ಶಿವಮೊಗ್ಗ:ರಾಜ್ಯದಲ್ಲಿ ಮೊದಲ ಬಾರಿಗೆ ಕರೊನಾ ಸೋಂಕಿತರೊಬ್ಬರಿಗೆ ಆಯುರ್ವೇದ ಚಿಕಿತ್ಸೆ ನೀಡಲಾಗುತ್ತಿದೆ.
ಕಲ್ಲಗಂಗೂರು ರಾಮಕೃಷ್ಣ ವಿವೇಕಾನಂದ ಆಶ್ರಮದ ಶ್ರೀ ವಿನಯಾನಂದ ಸರಸ್ವತಿ ಸ್ವಾಮೀಜಿಗೆ ಕರೊನಾ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಮೆಗ್ಗಾನ್​ ಆಸ್ಪತ್ರೆಯ ಸೂಪರ್​ ಸ್ಪೆಷಾಲಿಟಿ ವಿಭಾಗದ ಕರೊನಾ ವಾರ್ಡ್​ಗೆ ದಾಖಲಿಸಲಾಗಿತ್ತು. ಈ ವೇಳೆ ಪ್ರಧಾನಿ, ಮುಖ್ಯಮಂತ್ರಿ ಮತ್ತು ಜಿಲ್ಲಾಡಳಿತಕ್ಕೆ ಪತ್ರ ಬರೆದಿದ್ದ ಸ್ವಾಮೀಜಿ, ತಮಗೆ ಆಯುರ್ವೇದ ಚಿಕಿತ್ಸೆ ಕೊಡಲು ವ್ಯವಸ್ಥೆ ಮಾಡಬೇಕು. ಇದರ ಸಾಧಕ ಬಾಧಕಗಳಿಗೆ ನಾನೇ ಜವಾಬ್ದಾರ ಎಂದು ಕೋರಿದ್ದರು.ಇದನ್ನೂ ಓದಿರಿಈ ದೃಶ್ಯ ಮಿಸ್​ ಮಾಡದೆ ನೋಡಿ… ಇದು ಅಂತಿಂಥ ಮಾಸ್ಕ್ ಅಲ್ಲ!
ಸ್ವಾಮೀಜಿ ಅವರ ಮನವಿಗೆ ಸ್ಪಂದಿಸಿದ ಆರೋಗ್ಯ ಇಲಾಖೆ ಅಧಿಕಾರಿಗಳು ಅಲೋಪಥಿಯೊಂದಿಗೆ ಆಯುರ್ವೇದ ಪದ್ಧತಿಯಡಿ ಚಿಕಿತ್ಸೆ ನೀಡಲು ಅನುಮತಿ ನೀಡಿದ್ದಾರೆ. ಆಯುಷ್​ ಇಲಾಖೆ ಹಿರಿಯ ಆರೋಗ್ಯಾಧಿಕಾರಿ ಡಾ. ಸಿ.ಎ.ಹಿರೇಮಠ ಮಂಗಳವಾರ ಸಂಜೆಯಿಂದಲೇ ಚಿಕಿತ್ಸೆ ಆರಂಭಿಸಿದ್ದಾರೆ.
ಇದನ್ನೂ ಓದಿರಿಸ್ವಾಮೀಜಿಗೂ ಕರೊನಾ, ಆಯುರ್ವೇದ ಚಿಕಿತ್ಸೆಗಾಗಿ ಪ್ರಧಾನಿಗೆ ಪತ್ರ
ಆಯುರ್ವೇದ ಚಿಕಿತ್ಸೆಯಲ್ಲಿ ಯಾವುದೇ ವೈರಸ್​ ಅಥವಾ ಬ್ಯಾಕ್ಟೀರಿಯಾವನ್ನು ಕೊಲ್ಲುವುದಿಲ್ಲ. ಬದಲಿಗೆ ವೈರಸ್​ ವಿರುದ್ಧ ಹೋರಾಡುವ ಶಕ್ತಿಯನ್ನು ವೃದ್ಧಿಸಲಾಗುತ್ತದೆ. ಶ್ರೀ ವಿನಯಾನಂದ ಸರಸ್ವತಿ ಸ್ವಾಮೀಜಿ ಅವರು 18 ವರ್ಷದಿಂದ ಆಯುರ್ವೇದ ಪದ್ಧತಿ ಅನುಸರಿಸುತ್ತಿದ್ದಾರೆ. ಹಾಗಾಗಿ ಚಿಕಿತ್ಸೆ ಸುಲಭವಾಗುತ್ತದೆ ಎಂದು ಅಥರ್ವ ಆಯುರ್ಧಾಮ ವೈದ್ಯಾಧಿಕಾರಿ ಡಾ. ಮಲ್ಲಿಕಾರ್ಜುನ ಡಂಬಳ ತಿಳಿಸಿದ್ದಾರೆ.
ಈ ಬಗ್ಗೆ ಪ್ರತಿಕ್ರಿಯಿಸಿರುವ ಶ್ರೀ ವಿನಯಾನಂದ ಸರಸ್ವತಿ ಸ್ವಾಮೀಜಿ, ಜಿಲ್ಲಾಡಳಿತ ಕೊನೆಗೂ ನಮ್ಮ ಮನವಿಗೆ ಸ್ಪಂದಿಸಿದೆ. ಭಾರತದ ಸನಾತನ ಮತ್ತು ಸಾಂಸ್ಕೃತಿಕ ಪರಂಪರೆಯಲ್ಲಿ ಬಂದಿರುವ ಮಹರ್ಷಿ ಪ್ರಣೀತ ಆಯುರ್ವೇದ ಚಿಕಿತ್ಸೆಗೆ ಅನುವು ಮಾಡಿಕೊಟ್ಟಿರುವುದು ಶ್ಲಾಘನೀಯ ಎಂದಿದ್ದಾರೆ.
ಇವರಿಗೆ ಕಾಗೆಯಿಂದಲೇ ಅದೃಷ್ಟ! ಮನೆಯಲ್ಲೇ ಬಿಳಿಕಾಗೆ ಸಾಕ್ತಿದ್ದಾರೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five + 3 =
Remember me
