ಬೆಂಗಳೂರು:ಉದ್ಯಮಿ ಗೋವಿಂದಬಾಬು ಪೂಜಾರಿಗೆ ಬೈಂದೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ಹೇಳಿ ಕೋಟ್ಯಂತರ ರೂಪಾಯಿ ಪಡೆದು ವಂಚಿಸಿದ್ದಾರೆ ಎಂಬ ಆರೋಪದ ಮೇಲೆ ಚೈತ್ರಾ ಕುಂದಾಪುರ ಮತ್ತಿತರ ಆರೋಪಿಗಳು ಸಿಕ್ಕಿಬಿದ್ದಿರುವ ಪ್ರಕರಣ ರಾಜಕೀಯ ಕೆಸರೆರಚಾಟಕ್ಕೆ ವೇದಿಕೆ ಆಗಿದೆ. ಈ ಪ್ರಕರಣವನ್ನೇ ಬಿಜೆಪಿ ವಿರುದ್ಧ ತನ್ನ ಅಸ್ತ್ರವನ್ನಾಗಿ ಕಾಂಗ್ರೆಸ್ ಮಾಡಿಕೊಂಡಿದೆ.
ಈ ಪ್ರಕರಣದ ಬಳಿಕ, ‘ಬಿಜೆಪಿಯಲ್ಲಿ ಎಲ್ಲವನ್ನೂ ಮಾರಾಟಕ್ಕೆ ಇಡಲಾಗಿದೆಯೇ?’ ಎಂದು ಕೆಲವು ದಿನಗಳ ಹಿಂದೆ ಪ್ರಶ್ನಿಸಿದ್ದ ಕೆಪಿಸಿಸಿ, ಇನ್ನೂ ವಿರೋಧಪಕ್ಷದ ನಾಯಕನನ್ನು ಆಯ್ಕೆ ಮಾಡದ್ದಕ್ಕೆ ಬಿಜೆಪಿಯನ್ನು ಲೇವಡಿ ಮಾಡುತ್ತಲೇ ಬಂದಿದೆ. ಅದರ ಮುಂದುವರಿದ ಭಾಗವಾಗಿ ಇಂದು ಮತ್ತೊಮ್ಮೆ ಬಿಜೆಪಿಗರ ಕಾಲೆಳೆದಿದೆ.
ಇದನ್ನೂ ಓದಿ:ಪಿಒಪಿ ಗಣೇಶ ತಯಾರಕರ ವಿರುದ್ಧ ಕ್ರಿಮಿನಲ್ ಮೊಕದ್ದಮೆ; ಪರಿಸರ ಸಚಿವ ಈಶ್ವರ ಖಂಡ್ರೆ ಸೂಚನೆ
‘ಕರ್ನಾಟಕದ ಬಿಜೆಪಿಯನ್ನು ಸಂತೋಷ “ಜಿ” ಮುಳುಗಿಸಿದರು, ಕರ್ನಾಟಕದ ಬಿಜೆಪಿಯನ್ನು ಮೋದಿ “ಜಿ” ಕೈಬಿಟ್ಟರು, ಡಿಯರ್ ಬಿಜೆಪಿ ಕರ್ನಾಟಕ.. ವಿರೋಧ ಪಕ್ಷದ ನಾಯಕನ ಆಯ್ಕೆಗೆ ಅದ್ಯಾರೋ ವಿಶ್ವನಾಥ್ “ಜಿ” ಅವರ ಸಹಾಯವನ್ನಾದರೂ ಪಡೆಯಿರಿ!’ ಎನ್ನುವ ಮೂಲಕ ವ್ಯಂಗ್ಯವಾಡಿದೆ.
ಚೈತ್ರಾ ಕುಂದಾಪುರ ಪ್ರಕರಣವನ್ನು ಮುಂದಿಟ್ಟುಕೊಂಡು ಮೊನ್ನೆಯಷ್ಟೇ ಬಿಜೆಪಿಗರನ್ನು ಟೀಕಿಸಿದ್ದ ಕಾಂಗ್ರೆಸ್, ಈ ಮಾರಾಟದ ಆಟದಲ್ಲಿ “ವಿರೋಧ ಪಕ್ಷದ ನಾಯಕ”ನ ಹುದ್ದೆಗೆ ಇನ್ನೂ ಯಾರೊಬ್ಬರೂ ಬಿಡ್ ಸಲ್ಲಿಸಿಲ್ಲವೇ? ಎಂದು ಸೋಷಿಯಲ್ ಮೀಡಿಯಾದಲ್ಲಿ ಪ್ರಶ್ನೆ ಮಾಡಿತ್ತು.
ಕರ್ನಾಟಕದ ಬಿಜೆಪಿಯನ್ನು ಸಂತೋಷ “ಜಿ”ಮುಳುಗಿಸಿದರು,
ಕರ್ನಾಟಕದ ಬಿಜೆಪಿಯನ್ನು ಮೋದಿ “ಜಿ ” ಕೈಬಿಟ್ಟರು,
Dear@BJP4Karnataka,ವಿರೋಧ ಪಕ್ಷದ ನಾಯಕನ ಆಯ್ಕೆಗೆ ಅದ್ಯಾರೋ ವಿಶ್ವನಾಥ್ “ಜಿ” ಅವರ ಸಹಾಯವನ್ನದರೂ ಪಡೆಯಿರಿ!
— Karnataka Congress (@INCKarnataka)September 15, 2023

ಪ್ರೀತಿ ಇದ್ದರೂ ಪತ್ನಿ ಯಾಕೆ ಪತಿಯಿಂದ ವಿಮುಖಳಾಗುತ್ತಾಳೆ?; ಇದು ವಿವಾಹಿತರಿಗೊಂದು ಕಿವಿಮಾತು, ಎಚ್ಚರಿಕೆ ಕೂಡ!

ಎಲಾನ್ ಮಸ್ಕ್ ಬಚ್ಚಿಟ್ಟಿದ್ದ ‘ಆ ಮೂರನೇ ಮಗು’ವಿನ ವಿಷಯ ಕೊನೆಗೂ ಬಹಿರಂಗ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:one × 4 =
Remember me
