ಬೆಂಗಳೂರು:ಕೆಂಗೇರಿ ಉಪನಗರದ 1ನೇ ಮುಖ್ಯರಸ್ತೆಯಲ್ಲಿನ ಶ್ರೀ ವಿಶ್ವವಿದ್ಯಾ ಗಣಪತಿ ದೇವಸ್ಥಾನದಲ್ಲಿ ಡಿ.11ರ ಭಾನುವಾರವಿಜಯವಾಣಿಮತ್ತುದಿಗ್ವಿಜಯ 24*7ನ್ಯೂಸ್​ಹಾಗೂ ಕನ್ನಡ ಮ್ಯಾಟ್ರಿಮೊನಿ ಸಹಯೋಗದಲ್ಲಿಸ್ವಯಂವರ ಪಾರ್ವತಿ ಯಾಗಆಯೋಜಿಸಲಾಗಿದೆ.
ಅಂದು ಬೆಳಗ್ಗೆ 9 ಗಂಟೆಗೆ ಯಾಗ ಆರಂಭವಾಗಲಿದೆ. ಇದರಲ್ಲಿ ಪಾಲ್ಗೊಂಡವರಿಗೆ ಜೀವನ ಸಂಗಾತಿಗಾಗಿ ಹುಡುಕಾಟ ನಡೆಸುವುದು ತಪ್ಪಲಿದ್ದು, ವಿವಾಹ ತೊಡಕುಗಳು ನಿವಾರಣೆಯಾಗಲಿದೆ. ಯಾಗದಲ್ಲಿ ಭಾರೀ ಸಂಖ್ಯೆಯಲ್ಲಿ ಭಕ್ತರು ಸೇರುವ ನಿರೀಕ್ಷೆ ಹೊಂದಲಾಗಿದೆ. ಉಚಿತ ಪ್ರವೇಶ ಕಲ್ಪಿಸಲಾಗಿದೆ.
ಯಾಗದಿಂದ ಕಂಕಣಬಲ:ಸ್ವಯಂವರ ಪಾರ್ವತಿ ಯಾಗದಲ್ಲಿ ಪಾಲ್ಗೊಳ್ಳುವ ಭಾವೀ ವಧು ಮತ್ತು ವರರಿಗೆ ಅತೀ ಶೀಘ್ರವಾಗಿ ಕಂಕಣ ಭಾಗ್ಯ ಕೂಡಿ ಬರುವ ನಂಬಿಕೆ ಇದೆ. ಪುರಾಣಗಳ ಪ್ರಕಾರ ಪಾರ್ವತಿ ಮದುವೆ ಆಗಿದ್ದು ಸುಲಭದಲ್ಲಿ ಅಲ್ಲ. ಸ್ವಯಂವರ ಮಂತ್ರ ಉಪದೇಶದ ನಂತರ ಶಿವ- ಪಾರ್ವತಿ ಯಾಗ ಹೆಚ್ಚಿನ ಮಹತ್ವ ಪಡೆದಿದೆ. ಪೂರ್ವಜನ್ಮದ ದೋಷಗಳಿಂದಲೂ ಮದುವೆ ವಿಳಂಬ ಆಗುತ್ತಿರುತ್ತದೆ. ಈ ಹಿನ್ನೆಲೆಯಲ್ಲಿ ಯಾಗವನ್ನು ಮಾಡಿದರೆ ಎಲ್ಲ ದೋಷಗಳು ಪರಿಹಾರಗೊಳ್ಳುತ್ತವೆ. ಭಾವೀ ವಧು-ವರರು ಮಾತ್ರವಲ್ಲ, ಸಂಸಾರದಲ್ಲಿ ನೆಮ್ಮದಿ ಇಲ್ಲದವರೂ ಈ ಯಾಗದಲ್ಲಿ ಪಾಲ್ಗೊಳ್ಳುವ ಮೂಲಕ ಶಾಂತಿ ಹೊಂದಬಹುದಾಗಿದೆ.
ಪೌರಾಣಿಕ ಹಿನ್ನೆಲೆ:ಪರಮೇಶ್ವರನೊಂದಿಗೆ ಪಾರ್ವತಿ ಜಗಳ ಮಾಡಿಕೊಂಡು ಭೂ ಲೋಕಕ್ಕೆ ಬರುತ್ತಾಳೆ. ಆಗ ಪಾರ್ವತಿಯನ್ನು ಮರೆತ ಶಿವನು ಏಕಾಂತಕ್ಕೆ ಹೊರಟು ಹೋಗುತ್ತಾನೆ. ಇದರಿಂದ ಲಯಕಾರ್ಯಗಳೆಲ್ಲ ಅಸ್ತವ್ಯಸ್ತವಾಗುತ್ತವೆ. ಈ ಪರಿಸ್ಥಿತಿ ಅರಿತ ಋಷಿ ಮುನಿಗಳು ಹಾಗೂ ದೇವತೆಗಳು ಪ್ರಾರ್ಥನೆ ಮೂಲಕ ಶಿವನನ್ನು ಎಚ್ಚರಿಸಲು ಪ್ರಯತ್ನಿಸುತ್ತಾರೆ. ಇತ್ತ ಭೂಲೋಕದಲ್ಲಿದ್ದ ಪಾರ್ವತಿ ಶಿವಲಿಂಗ ರಚಿಸಿ ತಪಸ್ಸು ಮಾಡುತ್ತಿರುತ್ತಾಳೆ. ಈ ವೇಳೆ ನಾರದರು ಆಗಮಿಸಿ ಸ್ವಯಂವರ ಮಂತ್ರ ಉಪದೇಶಿಸುತ್ತಾರೆ. ಪಾರ್ವತಿ ಈ ಮಂತ್ರವನ್ನು ಜಪಿಸಿದಾಗ ಶಿವನು ಎಚ್ಚರಗೊಂಡು ಭೂ ಲೋಕಕ್ಕೆ ಆಗಮಿಸುತ್ತಾನೆ. ನಂತರ ಪಾರ್ವತಿಯನ್ನು ವಿವಾಹವಾಗಿ ಕೈಲಾಸಕ್ಕೆ ಕರೆದೊಯುತ್ತಾನೆ. ಕೆಲವರಿಗೆ ಪೂರ್ವಜನ್ಮದ ಯಾವುದೋ ದೋಷಗಳು ವಿವಾಹ ಕಾರ್ಯಕ್ಕೆ ಅಡ್ಡಿ ಉಂಟು ಮಾಡುತ್ತಿರುತ್ತವೆ. ಅಂಥವರು ಪಾರ್ವತಿ ಸ್ವಯಂವರ ಹೋಮ ಮಾಡಿಸಿ, ಪ್ರಸಾದ ಸ್ವೀಕರಿಸಿದರೆ ವಿವಾಹವಾಗುತ್ತದೆ ಎಂಬ ನಂಬಿಕೆ ಇದೆ.
ಜಾತಕ ತನ್ನಿ:ಸ್ವಯಂವರ ಪಾರ್ವತಿ ಯಾಗದಿಂದ ಜೀವನ ಸಂಗಾತಿ ಶ್ರೀ ದೊರಕಲು ಅನುವಾಗುತ್ತದೆ. ಯಾಗದಲ್ಲಿ ಪಾಲ್ಗೊಳ್ಳುವ ಭಾವೀ ವಧು-ವರರು ತಮ್ಮ ಭಾವಚಿತ್ರದೊಂದಿಗೆ ಜಾಗತಕ ತರುವಂತೆ ಕೋರಲಾಗಿದೆ.
ವಿವರಗಳಿಗೆ ದೂ. 7538806555 ಸಂಪರ್ಕಿಸಬಹುದು.ಸ್ಥಳ: ಶ್ರೀ ವಿಶ್ವವಿದ್ಯಾ ಗಣಪತಿ ದೇವಸ್ಥಾನ, 1ನೇ ಮುಖ್ಯರಸ್ತೆ, ಕೆಂಗೇರಿ ಉಪನಗರ, ಬೆಂಗಳೂರು- 560060
7 ತಿಂಗಳ ಹಿಂದಷ್ಟೇ ಮದ್ವೆಯಾಗಿದ್ದ ಯುವತಿ ಗಂಡನ ಮನೆಯಲ್ಲಿ ದುರಂತ ಅಂತ್ಯ!

ಮಗನ ಹತ್ಯೆಗೆ ತಂದೆಯಿಂದಲೇ ಸುಪಾರಿ! ಹುಬ್ಬಳ್ಳಿಯಲ್ಲಿ ಖ್ಯಾತ ಉದ್ಯಮಿ ಪುತ್ರನ ಬದುಕು ದುರಂತ ಅಂತ್ಯ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five × 2 =
Remember me
