ಬೆಂಗಳೂರು :ಗೋವಾದಲ್ಲಿ ಪೊಲೀಸರ ದೌರ್ಜನ್ಯಕ್ಕೆ ಒಳಗಾದ ಮುದ್ದೇಬಿಹಾಳ ಮೂಲದ ಒಂದೇ ಕುಟುಂಬದ ಮೂವರು ಮಾನಕ್ಕೆ ಅಂಜಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವರದಿಯಾಗಿದೆ. ಗೋವಾದಲ್ಲಿ ಕನ್ನಡಿಗರ ಬದುಕು ಎಂಥಾ ಡೋಲಾಯಮಾನ ಪರಿಸ್ಥಿತಿಯಲ್ಲಿದೆ, ಅಲ್ಲಿ ಕನ್ನಡಿಗರು ಎಂಥ ಅಪಾಯಕಾರಿ ಜೀವನ ನಡೆಸುತ್ತಿದ್ದಾರೆ ಎಂಬುದಕ್ಕೆ ಈ ಪ್ರಕರಣ ಸಾಕ್ಷಿಯಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್​.ಡಿ.ಕುಮಾರಸ್ವಾಮಿ ಹೇಳಿದ್ದಾರೆ.
ಈ ಬಗ್ಗೆ ಸರಣಿ ಟ್ವೀಟ್​ ಮಾಡಿರುವ ಎಚ್​ಡಿಕೆ, “ಪ್ರಕರಣವೊಂದರಲ್ಲಿ ಕನ್ನಡಿಗ ಕುಟುಂಬಕ್ಕೆ ಗೋವಾದ ಪೊಲೀಸರು ಕಿರುಕುಳ ನೀಡಿದ್ದರು ಎಂಬುದು ಅವರ ಡೆತ್‌ನೋಟ್‌ನಲ್ಲೇ ಇದೆ ಎನ್ನಲಾಗಿದೆ. ಕಳ್ಳತನದಂಥ ಭಂಡ ಬಾಳು ಬದುಕಿದ್ದಿದ್ದರೆ ಆ ಕುಟುಂಬ ಆತ್ಮಹತ್ಯೆಯಂಥ ನಿರ್ಧಾರಕ್ಕೆ ಬರುತ್ತಿರಲಿಲ್ಲ. ಕನ್ನಡಿಗರೆಂಬ ಕಾರಣಕ್ಕೆ ಈ ಕುಟುಂಬದ ಮೇಲೆ ದೌರ್ಜನ್ಯ ನಡೆದಿರುವುದು ಸ್ಪಷ್ಟವಾಗಿ ಕಾಣುತ್ತಿದೆ” ಎಂದಿದ್ದಾರೆ.
ಇದನ್ನೂ ಓದಿ:ಮರ್ಯಾದೆಗೆ ಅಂಜಿ ವಿಜಯಪುರ ಮೂಲದ ಮೂವರು ಗೋವಾದಲ್ಲಿ ಆತ್ಮಹತ್ಯೆ! ಪ್ರಕರಣ ದಿಕ್ಕುತಪ್ಪಿಲು ಪೊಲೀಸರ ಯತ್ನ
ಆ ಮೂವರ ಆತ್ಮಹತ್ಯೆ ನಂತರವೂ ಪೊಲೀಸರು ಅನುಮಾನಾಸ್ಪದವಾಗಿ ವರ್ತಿಸಿದ್ದಾರೆ. ತರಾತುರಿಯಲ್ಲಿ ಪಂಚನಾಮೆ ನಡೆಸಿದ್ದಾರೆ ಎಂಬ ಆರೋಪ ಸ್ಥಳೀಯ ಕನ್ನಡ ಸಂಘಟನೆಗಳಿಂದ ವ್ಯಕ್ತವಾಗಿದೆ. ಈ ಬಗ್ಗೆ ಗೋವಾ ಸಿಎಂ ಡಾ. ಪ್ರಮೋದ್​ ಪಿ ಸಾವಂತ್​ ಕೂಡಲೇ ಗಮನ ಹರಿಸಬೇಕು. ಪೊಲೀಸ್‌ ಕಿರುಕುಳದ ನಿಟ್ಟಿನಲ್ಲಿ ತನಿಖೆ ನಡೆಯಬೇಕು. ಈ ಮೂಲಕ ಕನ್ನಡಿಗರ ಸುರಕ್ಷತೆಯನ್ನು ಖಾತ್ರಿಪಡಿಸಬೇಕು ಎಂದು ಕುಮಾರಸ್ವಾಮಿ ಆಗ್ರಹಿಸಿದ್ದಾರೆ.
“ಗೋವಾದಲ್ಲಿ ಕನ್ನಡಿಗರ ಮೇಲಿನ ದೌರ್ಜನ್ಯಗಳಿಗೆ ಕೊನೆಮೊದಲಿಲ್ಲ ಎಂಬಂತಾಗಿದೆ. ಕನ್ನಡಿಗರನ್ನು ಒಕ್ಕಲೆಬ್ಬಿಸುವುದರಿಂದ ಆರಂಭಿಸಿ, ಸಣ್ಣ ಪುಟ್ಟ ಪ್ರಕರಣಗಳಲ್ಲಿ ಸಿಲುಕಿಸುವವರೆಗೆ ವಿಧವಿಧದ ದೌರ್ಜನ್ಯಗಳು ನಡೆಯುತ್ತಲೇ ಇವೆ. ಈ ಬಗ್ಗೆ ಕರ್ನಾಟಕ ಸರ್ಕಾರವೂ ಗಮನಹರಿಸಬೇಕು. ನಾನೂ ಕೂಡ ಕೇಂದ್ರ ಗೃಹ ಸಚಿವಾಲಯಕ್ಕೆ ಪತ್ರ ಬರೆಯುತ್ತೇನೆ” ಎಂದಿದ್ದಾರೆ.
ಸಾಂಕ್ರಾಮಿಕದಲ್ಲಿ ಲಾಭ ಗಳಿಸುವುದು ಹೇಗೆ ಎಂದು ಶ್ವೇತಪತ್ರ ಪ್ರಕಟಿಸಿ: ರಾಹುಲ್ ಗಾಂಧಿಗೆ ಬಿಜೆಪಿ ನಾಯಕ ಟಾಂಗ್

ಬಂಗಾಳ ಹಿಂಸಾಚಾರ: ಎಲ್ಲ ಸಂತ್ರಸ್ತರ ಪ್ರಕರಣ ದಾಖಲಿಸಲು ಪೊಲೀಸರಿಗೆ ಹೈಕೋರ್ಟ್​ ಆದೇಶ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 × two =
Remember me
