ಬೆಂಗಳೂರು:ಬಸವನಗುಡಿಯ ಶ್ರೀ ಮಲ್ಲಿಕಾರ್ಜುನ ಸ್ವಾಮಿ ದೇವಸ್ಥಾನದಲ್ಲಿ ಭಾನುವಾರ (ಜೂ.12) ವಿಜಯವಾಣಿ ಮತ್ತು ದಿಗ್ವಿಜಯ 24*7ನ್ಯೂಸ್ ಹಾಗೂ ಕನ್ನಡ ಮ್ಯಾಟ್ರಿಮೊನಿ ಸಹಯೋಗದಲ್ಲಿ ‘ಸ್ವಯಂವರ ಪಾರ್ವತಿ ಯಾಗ’ ಆಯೋಜಿಸಲಾಗಿದೆ.
ಕಂಕಣ ಭಾಗ್ಯ ಕೂಡಿಬಾರದ ವಧು-ವರರು ಯಾಗದಲ್ಲಿ ಪಾಲ್ಗೊಂಡರೆ ವಿವಾಹ ಯೋಗ ಲಭಿಸಲಿದೆ. ಬೆಳಗ್ಗೆ 9 ಗಂಟೆಗೆ ಯಾಗ ಆರಂಭವಾಗಲಿದೆ. ಇದರಲ್ಲಿ ಪಾಲ್ಗೊಂಡವರಿಗೆ ಜೀವನ ಸಂಗಾತಿಗಾಗಿ ಹುಡುಕಾಟ ನಡೆಸುವುದು ತಪ್ಪಲಿದ್ದು, ವಿವಾಹ ತೊಡಕುಗಳು ನಿವಾರಣೆಯಾಗಿ ವಧು- ವರರಿಗೆ ಕಂಕಣ ಭಾಗ್ಯ ಕೂಡಿಬರಲಿದೆ. ಯಾಗದಲ್ಲಿ ಭಾಗಿಯಾಗುವವರಿಗೆ ಉಚಿತ ಪ್ರವೇಶ ಕಲ್ಪಿಸಲಾಗಿದೆ.
ಯಾಗದಿಂದ ಕಂಕಣಬಲ:ಯಾಗದಲ್ಲಿ ಪಾಲ್ಗೊಳ್ಳುವ ಭಾವಿ ವಧು ಮತ್ತು ವರರಿಗೆ 48 ದಿನಗಳಲ್ಲಿ ಕಂಕಣ ಭಾಗ್ಯ ಕೂಡಿಬರುತ್ತದೆ. ಪುರಾಣಗಳ ಪ್ರಕಾರ, ಪಾರ್ವತಿ ವಿವಾಹ ಸರಳ ಪ್ರಕ್ರಿಯೆ ಆಗಿರಲಿಲ್ಲ. ಈ ಕಾರಣಕ್ಕಾಗಿ ಸ್ವಯಂವರ ಮಂತ್ರ ಉಪದೇಶಿಸಲಾಗುವ ಶಿವ- ಪಾರ್ವತಿ ಯಾಗ ಮಹತ್ವ ಪಡೆದಿದೆ. ಪೂರ್ವಜನ್ಮದ ದೋಷಗಳಿಂದಲೂ ಮದುವೆ ವಿಳಂಬ ಆಗುತ್ತಿರುತ್ತದೆ. ಯಾಗ ಮಾಡಿದರೆ ದೋಷ ಪರಿಹಾರ ಆಗುತ್ತದೆ. ಭಾವಿ ವಧು-ವರರು ಮಾತ್ರವಲ್ಲ, ಸಂಸಾರದಲ್ಲಿ ನೆಮ್ಮದಿ ಇಲ್ಲದವರೂ ಯಾಗ ಮಾಡಬಹುದು. ಇದರಿಂದಾಗಿ ಕುಟುಂಬದಲ್ಲಿ ಶಾಂತಿ ನೆಲೆಸುತ್ತದೆ.

ಸ್ಥಳ:ಶ್ರೀ ಮಲ್ಲಿಕಾರ್ಜುನಸ್ವಾಮಿ ದೇವಸ್ಥಾನ, ಬಸವನಗುಡಿ, ಬೆಂಗಳೂರು- 560004
ಮಾಸ್ಕ್ ಕಡ್ಡಾಯ:ಕರೋನಾ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಸ್ವಯಂವರದಲ್ಲಿ ಭಾಗವಹಿಸುವವರು ಸರ್ಕಾರದ ಮಾರ್ಗಸೂಚಿಯಂತೆ ಕಡ್ಡಾಯವಾಗಿ ಮಾಸ್ಕ್ ಧರಿಸಿ ಬರಬೇಕು. ವ್ಯಕ್ತಿಗತ ಅಂತರವನ್ನು ಕಾಪಾಡಬೇಕು.
ಸ್ವಯಂವರ ಪಾರ್ವತಿ ಯಾಗದಿಂದ ಜೀವನ ಸಂಗಾತಿ ಶೀಘ್ರ ದೊರಕಲು ಅನುವಾಗುತ್ತದೆ. ಯಾಗದಲ್ಲಿ ಪಾಲ್ಗೊಳ್ಳುವ ಭಾವಿ ವಧು-ವರರು ತಮ್ಮ ಭಾವಚಿತ್ರದೊಂದಿಗೆ ಜಾತಕವನ್ನು ತರುವಂತೆ ಕೋರಲಾಗಿದೆ.https://bit.ly/3MZlw2Bಯಲ್ಲಿ ಹೆಸರು ನೋಂದಾಯಿಸಿ. ಉಚಿತ ಹಾಗೂ ವಿಶೇಷ ಪೂಜೆ, ಸಂಕಲ್ಪ ಮತ್ತು ಪ್ರಸಾದಕ್ಕಾಗಿ ಮ್ಯಾಟ್ರಿ ಐಡಿಯನ್ನು ತೋರಿಸಬೇಕು. ವಿವರಗಳಿಗೆ ದೂರವಾಣಿ ಸಂಖ್ಯೆ 75388 06555 ಸಂಪರ್ಕಿಸಬಹುದು.
ವಾಟ್ಸ್​ಆ್ಯಪ್​ ಬಳಕೆದಾರರಿಗೆ ಸಂತಸದ ಸಂಗತಿ; ಟೆಲಿಗ್ರಾಂ ಆ್ಯಪ್​ಗೆ ಪೈಪೋಟಿಯಂತೆ ಮತ್ತೊಂದು ಅಪ್​ಡೇಟ್​..

ಅಡ್ಡ ಮತದಾನ ಮಾಡಿದ ಶಾಸಕನನ್ನು ಪಕ್ಷದಿಂದ ಉಚ್ಚಾಟಿಸಿದ ಕಾಂಗ್ರೆಸ್​

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 × 1 =
Remember me
