|ಮಂಜುನಾಥ ಕೋಳಿಗುಡ್ಡಬೆಳಗಾವಿ
ರಾಜ್ಯದ ಕಬ್ಬು ಬೆಳೆಗಾರರಿಗೆ ಬೆಳಗಾವಿಯ ಎಸ್. ನಿಜಲಿಂಗಪ್ಪ ಸಕ್ಕರೆ ಸಂಸ್ಥೆ ಸಿಹಿ ಸುದ್ದಿ ನೀಡಿದೆ. ಹೆಚ್ಚಿನ ಆದಾಯ ತಂದುಕೊಡಬಲ್ಲ, ಹೆಚ್ಚು ಸಕ್ಕರೆ ಅಂಶ ಹೊಂದಿರುವ ‘ಸಿಒ-18024’ ಎಂಬ ಹೊಸ ಕಬ್ಬಿನ ತಳಿಯನ್ನು ಸಂಸ್ಥೆ ಅಭಿವೃದ್ಧಿಪಡಿಸಿದೆ. ತಮಿಳುನಾಡಿನ ಕೊಯಮತ್ತೂರಿನ ಕಬ್ಬು ಸಂವರ್ಧನೆ ಸಂಸ್ಥೆಯ ಸಹಯೋಗದಲ್ಲಿ ಎಸ್. ನಿಜಲಿಂಗಪ್ಪ ಸಕ್ಕರೆ ಸಂಸ್ಥೆಯ ವಿಜ್ಞಾನಿಗಳು 2015ರಿಂದಲೇ ತೊಡಗಿಕೊಂಡಿದ್ದು, ಸಿಒ-18024 ಎಂಬ ತಳಿ ಸಂಶೋಧನೆ ಮಾಡಿ ಅಭಿವೃದ್ಧಿಪಡಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬೆಳಗಾವಿ, ವಿಜಯಪುರ, ಬಾಗಲಕೋಟೆ ಜಿಲ್ಲೆಯಲ್ಲಿ 5 ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಪ್ರಾಯೋಗಿಕವಾಗಿ ಬೆಳೆಯಲಾಗುತ್ತಿದೆ. ಈ ತಳಿಯಿಂದ ಪ್ರತಿ ಎಕರೆಗೆ ಕನಿಷ್ಠ 55 ರಿಂದ 60 ಟನ್ ಇಳುವರಿ ಬರುತ್ತದೆ. ರೈತರು ಮತ್ತು ಸಕ್ಕರೆ ಕಾರ್ಖಾನೆಗಳಿಗೆ ಹೆಚ್ಚು ಆದಾಯವನ್ನೂ ತರಲಿದೆ. ಅತಿವೃಷ್ಟಿ, ಅನಾವೃಷ್ಟಿ , ಕೈ ಸೇರದ ಬಿಲ್ ಮುಂತಾದ ಸಮಸ್ಯೆಗಳಿಂದ ಆರ್ಥಿಕ ಸಂಕಷ್ಟದಲ್ಲಿರುವ ರೈತರಿಗೆ ಇದು ವರದಾನವಾಗಲಿದೆ.
ವೈಪರೀತ್ಯ ಎದುರಿಸುವ ಶಕ್ತಿ:ಬೆಳಗಾವಿ ಮತ್ತು ಹುಕ್ಕೇರಿ ತಾಲೂಕಿನ ಕೃಷಿ ಸಂಶೋಧನಾ ಕೇಂದ್ರದಲ್ಲಿ ಈ ತಳಿಯನ್ನು ಪ್ರಾಯೋಗಿಕವಾಗಿ ಬೆಳೆಯಲಾಗಿದ್ದು, ನಿರೀಕ್ಷಿತ ಫಲಿತಾಂಶ ಸಿಕ್ಕಿದೆ. ಹೊಸ ತಳಿಯ ಬೀಜವನ್ನು ಸಕ್ಕರೆ ಕಾರ್ಖಾನೆಗಳ ಮೂಲಕ ಮತ್ತು ರೈತರಿಗೆ ನೇರವಾಗಿ ನೀಡಲಾಗುತ್ತಿದೆ. ಹೊಸ ತಳಿ ಈವರೆಗಿನ ತಳಿಗಳಿಗಿಂತ ಭಿನ್ನವಾಗಿದ್ದು, ಹವಾಮಾನ ವೈಪರೀತ್ಯ ಎದುರಿಸಿ ಬೆಳೆಯುವ ಸಾಮರ್ಥ್ಯವನ್ನೂ ಹೊಂದಿದೆ.
ಕಾರ್ಖಾನೆಗಳಿಗೂ ಲಾಭ:ಮಂಡ್ಯದ ಸರ್.ಎಂ.ವಿಶ್ವೇಶ್ವರಯ್ಯ ಕಬ್ಬು ಸಂಶೋಧನಾ ಸಂಸ್ಥೆಯ ಸಾತನೂರ ಕೃಷಿ ಸಂಶೋಧನಾ ಕೇಂದ್ರದ 3 ಎಕರೆ ಪ್ರದೇಶದಲ್ಲಿ ಸಿಒ-18024 ತಳಿಯ ಕಬ್ಬು ಬೆಳೆಯಲಾಗಿದೆ. 2021-22ನೇ ಸಾಲಿನ ಅವಧಿಯಲ್ಲಿ ಸಕ್ಕರೆ ಕಾರ್ಖಾನೆಗಳ ಮೂಲಕ ರೈತರಿಗೆ ಈ ತಳಿಯ ಬೀಜ ವಿತರಣೆ ಆಗಲಿದೆ. ದಕ್ಷಿಣ ಕರ್ನಾಟಕ ಭಾಗದ ವಾತಾವರಣಕ್ಕೆ ಅನುಗುಣವಾಗಿ ಈ ಬೀಜ ಅಭಿವೃದ್ಧಿಗೊಂಡಿದ್ದು, ರೈತರಿಗೆ ಮತ್ತು ಸಕ್ಕರೆ ಕಾರ್ಖಾನೆಗಳಿಗೆ ಲಾಭತರಲಿದೆ ಎನ್ನುತ್ತಾರೆ ಕೃಷಿ ವಿಜ್ಞಾನಿಗಳು ಮತ್ತು ಕಬ್ಬು ತಜ್ಞರು.
ಸಿಒ-18024 ತಳಿಯ ಕಬ್ಬು ಬೆಳೆಯಲು ರೈತರಿಗೆ ಪ್ರಾಯೋಗಿಕವಾಗಿ ಬೀಜ ವಿತರಿಸಲಾಗಿದೆ. ಇದು ಬೆಳೆಗಾರರು, ಸಕ್ಕರೆ ಕಾರ್ಖಾನೆ ಗಳಿಗೆ ಲಾಭ ತರಲಿದೆ. ಮಂಡ್ಯದಲ್ಲಿ ವಾತಾವರಣಕ್ಕೆ ಅನುಗುಣವಾಗಿ ಬೀಜ ಅಭಿವೃದ್ಧಿಪಡಿಸಲಾಗಿದೆ.
|ಆರ್.ಬಿ.ಖಾಂಡಗಾವೆನಿರ್ದೇಶಕ, ಎಸ್. ನಿಜಲಿಂಗಪ್ಪ ಸಕ್ಕರೆ ಸಂಸ್ಥೆ, ಬೆಳಗಾವಿ
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:nine + fourteen =
Remember me
