರಾಯಿ ಇಲಾಖೆಗೆ ಸೇರದ ದೇವಸ್ಥಾನಗಳಿಗೂ ಸರ್ಕಾರ ವ್ಯವಸ್ಥಾಪನಾ ಸಮಿತಿ ನೇಮಕ ಮಾಡಲು ಮುಂದಾಗಿರುವುದನ್ನು ಸೋಂದಾ ಸ್ವರ್ಣವಲ್ಲೀ ಮಹಾ ಸಂಸ್ಥಾನದ ಮಠಾಧೀಶ, ಹಿಂದು ಮಹಾ ಮಂಡಳದ ಗೌರವಾಧ್ಯಕ್ಷ ಶ್ರೀ ಗಂಗಾಧರೇಂದ್ರ ಸರಸ್ವತೀ ಸ್ವಾಮೀಜಿ ಖಂಡಿಸಿದ್ದಾರೆ.
ಈ ಕುರಿತು ಪ್ರತಿಕ್ರಿಯೆ ನೀಡಿದ ಅವರು, ಈಗಾಗಲೇ ಕರ್ನಾಟಕ ಹಿಂದು ಧಾರ್ವಿುಕ ಸಂಸ್ಥೆಗಳು ಮತ್ತು ಧರ್ಮಾಧಾರಿತ ಸಂಸ್ಥೆಗಳ ತಿದ್ದುಪಡಿ ಅಧಿನಿಯಮ 2011ರ ಕುರಿತು ಸುಪ್ರಿಂ ಕೋರ್ಟ್​ನಲ್ಲಿ ವಿಚಾರಣೆ ನಡೆಯುತ್ತಿದೆ. ವಿಚಾರಣೆಯ ಹಂತದಲ್ಲಿ ಇರಬೇಕಾದರೆ ಯಾವುದೋ ಒಂದು ಸೆಕ್ಷನ್​ಗೆ ಮಾತ್ರ ವಿನಾಯಿತಿ ತೆಗೆದುಕೊಂಡು ಈ ರೀತಿಯ ಪ್ರಕ್ರಿಯೆಗೆ ಮುಂದಾಗುವುದು ನ್ಯಾಯವಲ್ಲ ಎಂದಿದ್ದಾರೆ.
ಈ ಕಾನೂನಿನ ಬಗ್ಗೆ 22 ವರ್ಷಗಳಿಂದ ನಮ್ಮ ಆಗ್ರಹವನ್ನು ಸಲ್ಲಿಸುತ್ತಲೇ ಇದ್ದೇವೆ. ಈಗಾಗಲೇ 2 ಬಾರಿ ರಾಜ್ಯ ಉಚ್ಚ ನ್ಯಾಯಾಲಯವು ಈ ಕಾನೂನನ್ನು ಅಸಾಂವಿಧಾನಿಕ ಎಂದು ತಿರಸ್ಕರಿಸಿದೆ. ಇಂಥ ಕಾನೂನಿನ ಬಗ್ಗೆಯೇ ಮತ್ತೆ ಜಾರಿಗೆ ಪ್ರಯತ್ನಿಸುವುದು ಸರಿಯಲ್ಲ. ಸರ್ವಸಮ್ಮತವಾದ ಹೊಸ ಕಾನೂನನ್ನು ಜಾರಿಗೆ ತರಲು ಅವಕಾಶವಿದೆ. ಸರ್ಕಾರ ಈ ನಿಟ್ಟಿನಲ್ಲಿ ಪ್ರಯತ್ನಿಸಬೇಕು. ಸರ್ವಸಮ್ಮತವಾದ ಕಾನೂನು ಜಾರಿಗೆ ಬರುವ ತನಕ ಸರ್ಕಾರ ಈ ರೀತಿಯ ಪ್ರಯತ್ನಗಳನ್ನು ಸ್ಥಗಿತಗೊಳಿಸಬೇಕು ಎಂದರು.
ಇದನ್ನೂ ಓದಿ:ದೀಪಾವಳಿಗೆ ಬೋನಸ್ ನೀಡದ ಮಾಲೀಕನ ಬರ್ಬರ ಹತ್ಯೆ..ಡಾಬಾ ಕಾರ್ಮಿಕರ ಕೃತ್ಯಕ್ಕೆ ಬೆಚ್ಚಿಬಿದ್ದ ನಾಗ್ಪುರ ಜನ
ರಾಜ್ಯ ಸರ್ಕಾರ ವ್ಯವಸ್ಥಾಪನಾ ಸಮಿತಿ ರಚನೆಗೆ ಹೊರಟಿರುವ ರಾಜ್ಯದ ವಿವಿಧ ದೇವಸ್ಥಾನಗಳ ಪೈಕಿ ಮುಜರಾಯಿ ಇಲಾಖೆಗೆ ಸೇರದ ಅನೇಕ ದೇವಸ್ಥಾನಗಳಿವೆ. ಆ ದೇವಸ್ಥಾನಗಳಿಗೂ ವ್ಯವಸ್ಥಾಪನ ಸಮಿತಿ ರಚಿಸುವ ಬಗ್ಗೆ ಆದೇಶ ಹೊರಡಿಸಿ, ಅರ್ಜಿಗಳನ್ನು ಆಹ್ವಾನಿಸಿದೆ. ಮುಜರಾಯಿ ಇಲಾಖೆಗೆ ಸೇರಿದ ದೇವಸ್ಥಾನಗಳಿಗೆ, ಅದರಲ್ಲೂ ವಿಶೇಷವಾಗಿ ಮೈಸೂರು ಮಹಾರಾಜರ ಆಳ್ವಿಕೆಯಲ್ಲಿದ್ದು ಬಳಿಕ ಕರ್ನಾಟಕ ರಾಜ್ಯ ಸರ್ಕಾರದ ಆಡಳಿತಕ್ಕೆ ಹಸ್ತಾಂತರವಾದ ದೇವಸ್ಥಾನಗಳಿಗೆ ಆಡಳಿತ ವ್ಯವಸ್ಥೆ ನೇಮಕ ಮಾಡಲಿ. ಅದಕ್ಕೆ ನಮ್ಮ ಅಭ್ಯಂತರವಿಲ್ಲ ಎಂದಿದ್ದಾರೆ.
ಇದನ್ನೂ ಓದಿ:ಹಾಲು ಕುಡಿಯಲು ಯಾವ ಸಮಯ ಉತ್ತಮ?: ಆಯುರ್ವೇದ ಏನು ಹೇಳುತ್ತದೆ?
ಆದರೆ, ಮೊದಲಿಂದಲೂ ಜನಗಳೇ ನಡೆಸಿಕೊಂಡು ಬಂದಿರುವ ದೇವಸ್ಥಾನಗಳಿಗೆ ಈ ರೀತಿ ವ್ಯವಸ್ಥಾಪನಾ ಸಮಿತಿ ನೇಮಕದ ಪ್ರಯತ್ನವನ್ನು ಸರ್ಕಾರ ಮಾಡಬಾರದು. ಒಂದೊಮ್ಮೆ ವ್ಯವಸ್ಥಾಪನಾ ಸಮಿತಿ ರಚನೆಯ ಅಗತ್ಯ ಸರ್ಕಾರಕ್ಕೆ ಕಂಡುಬಂದರೂ ಅವುಗಳ ಖಾಸಗಿ ಮಾಲೀಕತ್ವವನ್ನು ಉಳಿಸಿಕೊಂಡೇ ವ್ಯವಸ್ಥಾಪನಾ ಸಮಿತಿ ರಚನೆ ಸಾಧ್ಯವಿದೆ. ಇಂಥ ದೇವಸ್ಥಾನಗಳಲ್ಲಿ ಹಾಲಿ ಇರುವ ಆಡಳಿತ ಮಂಡಳಿಗೆ ವ್ಯವಸ್ಥಾಪನಾ ಸಮಿತಿ ರಚಿಸಿ ವರದಿ ಸಲ್ಲಿಸುವಂತೆ ಸರ್ಕಾರ ಸೂಚಿಸಬಹುದು ಎಂದರು.
ಇದನ್ನೂ ಓದಿ:ಪ್ರೀತಿ ಇದ್ದರೂ ಪತ್ನಿ ಯಾಕೆ ಪತಿಯಿಂದ ವಿಮುಖಳಾಗುತ್ತಾಳೆ?; ಇದು ವಿವಾಹಿತರಿಗೊಂದು ಕಿವಿಮಾತು, ಎಚ್ಚರಿಕೆ ಕೂಡ!
ಉದಾಹರಣೆಗೆ ಸಹಕಾರಿ ಸಂಸ್ಥೆಗಳಲ್ಲಿ ಆಡಳಿತ ಮಂಡಳಿಯ ಅವಧಿ ಮುಗಿದ ಬಳಿಕ ಸಹಕಾರ ಇಲಾಖೆಯು ಹೊಸ ಆಡಳಿತ ಮಂಡಳಿ ರಚಿಸಿ ವರದಿ ಸಲ್ಲಿಸುವಂತೆ ಸೂಚನೆ ಕೊಡುತ್ತದೆ. ಆಯ್ಕೆ ಮಾಡುವ ಸ್ವಾತಂತ್ರ್ಯ ಆಯಾ ಸಹಕಾರಿ ಸಂಸ್ಥೆಗಳಿಗೆ ಇರುತ್ತದೆ. ಇದೇ ಮಾದರಿಯಲ್ಲಿ ಸರ್ಕಾರ ಖಾಸಗಿ ದೇವಸ್ಥಾನಗಳಿಗೂ ಆಡಳಿತ ಮಂಡಳಿ ರಚಿಸಿ ವರದಿ ಕೊಡುವಂತೆ ಸೂಚಿಸಬಹುದು ಎಂದರು.
ಇದನ್ನು ಹೊರತುಪಡಿಸಿ, ಮುಜರಾಯಿ ಇಲಾಖೆಯ ಆಯುಕ್ತರ ಕಚೇರಿಗೆ ಯಾರು ಬೇಕಾದರೂ ಅರ್ಜಿ ಸಲ್ಲಿಸಬಹುದು. ಆಡಳಿತ ಮಂಡಳಿಯನ್ನು ಸರ್ಕಾರವೇ ರಚನೆ ಮಾಡಲು ಇರುವ ಅವಕಾಶ ಸರಿಯಲ್ಲ. ಈ ರೀತಿಯಲ್ಲಿ ಎಲ್ಲ ದೇವಸ್ಥಾನಗಳನ್ನೂ ಸರ್ಕಾರಿ ಕರಣಗೊಳಿಸುವ ಬಗ್ಗೆ ನಮ್ಮ ವಿರೋಧವಿದೆ ಎಂದರು. ಇದೇ ವೇಳೆ, ಸರ್ಕಾರ ದೇವಸ್ಥಾನಗಳ ಅಭಿವೃದ್ಧಿಗೆ ವಿವಿಧ ಕ್ರಮಗಳನ್ನು ಕೈಗೊಳ್ಳುತ್ತಿರುವುದನ್ನು ಶ್ರೀ ಗಂಗಾಧರೇಂದ್ರ ಸರಸ್ವತಿ ಸ್ವಾಮೀಜಿ ಸ್ವಾಗತಿಸಿದ್ದಾರೆ.
ಅಗ್ನಿದುರಂತದಿಂದ ಬಚಾವಾದರೂ ಹೃದಯಾಘಾತ ಬಲಿ ಪಡೆಯಿತು!

ಇಲ್ಲಿ ‘ಯಮದೂತ’ನಿಗೇ ಪೂಜೆ ಮಾಡಿ ದೀಪಾವಳಿ ಹಬ್ಬ ಆಚರಣೆ!

ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:15 + seven =
Remember me
