ಬೆಂಗಳೂರುರೈತರು ಪ್ರಗತಿ ಕಾಣಬಹುದಾದ ಸ್ವಾಮಿನಾಥನ್ ವರದಿಯನ್ನು 2004ರಲ್ಲಿ ಕೇಂದ್ರ ಸರ್ಕಾರಕ್ಕೆ ಸಲ್ಲಿಸಲಾಯಿತು. ಈ ವರದಿಯನ್ನು ಕೇಂದ್ರದಲ್ಲಿ ಆಡಳಿತ ನಡೆಸಿದ ಯುಪಿಎ ಮತ್ತು ಎನ್‌ಡಿಎ ಸರ್ಕಾರಗಳು ವರದಿಯನ್ನು ಸಂಸತ್ತಿನಲ್ಲಿ ಚರ್ಚಿಸದೆ ಕೊಲೆ ಮಾಡಿವೆ ಎಂದು ಪತ್ರಕರ್ತ ಪಿ. ಸಾಯಿನಾಥ್ ಆರೋಪಿಸಿದರು.
ಕರ್ನಾಟಕ ಪ್ರಾಂತ ರೈತ ಸಂಘ ಗುರುವಾರ ಅರಮನೆ ರಸ್ತೆಯಲ್ಲಿರುವ ಬಸಪ್ಪ ಕೊಂಡಜ್ಜಿ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ‘ಪರ್ಯಾಯ ಕೃಷಿ ಧೋರಣೆಗಳು’ ಕುರಿತ ರಾಷ್ಟ್ರೀಯ ವಿಚಾರ ಸಂಕಿರಣದಲ್ಲಿ ಅವರು ಮಾತನಾಡಿದರು.
ಯುಪಿಎ ಸರ್ಕಾರವು ಚರ್ಚಿಸುವ ಗೋಜಿಗೆ ಹೋಗಿಲ್ಲ. ಇದೇ ವಿಚಾರವಾಗಿ ಅಧಿಕಾರಕ್ಕೆ ಬಂದಲ್ಲಿ ಸ್ವಾಮಿನಾಥನ್ ವರದಿ ಜಾರಿಗೊಳಿಸುವುದಾಗಿ ೋಷಿಸಿದ್ದ ಎನ್‌ಡಿಎ, ಅಧಿಕಾರಕ್ಕೆ ಬಂದ ಒಂದೇ ತಿಂಗಳಿನಲ್ಲಿ ಸುಪ್ರೀಂ ಕೋರ್ಟ್‌ನಲ್ಲಿ ವರದಿ ಜಾರಿಯಾದರೆ, ಮಾರುಕಟ್ಟೆ ಅಲ್ಲೋಲ ಕಲ್ಲೋಲವಾಗಲಿದೆ ಎಂಬ ಹೇಳಿಕೆ ನೀಡಿ ಅಲ್ಲಿಗೇ ವರದಿ ವಿಚಾರವನ್ನು ಮಕಾಡೆ ಮಲಗಿಸಿತು ಎಂದು ಹೇಳಿದರು.
ದೇಶದಲ್ಲಿ ಉದಾರೀಕಣ, ಖಾಸಗೀಕರಣ ಮತ್ತು ಜಾಗತೀಕರಣ ನೀತಿ ಆರಂಭವಾದ ನಂತರ ರೈತರು ದಿವಾಳಿಯಾಗಿದ್ದಾರೆ. ಇದಕ್ಕೆ ಪರ್ಯಾಯವಾಗಿ ಕೃಷಿ ಧೋರಣಗೆಗಳನ್ನು ರಚಿಸುವಂತೆ ಸರ್ಕಾರದ ಮೇಲೆ ಒತ್ತಡ ಹೇರಲು ಈ ವಿಚಾರ ಸಂಕಿರಣ ಆಯೋಜಿಸಲಾಗಿದೆ.– ಟಿ. ಯಶವಂತ, ಪ್ರಾಂತ ರೈತ ಸಂಘದ ಪ್ರಧಾನ ಕಾರ್ಯದರ್ಶಿ
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:three × 3 =
Remember me
