ಬೆಂಗಳೂರು:ಮೂಡಲಪಾಳ್ಯದ ಕಲ್ಯಾಣನಗರದಲ್ಲಿನ ಶ್ರೀ ಈಶ್ವರ ದೇವಾಲಯದಲ್ಲಿ ಬುಧವಾರ (ಜ.25) ವಿಜಯವಾಣಿ ಮತ್ತು ದಿಗ್ವಿಜಯ ನ್ಯೂಸ್​ ಹಾಗೂ ಕನ್ನಡ ಮ್ಯಾಟ್ರಿಮೊನಿ ಸಹಯೋಗದಲ್ಲಿ “ಸ್ವಯಂವರ ಪಾರ್ವತಿ ಯಾಗ” ಆಯೋಜಿಸಲಾಗಿದೆ. ಅಂದು ಬೆಳಗ್ಗೆ 9 ಗಂಟೆಗೆ ಯಾಗ ಆರಂಭವಾಗಲಿದೆ. ಇದರಲ್ಲಿ ಪಾಲ್ಗೊಂಡವರಿಗೆ ವಿವಾಹ ತೊಡಕುಗಳು ನಿವಾರಣೆಯಾಗಲಿದೆ ಎಂಬ ನಂಬಿಕೆ ಇದೆ. ಸಾರ್ವಜನಿಕರಿಗೆ ಉಚಿತ ಪ್ರವೇಶ ಕಲ್ಪಿಸಲಾಗಿದೆ.
ಸ್ವಯಂವರ ಪಾರ್ವತಿ ಯಾಗದಲ್ಲಿ ಪಾಲ್ಗೊಳ್ಳುವ ಭಾವೀ ವಧು- ವರರಿಗೆ ಶ್ರೀಘ್ರವಾಗಿ ಕಂಕಣ ಭಾಗ್ಯ ಕೂಡಿಬರುವ ನಂಬಿಕೆ ಇದೆ. ಪುರಾಣಗಳ ಪ್ರಕಾರ ಸ್ವಯಂವರ ಮಂತ್ರ ಉಪದೇಶದ ನಂತರ ಶಿವ- ಪಾರ್ವತಿ ಯಾಗ ಮಹತ್ವ ಪಡೆದಿದೆ. ಪೂರ್ವಜನ್ಮದ ದೋಷಗಳಿಂದಲೂ ಮದುವೆ ವಿಳಂಬ ಆಗುತ್ತಿರುತ್ತದೆ. ಯಾಗ ಮಾಡಿದರೆ ಎಲ್ಲ ದೋಷಗಳು ಪರಿಹಾರಗೊಳ್ಳುತ್ತವೆ. ಭಾವೀ ವಧು-ವರರು ಮಾತ್ರವಲ್ಲ, ಸಂಸಾರದಲ್ಲಿ ನೆಮ್ಮದಿ ಇಲ್ಲದವರೂ ಯಾಗದಲ್ಲಿ ಪಾಲ್ಗೊಳ್ಳುವ ಮೂಲಕ ನೆಮ್ಮದಿ ಹೊಂದಬಹುದಾಗಿದೆ.

ಪೌರಾಣಿಕ ಹಿನ್ನೆಲೆ:ಪರಮೇಶ್ವರನೊಂದಿಗೆ ಪಾರ್ವತಿ ಜಗಳ ಮಾಡಿಕೊಂಡು ಭೂಲೋಕಕ್ಕೆ ಬರುತ್ತಾಳೆ. ಆಗ ಪಾರ್ವತಿಯನ್ನು ಮರೆತ ಶಿವನು ಏಕಾಂತಕ್ಕೆ ಹೊರಟುಹೋಗುತ್ತಾನೆ. ಇದರಿಂದ ಲಯಕಾರ್ಯಗಳೆಲ್ಲ ಅಸ್ತವ್ಯಸ್ತವಾಗುತ್ತವೆ. ಈ ಪರಿಸ್ಥಿತಿ ಅರಿತ ಋಷಿಮುನಿಗಳು ಹಾಗೂ ದೇವತೆಗಳು ಪ್ರಾರ್ಥನೆ ಮೂಲಕ ಶಿವನನ್ನು ಎಚ್ಚರಿಸಲು ಪ್ರಯತ್ನಿಸುತ್ತಾರೆ. ಇತ್ತ ಭೂಲೋಕದಲ್ಲಿದ್ದ ಪಾರ್ವತಿ ಶಿವಲಿಂಗ ರಚಿಸಿ ತಪಸ್ಸು ಮಾಡುತ್ತಿರುತ್ತಾಳೆ. ಈ ವೇಳೆ ನಾರದರು ಆಗಮಿಸಿ ಸ್ವಯಂವರ ಮಂತ್ರ ಉಪದೇಶಿಸುತ್ತಾರೆ. ಪಾರ್ವತಿ ಈ ಮಂತ್ರವನ್ನು ಜಪಿಸಿದಾಗ ಶಿವನು ಎಚ್ಚರಗೊಂಡು ಭೂಲೋಕಕ್ಕೆ ಆಗಮಿಸುತ್ತಾನೆ. ನಂತರ ಪಾರ್ವತಿಯನ್ನು ವಿವಾಹವಾಗಿ ಕೈಲಾಸಕ್ಕೆ ಕರೆದೊಯ್ಯುತ್ತಾನೆ. ಕೆಲವರಿಗೆ ಪೂರ್ವಜನ್ಮದ ಯಾವುದೋ ದೋಷಗಳು ವಿವಾಹ ಕಾರ್ಯಕ್ಕೆ ಅಡ್ಡಿ ಉಂಟು ಮಾಡುತ್ತಿರುತ್ತವೆ. ಅಂಥವರು ಪಾರ್ವತಿ ಸ್ವಯಂವರ ಹೋಮ ಮಾಡಿಸಿ, ಪ್ರಸಾದ ಸ್ವೀಕರಿಸಿದರೆ ವಿವಾಹವಾಗುತ್ತದೆ ಎಂಬ ನಂಬಿಕೆ ಇದೆ.
ಜಾತಕ ತನ್ನಿ:ಸ್ವಯಂವರ ಪಾರ್ವತಿ ಯಾಗದಿಂದ ಜೀವನ ಸಂಗಾತಿ ಶೀಘ್ರ ದೊರಕಲು ಅನುವಾಗುತ್ತದೆ. ಯಾಗದಲ್ಲಿ ಪಾಲ್ಗೊಳ್ಳುವ ಭಾವೀ ವಧು-ವರರು ತಮ್ಮ ಭಾವಚಿತ್ರದೊಂದಿಗೆ ಜಾಗತಕವನ್ನು ತರುವಂತೆ ಕೋರಲಾಗಿದೆ.https://bit.ly/3MZlw2Bಯಲ್ಲಿ ಹೆಸರು ನೋಂದಾಯಿಸಿ. ಉಚಿತ ಹಾಗೂ ವಿಶೇಷ ಪೂಜೆ, ಸಂಕಲ್ಪ ಮತ್ತು ಪ್ರಸಾದಕ್ಕಾಗಿ ಮ್ಯಾಟ್ರಿ ಐಡಿಯನ್ನು ತೋರಿಸಬೇಕು. ವಿವರಗಳಿಗೆ ದೂ. 7538806555 ಸಂಪರ್ಕಿಸಬಹುದು.ಸ್ಥಳ:ಶ್ರೀ ಈಶ್ವರ ದೇವಾಲಯ, 3ನೇ ಮುಖ್ಯರಸ್ತೆ, 3ನೇ ಅಡ್ಡರಸ್ತೆ, ಕಲ್ಯಾಣ ನಗರ, ಮೂಡಲಪಾಳ್ಯ, ಬೆಂಗಳೂರು-72.
ನಟಿ ರಚಿತಾ ರಾಮ್ ವಿರುದ್ಧ ಮದ್ದೂರು ಠಾಣೆಯಲ್ಲಿ ಕೇಸ್​!

ಸಿಂದಗಿ ಕ್ಷೇತ್ರದ ಘೋಷಿತ ಜೆಡಿಎಸ್​ ಅಭ್ಯರ್ಥಿ ಶಿವಾನಂದ ಪಾಟೀಲ್ ಹೃದಯಾಘಾತದಿಂದ ನಿಧನ: ಎಚ್​ಡಿಕೆ ಸಂತಾಪ ​

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:twenty + fourteen =
Remember me
