ವಿಜಯಪುರ:ಈ ಅವಳಿ ಅಣ್ಣತಮ್ಮಂದಿರು ತಾಂಡಾದ ಮಹಿಳೆ ಮೇಲೆ ಅತ್ಯಾಚಾರ ಮಾಡಿದ ಆರೋಪಿಗಳಾಗಿದ್ದು ಈ ಬಗ್ಗೆ ತಕ್ಷಣವೇ ಗ್ರಾಮಸ್ಥರು ಕಠಿಣ ಕ್ರಮಗಳನ್ನು ಕೈಗೊಂಡು ಪುಂಡ ಯುವಕರಿಗೆ ಅಪಮಾನಕರ ಶಿಕ್ಷೆಯನ್ನು ನೀಡಿದ್ದಾರೆ. ಈ ಘಟನೆ ವಿಜಯಪುರ ತಾಲೂಕಿನ ಹೆಗಡಿಹಾಳ ತಾಂಡಾದಲ್ಲಿ ನಡೆದಿದೆ.

ಮಹಾರಾಷ್ಟ್ರದಲ್ಲಿ ಕೆಲಸಕ್ಕೆ ಹೋಗಿದ್ದ ವೇಳೆ ಮಹಿಳೆಯೊಬ್ಬರ ಮೇಲೆ ಈ ಸಹೋದರರು ಅತ್ಯಾಚಾರಕ್ಕೆ ಯತ್ನಿಸಿದ್ದರು ಎಂಬ ಆರೋಪ ಕೇಳಿಬಂದಿತ್ತು. ಈ ವಿಚಾರ ತಿಳಿದ ಗ್ರಾಮದ ಲಂಬಾಣಿ ಸಮುದಾಯದ ಮುಖಂಡರು ಆರೋಪಿಗಳನ್ನು ಕರೆಸಿ ತಲೆ ಬೋಳಿಸಿ, ಚಪ್ಪಲಿ ಹಾರ ಹಾಕಿ ಮೆರವಣಿಗೆ ಮಾಡಿಸಿದ್ದಾರೆ.
ಹೆಗಡಿಹಾಳ ತಾಂಡಾದಲ್ಲಿ ಮುಖಂಡರು ಮೆರವಣಿಗೆ ಮಾಡಿಸಿದ್ದು ತೇಜು ಚೌಹಾಣ್, ರಾಜು ಚೌಹಾಣ್ ಈ ಇಬ್ಬರು ಯುವಕರ ತಲೆ ಬೋಳಿಸಿದ್ದಾರೆ. ಇವರಿಬ್ಬರೂ ಅವಳಿ ಜವಳಿ ಸಹೋದರರಾಗಿದ್ದಾರೆ. ಮುಖಂಡರು ಹಾಗೂ ಗ್ರಾಮದ ಪಂಚರು ಇಬ್ಬರ ತಲೆ ಬೋಳಿಸಿ ಮೆರವಣಿಗೆ ಮಾಡಿ ಮಹಿಳೆಗೆ ತಮ್ಮ ಕೈಯಲ್ಲಿ ಆದಷ್ಟು ನ್ಯಾಯವನ್ನು ನೀಡಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twelve + nineteen =
Remember me
