ಬೆಂಗಳೂರು:ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಬಂದ ಬಳಿಕ ವೈಎಸ್ಟಿ (YST) ತೆರಿಗೆ ಶುರುವಾಗಿದೆ ಎಂದು ನೇರ ಆರೋಪ ಮಾಡಿದ್ದ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ಈಗ ಸರ್ಕಾರದ ಮೇಲೆ ಮತ್ತೊಂದು ಗಂಭೀರ ಆರೋಪ ಮಾಡಿದ್ದಾರೆ. ಪಕ್ಷದ ಎಲ್ಲ ಶಾಸಕರು ಹಾಗೂ ವಿಧಾನಪರಿಷತ್ ಸದಸ್ಯರ ಸಮ್ಮುಖದಲ್ಲಿ ಅವರು ಇಂದು ನಡೆಸಿದ್ದ ಸುದ್ದಿಗೋಷ್ಠಿಯಲ್ಲಿ ಈ ಆರೋಪ ಮಾಡಿದರು.
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಬಂದ ಬಳಿಕ ವರ್ಗಾವಣೆ ದಂಧೆ ಹಾಗೂ ಭ್ರಷ್ಟಾಚಾರ ಇಲಾಖಾವಾರು ದೊಡ್ಡ ಪ್ರಮಾಣದಲ್ಲಿ ವಿಸ್ತರಣೆ ಆಗುತ್ತಿದೆ. ಸಾರಿಗೆ ಹಾಗೂ ಕಂದಾಯ ಇಲಾಖೆಗಳ (ಸಬ್ ರಿಜಿಸ್ಟ್ರಾರ್) ನಂತರ ವಾಣಿಜ್ಯ ತೆರಿಗೆ ಇಲಾಖೆಯಲ್ಲಿ ವರ್ಗಾವಣೆ ದಂಧೆ ನಡೆಸಲು ಸಿಂಡಿಕೇಟ್ ವ್ಯವಸ್ಥೆ ಅಸ್ತಿತ್ವಕ್ಕೆ ಬಂದಿದೆ ಎಂದು ಅವರು ನೇರವಾಗಿ ದೂರಿದರು.
ಇದನ್ನೂ ಓದಿ:ನಾಚಿಕೆ-ಅವಮಾನ ಸಹಿಸಿಕೊಂಡು ಬಯಲಲ್ಲೇ ದೇಹದ ಒತ್ತಡ ನಿವಾರಿಸಿಕೊಂಡೆ: ಟಾಯ್ಲೆಟ್ ಇರದೆ ಪಟ್ಟ ಕಷ್ಟದ ಬಗ್ಗೆ ರಾಷ್ಟ್ರಪತಿಗೇ ಪತ್ರ ಬರೆದ ಮಹಿಳೆ
ರಾಜ್ಯಪಾಲರ ಭಾಷಣದಲ್ಲಿ ಭ್ರಷ್ಟಾಚಾರವನ್ನು ಮೂಲೋತ್ಪಾಟನೆ ಮಾಡುವುದಾಗಿ ಹೇಳಿಸಿದ ಈ ಸರ್ಕಾರದಲ್ಲಿ ಕಾಸಿಗಾಗಿ ಪೋಸ್ಟಿಂಗ್ (Cash for Posting) ಅವ್ಯಾಹತವಾಗಿ ನಡೆಯುತ್ತಿದೆ. ಪ್ರತಿ ಹುದ್ದೆಗೂ ದರ ನಿಗದಿ ಮಾಡಲಾಗಿದೆ. ಇವರು ಭ್ರಷ್ಟಾಚಾರದ ಬಗ್ಗೆ ಮಾತನಾಡುತ್ತಾರೆ ಎಂದು ಕುಮಾರಸ್ವಾಮಿ ಕಿಡಿಕಾರಿದರು.
ವಾಣಿಜ್ಯ ತೆರಿಗೆ ಇಲಾಖೆಯಲ್ಲಿ ಸಿಂಡಿಕೇಟ್ ಸಿದ್ಧ ಮಾಡಿಕೊಟ್ಟಿರುವ ಪಟ್ಟಿಯ ಕಡತ ಇಲಾಖೆಯ ಆಯುಕ್ತರ ಮುಂದೆ ಸಹಿಗಾಗಿ ಕಾಯುತ್ತ ಬಿದ್ದಿದೆ. ಅವರು ಸಹಿ ಹಾಕುತ್ತಾರೋ ಅಥವಾ ಏನು ಮಾಡುತ್ತಾರೋ ಕಾದು ನೋಡಬೇಕಿದೆ ಎಂದರು ಎಚ್​​ಡಿಕೆ ಹೇಳಿದರು.
ಕಾಸಿಲ್ಲದೆ ಪೋಸ್ಟ್ ಇಲ್ಲ ಎನ್ನುವುದನ್ನು ಈ ಸರ್ಕಾರದ ನೀತಿಯನ್ನಾಗಿ ಮಾಡಿಕೊಂಡಿದೆ. ಸದಾ ಮುಖ್ಯಮಂತ್ರಿ ಹಿಂದೆಮುಂದೆ ಹಾಗೂ ಸಿಎಂ ಕಚೇರಿ ಸುತ್ತಮುತ್ತ ಓಡಾಡಿಕೊಂಡಿರುವ ಶಾಸಕರೊಬ್ಬರು ಮುಖ್ಯಮಂತ್ರಿಗೆ ಪತ್ರ ಕೊಟ್ಟರೆ, ಸಿಎಂ ಕಚೇರಿಯಲ್ಲಿ ಇರುವ ಮಹಾಶಯರೊಬ್ಬರು ಬರೀ ಪತ್ರ ಬೇಡ, 30 ಲಕ್ಷ ರೂ. ಕೊಡಬೇಕು ಎಂದು ಹೇಳ್ತಾರಂತೆ. ಇದು ಈ ಸರ್ಕಾರದ ಹಣೆಬರಹ ಎಂದು ಕುಮಾರಸ್ವಾಮಿ ಪ್ರಹಾರ ನಡೆಸಿದರು.
ಸಾಕ್ಷಿ ಇಡಿ ಅಂತಾರೆ. ದುಡ್ಡು ಕೊಟ್ಟೋನು ಸಾಕ್ಷಿ ಇಡ್ತಾನಾ? ಅವನಿಗೆ ಕೆಲಸ ಆದರೆ ಸಾಕು. ಇವರು ಪರಿಸ್ಥಿತಿಯ ದುರ್ಲಾಭ ಪಡೆದುಕೊಳ್ಳುತ್ತಿದ್ದಾರೆ ಎಂದು ಕಾಂಗ್ರೆಸ್ ವಿರುದ್ಧ ಎಚ್​ಡಿಕೆ ವಾಗ್ದಾಳಿ ನಡೆಸಿದರು.
ನಾನು ಏನೇ ಮಾತಾಡಿದರೂ ವಿಷಯ ಇದ್ದರೆ ಮಾತ್ರ ಮಾತನಾಡುತ್ತೇನೆ, ಇಲ್ಲವಾದರೆ ಮೌನವಾಗಿ ಇರುತ್ತೇನೆ. ರಾಜ್ಯಪಾಲರ ಭಾಷಣದಲ್ಲಿ ವೀರಾವೇಶ ತೋರುವ ಇವರು, ಅಧಿಕಾರಕ್ಕೆ ಬಂದು ಒಂದು ತಿಂಗಳ ಮೇಲಾಯಿತು. ಇದುವರೆಗೆ ಲಂಚಾವತಾರದ ಈ ಸರ್ಕಾರ ಏನು ಕ್ರಮ ಕೈಗೊಂಡಿದೆ. ಜನರಿಗೆ ಹೇಳಬೇಕಲ್ಲವೇ? ಎಂದು ತರಾಟೆಗೆ ತೆಗೆದುಕೊಂಡರು.
ಇದನ್ನೂ ಓದಿ:‘ಲವ್ ಮಾಡು’ ಎಂದು ಟೀಚರ್ ಮಗನ ಕಾಟ, ಆತನಿಗೆ ಅಮ್ಮನ ಬೆಂಬಲ?: ಸಾವಿಗೆ ಶರಣಾದ್ಲು ಹತ್ತನೇ ತರಗತಿ ವಿದ್ಯಾರ್ಥಿನಿ
ದಾಖಲೆ ಇದ್ದರೆ ಕೊಡಲಿ ಎಂದು ಕೆಲವರು ಹೇಳಿದ್ದನ್ನು ಕೇಳಿದ್ದೇನೆ. ದಾಖಲೆ ಕೊಡಿ ಎಂದವರೇ ಹಿಂದೆ ಬಿಜೆಪಿ ಸರಕಾರದ ವಿರುದ್ಧ ಶೇ.40 ಕಮಿಷನ್ ಆರೋಪ ಸೇರಿದಂತೆ ಅನೇಕ ಆರೋಪಗಳನ್ನು ಮಾಡಿದ್ದರು. ಅವರು ಆಗ ದಾಖಲೆ ಇಟ್ಟಿದ್ದರಾ? ಈಗ ಅವರದೇ ಸರ್ಕಾರ ಇದೆ, ದಾಖಲೆ ಬಿಡುಗಡೆ ಮಾಡಬಹುದು, ಅಲ್ಲವೇ? ಎಂದು ಕಟುವಾಗಿ ಪ್ರಶ್ನಿಸಿದರು.
ಚುನಾವಣೆಗೆ ಭ್ರಷ್ಟಾಚಾರದ ಬಗ್ಗೆ ವೀರಾವೇಶದಿಂದ ಜನರ ಮುಂದೆ ಮಾತನಾಡಿದರು. ಹಾಗೆ ಮಾಡುತ್ತೇವೆ, ಹೀಗೆ ಮಾಡುತ್ತೇವೆ ಎಂದು ಕೊಚ್ಚಿಕೊಂಡರು. ಆ ವೀರಾವೇಶ ಈಗ ಎಲ್ಲಿ ಹೋಯಿತು ಎಂದು ಮಾಜಿ ಸಿಎಂ ಪ್ರಶ್ನಿಸಿದರು.
ಪಕ್ಷದ ಕಚೇರಿಯಲ್ಲಿ ಹೃದಯಾಘಾತಕ್ಕೀಡಾಗಿ ಕುಸಿದು ಬಿದ್ದು ಮೃತಪಟ್ಟ ಬಿಜೆಪಿ ಮುಖಂಡ!
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:14 − thirteen =
Remember me
