ಬೆಂಗಳೂರು:ರಾಜ್ಯದ ಸರ್ಕಾರಿ ಮತ್ತು ಅನುದಾನಿತ ಪದವಿ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣಕ್ಕೆ ಅನುಕೂಲವಾಗಲಿ ಎಂಬ ಉದ್ದೇಶದಿಂದ ಹಿಂದಿನ ಬಾರಿ ಸಿದ್ದರಾಮಯ್ಯನವರ ಆಡಳಿತದಲ್ಲಿ (2017-18) ಜಾರಿಗೆ ತಂದ ‘ಟ್ಯಾಬ್ಲೆಟ್’ (ಪಿಸಿ) ವಿತರಿಸುವ ಯೋಜನೆ ‘ಗ್ಯಾರಂಟಿ’ಯಿಂದ ಡೋಲಾಯಮಾನ ಸ್ಥಿತಿ ತಲುಪಿದೆ.
ಕಳೆದ ವರ್ಷ ಕೂಡ ಪದವಿ ವಿದ್ಯಾರ್ಥಿಗಳಿಗೆ ಟ್ಯಾಬ್ಲೆಟ್ ವಿತರಿಸಿರಲಿಲ್ಲ. ಈ ವರ್ಷ ಕೂಡ ಅದೇ ರೀತಿ ಮುಂದುವರಿಸುವ ಸಾಧ್ಯತೆಗಳೇ ಹೆಚ್ಚಾಗಿದ್ದು, ಈ ವರೆಗೆ ಯೋಜನೆ ಕುರಿತಂತೆ ಯಾವುದೇ ಚರ್ಚೆಗಳು ನಡೆದಿಲ್ಲ. ಇದಕ್ಕಾಗಿ ಅನುದಾನ ಕೂಡ ಮೀಸಲಿಡದ ಕಾರಣ ಯೋಜನೆ ಜಾರಿಯಾಗುವುದು ಅನುಮಾನ ಎಂದು ಇಲಾಖೆ ಮೂಲಗಳು ತಿಳಿಸಿವೆ.
ಬದಲಾದ ತಂತ್ರಜ್ಞಾನಕ್ಕೆ ಅನುಗುಣವಾಗಿ ವಿದ್ಯಾರ್ಥಿಗಳು ಹೆಚ್ಚಿನ ಓದಿಗೆ ಇಂಟರ್‌ನೆಟ್‌ನಲ್ಲಿ ಆಕರ ಪುಸ್ತಕಗಳನ್ನು ಓದುವುದು, ಓದಿಗೆ ಸಂಬಂಧಿಸಿದ ಮಾಹಿತಿಗಳನ್ನು ಸಂಶೋಧಿಸಲು ಅನುವಾಗಲಿ ಎಂಬ ಉದ್ದೇಶದಿಂದ ಹಿಂದಿನ ಕಾಂಗ್ರೆಸ್ ಸರ್ಕಾರವು ಪದವಿ ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್ ವಿತರಿಸುವ ಯೋಜನೆಯನ್ನು ಜಾರಿಗೊಳಿಸಿತ್ತು.
ಸರ್ಕಾರಿ ಕಾಲೇಜುಗಳಲ್ಲಿ ಸಾಮಾನ್ಯ ಪದವಿಗಳಾದ ಕಲೆ, ವಿಜ್ಞಾನ, ವಾಣಿಜ್ಯ, ವೃತ್ತಿಪರ ಕೋರ್ಸ್‌ಗಳಾದ ಇಂಜಿನಿಯರಿಂಗ್, ವೈದ್ಯಕೀಯ ಸೇರಿ ವಿವಿಧ ಕೋರ್ಸ್‌ಗಳನ್ನು ವ್ಯಾಸಂಗ ಮಾಡುತ್ತಿರುವ ಮೊದಲ ವರ್ಷದ ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್ ವಿತರಿಸುವ ಯೋಜನೆ ರೂಪಿಸಿತ್ತು. ಬಳಿಕ ಬಂದತಂಹ ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರದಲ್ಲಿ ಮತ್ತು ಆರಂಭದಲ್ಲಿ ಬಿಜೆಪಿ ಸರ್ಕಾರ ಕೂಡ 2019 ಮತ್ತು 2020ರಲ್ಲಿ ಲ್ಯಾಪ್‌ಟಾಪ್ ವಿತರಿಸಿರಲಿಲ್ಲ. 2021ರಲ್ಲಿ ಬಿಜೆಪಿ ಸರ್ಕಾರವು ಲ್ಯಾಪ್‌ಟಾಪ್ ಬದಲಾಗಿ ‘ಟ್ಯಾಬ್ಲೆಟ್ ಪಿಸಿ’ ವಿತರಿಸಿ ಒಂದೇ ವರ್ಷಕ್ಕೆ ಸ್ಥಗಿತಗೊಂಡಿತು.
1.5 ಲಕ್ಷ ವಿದ್ಯಾರ್ಥಿಗಳು ಲಾನುಭವಿಗಳು:ಯೋಜನೆ ಅಡಿ ಪ್ರತಿ ವರ್ಷ ವಿವಿಧ ಪದವಿ ಕೋರ್ಸ್‌ಗಳಲ್ಲಿ ವ್ಯಾಸಂಗ ಮಾಡುವ ಮೊದಲ ವರ್ಷದ ಅಂದಾಜು 1.5 ಲಕ್ಷ ವಿದ್ಯಾರ್ಥಿಗಳು ಈ ಯೋಜನೆಯ ಲಾನುಭವಿಗಳಾಗಲಿದ್ದಾರೆ. ಆದರೆ, ಈ ವರ್ಷ ಬಜೆಟ್‌ನಲ್ಲಿ ಕೂಡ ಯೋಜನೆ ಬಗ್ಗೆ ಪ್ರಸ್ತಾಪ ಮಾಡದಿರುವ ಕಾರಣ, ‘ಗ್ಯಾರಂಟಿ’ ಯೋಜನೆಗಳಿಗೆ ಹೆಚ್ಚಿನ ಅನುದಾನ ನೀಡುತ್ತಿರುವ ಕಾರಣ ಹಾಗೂ ಹಿಂದಿನ ಸರ್ಕಾರವೇ ಕಳೆದ ವರ್ಷ ವಿತರಣೆ ಮಾಡದಿರುವುದರಿಂದ ಈ ಯೋಜನೆ ಪುನಾರಂಭ ಮಾಡುವುದು ಅನುಮಾನ ಎಂದು ಇಲಾಖೆ ಮೂಲಗಳು ತಿಳಿಸಿವೆ.
ಕನಿಷ್ಠ 160 ಕೋಟಿ ರೂ. ಯೋಜನೆಉತ್ತಮವಾದ ಟ್ಯಾಬ್ ವಿತರಿಸಲು ಕನಿಷ್ಠ 10-12 ಸಾವಿರ ರೂ.ಗಳನ್ನು ವೆಚ್ಚ ಮಾಡಲಾಗುತ್ತದೆ. 1.5 ವಿದ್ಯಾರ್ಥಿಗಳಿಗೆ ವಿತರಣೆ ಮಾಡಲು 150ರಿಂದ 160 ಕೋಟಿ ರೂ. ವೆಚ್ಚ ಮಾಡಬೇಕಾಗುತ್ತದೆ ಎಂದು ಇಲಾಖೆ ಮೂಲಗಳು ಮಾಹಿತಿ ನೀಡಿವೆ.
ಇತ್ತೀಚೆಗೆ ನಡೆದ ಎಸ್‌ಸಿಪಿ/ಟಿಎಸ್‌ಪಿ ಯೋಜನೆ ಸಭೆಯಲ್ಲಿ ಪದವಿ ವಿದ್ಯಾರ್ಥಿಗಳಿಗೆ ಟ್ಯಾಬ್ ವಿತರಿಸುವ ವಿಷಯ ಕೂಡ ಪ್ರಸ್ತಾವನೆಯಾಗಿದೆ. ಮುಖ್ಯಮಂತ್ರಿಗಳು ಕೂಡ ಟ್ಯಾಬ್ ವಿತರಿಸುವುದಕ್ಕೆ ಆಸಕ್ತಿ ತೋರಿದ್ದಾರೆ. ಅನುದಾನ ಬಿಡುಗಡೆಯಾದಲ್ಲಿ ಖಂಡಿತವಾಗಿಯೂ ಯೋಜನೆ ಜಾರಿ ಮಾಡಲಾಗುತ್ತದೆ.– ಡಾ. ಎಂ.ಸಿ. ಸುಧಾಕರ್, ಉನ್ನತ ಶಿಕ್ಷಣ ಸಚಿವ
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:three × three =
Remember me
