ಮೈಸೂರು:ತಿ. ನರಸೀಪುರ ತಾಲೂಕು ತಲಕಾಡಿನ ಪಂಚಲಿಂಗದರ್ಶನ ಮಹೋತ್ಸವದ ಪ್ರಮುಖ ಕಾರ್ಯಕ್ರಮ ಪಂಚಲಿಂಗ ದರ್ಶನ ಪೂಜಾ ಮಹೋತ್ಸವ ವೇಳೆ ದರ್ಶನ ಮಾಡುವ ಪಂಚಲಿಂಗಗಳ ವಿವರ ಇಲ್ಲಿದೆ.
ವೈದ್ಯನಾಥೇಶ್ವರ

ತಲ ಮತ್ತು ಕಾಡ ಎಂಬ ಬೇಡರಿಗೆ ಮೋಕ್ಷ ಪ್ರದಾನಿಸಿದ ಪರಮೇಶ್ವರ ಇಲ್ಲಿ ತಾನೇ ಸ್ವಯಂ ವೈದ್ಯ ಮಾಡಿಕೊಂಡಿದ್ದನಂತೆ.ಇದರಿಂದ ಶಿವನನ್ನ ಇಲ್ಲಿ ವೈದ್ಯನಾಥೇಶ್ವನಾಗಿ ಪೂಜೆ ಮಾಡಲಾಗುತ್ತೆ. ಈ ಕಾರಣದದ ಇಲ್ಲಿ‌ ಪೂಜೆ ಮಾಡಿದರೆ ಸಕಲ ರೋಗ ರುಜಿನಗಳು ವಾಸಿಯಾಗುತ್ತದೆ ಎಂಬ ನಂಬಿಕೆ ಇದೆ. ಇದರಿಂದ ಇಲ್ಲಿ ವೈದ್ಯನಾಥನಿಗೆ ಅಗ್ರ ಪೂಜೆಯನ್ನು ಮಾಡಲಾಗುತ್ತೆ.
ಇದನ್ನೂ ಓದಿ:ಚೀನಾದೊಂದಿಗೆ ಗಡಿ ಸಂಘರ್ಷ: 15 ದಿನಗಳ ತೀವ್ರ ಯುದ್ಧಕ್ಕೆ ಭಾರತ ಸಜ್ಜು
ಅರ್ಕನಾಥೇಶ್ವರ

ಗ್ರಹಗಳಿಗೆಲ್ಲಾ ಅಧಿಪತಿಯಾಗಲು ಪುರಾಣದಲ್ಲಿ ಸೂರ್ಯನಿಂದ ಪೂಜಿಸಲ್ಪಟ್ಟ ಶಿವಲಿಂಗವೇ ಅರ್ಕನಾಥೇಶ್ವರನೆಂದು ಪ್ರಸಿದ್ಧಿಯಾಗಿದೆ. ಇದು ತಲಕಾಡಿನಲ್ಲಿ ವೈದ್ಯನಾಥೇಶ್ವರ ದೇಗುಲದ ಪೂರ್ವ ದಿಕ್ಕಿಗೆ ಮೂರು ಮೈಲಿ ದೂರದ ವಿಜಯಪುರದಲ್ಲಿದೆ‌‌. ಇದು ಸಕಲ ಸಂಕಷ್ಟ ನಿವಾರಕ ಲಿಂಗವೆನಿಸಿದೆ. ಅರ್ಕನಾಥೇಶ್ವರನ ಅರ್ಚನೆಗೆ ಮಾಘ ಶುದ್ಧ ಸಪ್ತಮಿ ದಿನವು ಬಹಳ ಶ್ರೇಷ್ಠವಾಗಿದೆ ಎಂದು ಹೇಳಲಾಗುತ್ತದೆ‌.
ಇದನ್ನೂ ಓದಿ:ರಾಜ್ಯದಲ್ಲಿ 15,410 ಕೋಟಿ ರೂ. ನೆರೆ ಹಾನಿ: ಕೇಂದ್ರಕ್ಕೆ ಸಿಎಂ ಮನವಿ
ಪಾತಾಳೇಶ್ವರ

ನಾಗಲೋಕದ ಚಕ್ರಾಧಿಪತ್ಯಕ್ಕಾಗಿ ವಾಸುಕಿಯಿಂದ ಪೂಜಿತಗೊಂಡಿರುವ ಈ ಶಿವಲಿಂಗವೇ ಪಾತಾಳೇಶ್ವರ. ವಾಸುಕೀಶ್ವರನೆಂಬುವುದು ಪಾತಾಳೇಶ್ವರನ ಮತ್ತೊಂದು ಹೆಸರಾಗಿದೆ. ಈ ದೇವಾಲಯ ಬೇರೆ ದೇವಾಲಯಗಳಿಗಿಂತ ಆಳದಲ್ಲಿರುವ ಕಾರಣ ಪಾತಾಳೇಶ್ವರನೆಂದೇ ಹೆಸರಾಗಿದೆ. ಇದರ ಪೂಜೆಗೆ ಶ್ರಾವಣ ಶುದ್ಧ ಪಂಚಮಿ ಅತ್ಯಂತ ಶ್ರೇಷ್ಠ ದಿನವಾಗಿದೆ. ಈ ಲಿಂಗವು ಪ್ರತಿದಿನ ಐದು ಬಣ್ಣಗಳನ್ನು ತಾಳುತ್ತದೆಂದು ಹೇಳಲಾಗುತ್ತದೆ.
ಇದನ್ನೂ ಓದಿ:ಬನ್ನಂಜೆ ಕೃತಿ ದ್ವಿಭಾಷೆಯ ಸಂಗಮ: ಸಂಸ್ಕೃತ ಪಾಂಡಿತ್ಯವೂ, ಕನ್ನಡ ಲಾಲಿತ್ಯವೂ…
ಮರಳೇಶ್ವರ

ತಲಕಾಡಿನ ಮರಳಿಗೆಲ್ಲ ಒಡೆಯನೆಂದೆ ಮರಳೇಶ್ವರನನ್ನು ಕರೆಯಲಾಗುತ್ತೆ. ಮರಳೇಶ್ವರ ಬ್ರಹ್ಮನಿಂದ ಪೂಜಿಸಲ್ಪಟ್ಟವನ್ನು ಎಂದು‌ ಹೇಳಲಾಗುತ್ತೆ. ಬ್ರಹ್ಮನಿಗೆ ಪ್ರತ್ಯಕ್ಷನಾಗಿ ವರನೀಡಿದ ಎಂದು ಹೇಳಲಾಗುವುದು ಇದರಿಂದ ಮರಳೇಶ್ವರನಿಗೆ ಸೈತಕೇಶ್ವರನೆಂಬ ಕರೆಯಲಾಗುತ್ತದೆ. ಇದರಿಂದ ಈ ದೇವಾಲಯದಲ್ಲಿ ಪೂಜೆ ಮಾಡಿ ಬೇಡಿಕೊಂಡರೆ ಬೇಡಿದ ವರವನ್ನು ಕೊಡುತ್ತಾನೆ ಎಂಬ ನಂಬಿಕೆ‌ ಸಹ ಇದೆ.
ಇದನ್ನೂ ಓದಿ:Web Exclusive| ಬಂಡೀಪುರದಲ್ಲಿ ಇನ್ಮುಂದೆ ವಾಹನಗಳಿಗೆ ಟೈಮ್ ಟಿಕೆಟ್​?
ಮಲ್ಲಿಕಾರ್ಜುನೇಶ್ವರ

ಕಾಮಧೇನುವಿನಿಂದ ಪೂಜೆಗೊಳ್ಳುತ್ತಿದ್ದ ಶಿವಲಿಂಗವೇ ಮಲ್ಲಿಕಾರ್ಜುನೇಶ್ವರ ಎಂದು ಹೇಳುತ್ತಾರೆ. ಮಲ್ಲಿಕಾರ್ಜುನೇಶ್ವರಮುನ್ನೂರು ಅಡಿ ಎತ್ತರದ ಮುಡುಕುತೊರೆ ಬೆಟ್ಟದಲ್ಲಿ ನೆಲೆಸಿದ್ದಾನೆ. ಈತ ಕೂಡ ಕೇಳಿದ ವರವನ್ನ ಕೊಡುತ್ತಾನೆ ಎಂದು ಭಕ್ತರ ನಂಬಿಕೆಯಾಗಿದೆ. ಇಲ್ಲಿ ಕಾವೇರಿ ನದಿಯು ನಾಲ್ಕು ದಿಕ್ಕುಗಳಲ್ಲಿ ಹರಿಯುವುದು ಕ್ಷೇತ್ರದ ವಿಶೇಷವಾಗಿದೆ.
ಕ್ಷಣ ಕ್ಷಣದ ಸುದ್ದಿಗಳ ಅಪ್ಡೇಟ್ಸ್​ಗಾಗಿ ನಮ್ಮಫೇಸ್​ಬುಕ್​ ಪುಟಲೈಕ್ ಮಾಡಿ ಮತ್ತು ಫಾಲೋ ಮಾಡಿ..
ಪಂಚಲಿಂಗ ದರ್ಶನ ಮಹೋತ್ಸವ: ಪಂಚಲಿಂಗ ದರ್ಶನ ಪೂಜೆ ಸಂಪನ್ನ

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:two × 2 =
Remember me
