ಬೆಂಗಳೂರು:ತಮ್ಮ ಕುರಿತ ಗೌಪ್ಯ ಮಾಹಿತಿಯನ್ನು ನ್ಯಾಷನಲ್ ರೆಸ್ಟೋರೆಂಟ್ ಆಸೋಸಿಯೇಷನ್ ಆ್ ಇಂಡಿಯಾಗೆ (ಎನ್‌ಆರ್‌ಎಐ) ನೀಡದಂತೆ ಭಾರತೀಯ ಸ್ಪರ್ಧಾತ್ಮಕ ಆಯೋಗಕ್ಕೆ (ಸಿಸಿಐ) ನಿರ್ದೇಶನ ನೀಡಬೇಕು ಎಂದು ಸ್ವಿಗ್ಗಿ ಕಂಪನಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದೆ.
ಪ್ರಕರಣ ಸಂಬಂಧ ಸಲ್ಲಿಕೆಯಾದ ಅರ್ಜಿಯನ್ನು ನ್ಯಾಯಮೂರ್ತಿ ಎಂ.ಜಿ. ಎಸ್. ಕಮಲ್ ಅವರ ರಜಾಕಾಲದ ಏಕಸದಸ್ಯ ನ್ಯಾಯಪೀಠ ವಿಚಾರಣೆ ನಡೆಸಿತು. ಈ ವೇಳೆ ನ್ಯಾಯಪೀಠ, ಸಿಸಿಐ ಕಚೇರಿ ದೆಹಲಿಯಲ್ಲಿರುವುದರಿಂದ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್‌ನಲ್ಲಿ ವಿಚಾರಣೆ ನಡೆಸುವುದಕ್ಕೆ ನ್ಯಾಯಾಂಗ ವ್ಯಾಪ್ತಿಯಲ್ಲಿ ಅವಕಾಶವಿದೆಯೇ ಎಂಬ ಪ್ರಶ್ನೆಯಿದೆ ಎಂದು ಹೇಳಿತು.
ಇದಕ್ಕೆ ಪ್ರತಿಕ್ರಿಯಿಸಿದ ಅರ್ಜಿದಾರರ ಪರ ಹಿರಿಯ ವಕೀಲ ಸಜ್ಜನ್ ಪೂವಯ್ಯ, ಸ್ವಿಗ್ಗಿ ಕೇಂದ್ರ ಕಚೇರಿಯನ್ನು ಬೆಂಗಳೂರಿನಲ್ಲಿ ನೋಂದಾಯಿಸಲಾಗಿದ್ದು, ಹೈಕೋರ್ಟ್ ಈ ಸಂಬಂಧ ಅರ್ಜಿ ವಿಚಾರಣೆ ನಡೆಸಬಹುದಾಗಿದೆ ಎಂದು ತಿಳಿಸಿದರು. ವಾದ ಆಲಿಸಿದ ನ್ಯಾಯಪೀಠ ವಿಚಾರಣೆಯನ್ನು ಮೇ 23ಕ್ಕೆ ಮುಂದೂಡಿದೆ.
ಎನ್‌ಆರ್‌ಎಐ ಮನವಿಯ ಆಧಾರದಲ್ಲಿ ನಡೆದ ತನಿಖೆಯ ಭಾಗವಾಗಿ, 2022ರ ಸೆಪ್ಟೆಂಬರ್ ಮತ್ತು 2023ರ ಅಕ್ಟೋಬರ್ ನಡುವೆ ಸಿಸಿಐನ ಡಿಜಿ ಪ್ರಶ್ನೆಗಳಿಗೆ ಪ್ರತಿಕ್ರಿಯೆಯಾಗಿ ಸ್ವಿಗ್ಗಿ ಅತ್ಯಂತ ಗೌಪ್ಯ ಮಾಹಿತಿಯನ್ನು ಸಲ್ಲಿಸಿತ್ತು. ಈ ತನಿಖೆ ಮಾರ್ಚ್ ತಿಂಗಳಲ್ಲಿ ಮುಕ್ತಾಯಗೊಳಿಸಿದೆ. ಆದರೆ, ಸ್ವಿಗ್ಗಿ ಮತ್ತು ಜೊಮ್ಯಾಟೊ ಎರಡಕ್ಕೂ ಸಂಬಂಧಿಸಿದ ತನಿಖಾ ವರದಿಯ ಗೌಪ್ಯ ಮಾಹಿತಿ ಲಭಿಸುವಂತೆ ಎನ್‌ಆರ್‌ಎಐ ಮನವಿ ಮಾಡಿತ್ತು.
ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:two × 3 =
Remember me
