ಬೆಂಗಳೂರು:ಶಬ್ದ ಮಾಲಿನ್ಯ ಉಂಟು ಮಾಡುವವರ ವಿರುದ್ಧ ಕಾನೂನು ಕ್ರಮ ಜರುಗಿಸುವ ಕುರಿತು ಈ ಹಿಂದೆ ಹೊರಡಿಸಿದ್ದ ಆದೇಶ ಪಾಲನೆ ಮಾಡುವ ಸಂಬಂಧ ವೈಯಕ್ತಿಕವಾಗಿ ಪ್ರಮಾಣಪತ್ರ ಸಲ್ಲಿಸಲು ರಾಜ್ಯ ಪೊಲೀಸ್ ಮಹಾ ನಿರ್ದೇಶಕರಿಗೆ ಹೈಕೋರ್ಟ್ ಸೂಚಿಸಿದೆ.
ಇಂದಿರಾನಗರದಲ್ಲಿರುವ ಬಾರ್ ಮತ್ತು ಪಬ್​ಗಳಿಂದ ಮಿತಿ ಮೀರಿದ ಶಬ್ಧ ಮಾಲಿನ್ಯ ಉಂಟಾಗುತ್ತಿದೆ ಎಂದು ಆರೋಪಿಸಿ ಸ್ಥಳೀಯರು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕ್ ನೇತೃತ್ವದ ವಿಭಾಗೀಯ ಪೀಠ ಸೋಮವಾರ ವಿಚಾರಣೆ ನಡೆಸಿತು.
ಶಬ್ದ ಮಾಲಿನ್ಯ ಉಂಟು ಮಾಡುವವರ ವಿರುದ್ಧ ಕ್ರಮ ಜರುಗಿಸಲು ಎಲ್ಲ ಪೊಲೀಸ್ ಅಧಿಕಾರಿಗಳಿಗೆ ನಿರ್ದೇಶಿಸುವಂತೆ ಸರ್ಕಾರಕ್ಕೆ ಸೂಚಿಸಿ ಈ ಹಿಂದೆ ನೀಡಿದ್ದ ಆದೇಶ ಪಾಲನೆ ಸಂಬಂಧ ವೈಯಕ್ತಿಕ ಪ್ರಮಾಣಪತ್ರ ಸಲ್ಲಿಸಲು ಡಿಜಿಪಿಗೆ ಸೂಚಿಸಿದ ಪೀಠ ವಿಚಾರಣೆಯನ್ನು ಫೆ.14ಕ್ಕೆ ಮುಂದೂಡಿತು.
ಪರಿಸರ ಸಂರಕ್ಷಣೆ ಕಾಯ್ದೆ-1986ರ ಸೆಕ್ಷನ್ 15ರ ಪ್ರಕಾರ ಶಬ್ದ ಮಾಲಿನ್ಯ ಉಂಟು ಮಾಡಿದವರ ವಿರುದ್ಧ ಕಾನೂನು ಪ್ರಕಾರ ದೂರು ದಾಖಲಿಸಿ ಶಿಕ್ಷೆ ವಿಧಿಸಬಹುದಾಗಿದೆ. ಸೆಕ್ಷನ್ 19ರ ಪ್ರಕಾರ ಶಬ್ದ ಮಾಲಿನ್ಯ ಉಂಟು ಮಾಡಿದವರ ವಿರುದ್ಧ ಕೇಂದ್ರ ಸರ್ಕಾರ, ಸರ್ಕಾರದ ಪ್ರಾಧಿಕಾರ, ಸರ್ಕಾರಿ ಅಧಿಕಾರಿ ದೂರು ದಾಖಲಿಸಬೇಕಿದೆ. ಆದ್ದರಿಂದ, ಶಬ್ದ ಮಾಲಿನ್ಯ ಉಂಟು ಮಾಡಿದವರ ವಿರುದ್ಧ ಕಾನೂನು ಕ್ರಮ ಜರುಗಿಸುವಂತೆ ಸಂಬಂಧ ಪಟ್ಟ ಪೊಲೀಸ್ ಅಧಿಕಾರಿಗಳಿಗೆ ನಿರ್ದೇಶಿಸಬೇಕು ಎಂದು ಹೈಕೋರ್ಟ್ 2019ರ ಸೆ.19 ಹಾಗೂ ನ.11ರಂದು ಸರ್ಕಾರಕ್ಕೆ ಆದೇಶಿಸಿತ್ತು.
ಸೋಮವಾರ ಅರ್ಜಿ ವಿಚಾರಣೆ ವೇಳೆ ಸರ್ಕಾರ ಸಲ್ಲಿಸಿದ್ದ ಪ್ರಮಾಣಪತ್ರದಲ್ಲಿ ಹೈಕೋರ್ಟ್ ಈ ಹಿಂದೆ ಹೊರಡಿಸಿದ ಈ ಎರಡು ಆದೇಶವನ್ನು ರಾಜ್ಯ ಸರ್ಕಾರ ಪಾಲನೆ ಮಾಡಿರುವ ಬಗ್ಗೆ ಯಾವುದೇ ವಿವರಣೆ ಇರಲಿಲ್ಲ.
ಇದರಿಂದ ಬೇಸರಗೊಂಡ ಪೀಠ, ಕೋರ್ಟ್ ಆದೇಶ ಪಾಲನೆ ಮಾಡದ ಸರ್ಕಾರದ ವಿರುದ್ಧ ನ್ಯಾಯಾಂಗ ನಿಂದನೆ ನೋಟಿಸ್ ನೀಡುವುದು ಸಮಯ ವ್ಯರ್ಥ ಮಾಡಿದಂತಾ ಗುತ್ತದೆ. ಆದ್ದರಿಂದ, ಈ ಆದೇಶ ಹಾಗೂ ಪ್ರಕರಣಕ್ಕೆ ಸಂಬಂಧಿಸಿದ ದಾಖಲೆಗಳನ್ನು ಡಿಜಿಪಿ ಮುಂದಿಡಬೇಕು. ಅವುಗಳನ್ನು ಪರಿಶೀಲಿಸಿದ ನಂತರ ಕೋರ್ಟ್ ಆದೇಶ ಪಾಲಿಸುವ ಕುರಿತು ಡಿಜಿಪಿ ವೈಯಕ್ತಿಕ ಪ್ರಮಾಣಪತ್ರ ಸಲ್ಲಿಸಬೇಕು ಎಂದು ನಿರ್ದೇಶಿಸಿ ವಿಚಾರಣೆ ಮುಂದೂಡಿತು.
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:20 + sixteen =
Remember me
