ಬೆಂಗಳೂರು:ಗ್ರಾಮ ಪಂಚಾಯಿತಿ ಚುನಾವಣೆ ಮುಗಿದ ಬೆನ್ನಹಿಂದೆಯೇ ಮತ್ತೊಂದು ಚುನಾವಣಾ ಸಮರಕ್ಕೆ ರಾಜಕೀಯ ಪಕ್ಷಗಳು ಸಜ್ಜಾಗಬೇಕಿದೆ. ಈ ಭಾರಿ 110 ಜಿಲ್ಲಾ ಪಂಚಾಯಿತಿ ಕ್ಷೇತ್ರಗಳು ಹೆಚ್ಚಾಗಲಿವೆ, ಅಲ್ಲದೆ, ಸುಮಾರು 600 ತಾಲೂಕು ಪಂಚಾಯಿತಿ ಕ್ಷೇತ್ರಗಳು ರದ್ದಾಗಲಿವೆ.
ರಾಜ್ಯ ಚುನಾವಣಾ ಆಯೋಗ ಕ್ಷೇತ್ರ ಪುನರ್ ವಿಂಗಡಣೆ ಕುರಿತು ಮಾರ್ಗಸೂಚಿ ಹೊರಡಿಸಿದ್ದು, ಈ ಮಾರ್ಗಸೂಚಿ ಅನ್ವಯ ಕ್ಷೇತ್ರ ಪುನರ್ ವಿಂಗಡಣೆಯಾಗಲಿದೆ. ಈಗಾಗಲೇ ಆಯಾ ಜಿಲ್ಲಾಧಿಕಾರಿಗಳು ಪುನರ್ ವಿಂಗಡಣೆಯ ಮಾಹಿತಿ ಹಾಗೂ ನಕ್ಷೆಗಳನ್ನು ಫೆ.19, 20 ಮತ್ತು 22ರಂದು ಆಯೋಗಕ್ಕೆ ಹಾಜರು ಪಡಿಸಿದ್ದಾರೆ. ದಕ್ಷಿಣ ಕನ್ನಡ ಮತ್ತು ಶಿವಮೊಗ್ಗ ಜಿಲ್ಲೆಯ ಪುನರ್​ ವಿಂಗಡಣೆಗೆ ಸಂಬಂಧಿಸಿದಂತೆ ಮಾತ್ರ ನಕ್ಷೆ ಹಾಗೂ ಮಾಹಿತಿ ಸಲ್ಲಿಕೆ ಆಗಬೇಕಿದೆ.ಇದನ್ನೂ ಓದಿರಿಹತ್ತು ಆನೆ ಬೇಕಾದ್ರು ಸಾಕ್ತೀನಿ.. ನಮ್ಮಪ್ಪ ಮದ್ವೆ ಆಗು ಅಂತಿದ್ದಾರೆ.. ಏನು ಮಾಡಲಿ?: ಪ್ರಜ್ವಲ್​ ರೇವಣ್ಣ
ತಾಲೂಕು ಮತ್ತು ಜಿಲ್ಲಾ ಪಂಚಾಯಿತಿ ಚುನಾವಣೆಗೆ ಸಂಬಂಧಿಸಿದಂತೆ ರಾಜ್ಯ ಚುನಾವಣಾ ಆಯೋಗವು ಕ್ಷೇತ್ರ ಪುನರ್ ವಿಂಗಡಣೆ ಪ್ರಕ್ರಿಯೆ ಕೈಗೆತ್ತಿಕೊಂಡಿದ್ದು, ಈ ಪ್ರಕ್ರಿಯೆ ಮೊದಲ ಹಂತ ಸೋಮವಾರ ಪೂರ್ಣಗೊಂಡಿದೆ. ಇದೇ ವಾರಾಂತ್ಯದಲ್ಲಿ 2ನೇ ಹಂತದ ಪರಿಶೀಲನೆ ಪೂರ್ಣಗೊಳಿಸಲು ನಿರ್ಧರಿಸಿದೆ. 2ನೇ ಹಂತದ ಪ್ರಕ್ರಿಯೆ ಕೂಡ ಇದೇ ವಾರದಲ್ಲಿ ಪೂರ್ಣಗೊಳಿಸಲು ಆಯೋಗ ಜಿಲ್ಲಾಧಿಕಾರಿಗಳಿಗೆ ಸೂಚಿಸಿದೆ. ಕ್ಷೇತ್ರದ ಮಾಹಿತಿ ಮತ್ತು ನಕ್ಷೆ ಪೂರ್ಣಗೊಂಡ ಬಳಿಕ ಅಧಿಸೂಚನೆ ಹೊರಡಿಸಲಾಗುತ್ತೆ.
ಯಾವುದು ಹೆಚ್ಚು? ಯಾವುದು ಕಡಿಮೆ?:ತಾಲೂಕು ಪಂಚಾಯಿತಿ ಕ್ಷೇತ್ರಗಳ ಜನಸಂಖ್ಯೆ ಪ್ರಮಾಣವನ್ನು 10 ಸಾವಿರದಿಂದ 12,500ಕ್ಕೆ ಹೆಚ್ಚಿಸಲಾಗಿದೆ. ಅದೇ ರೀತಿ ಜಿಲ್ಲಾ ಪಂಚಾಯಿತಿ ಕ್ಷೇತ್ರದ ಜನಸಂಖ್ಯೆ ಪ್ರಮಾಣವನ್ನು 40 ಸಾವಿರದಿಂದ 35 ಸಾವಿರಕ್ಕೆ ಇಳಿಕೆ ಮಾಡಲಾಗಿದೆ. ಇದರಿಂದಾಗಿ 110 ಜಿಲ್ಲಾ ಪಂಚಾಯಿತಿ ಕ್ಷೇತ್ರಗಳು ಹೆಚ್ಚಾದರೆ, ಸುಮಾರು 600 ತಾಲೂಕು ಪಂಚಾಯಿತಿ ಕ್ಷೇತ್ರಗಳು ರದ್ದಾಗಲಿವೆ.
ಮೇ, ಜೂನ್​ ಅವಧಿ ಪೂರ್ಣ:ಕೇತ್ರ ಪುನರ್​ವಿಂಗಡಣೆ ಪ್ರಕ್ರಿಯೆ ಪೂರ್ಣಗೊಂಡ ಮೇಲೆ ಮೀಸಲಾತಿ ಪ್ರಕಟಿಸಲಾಗುತ್ತದೆ. ಅಂತಿಮ ಮೀಸಲಾತಿ ಪಟ್ಟಿ ಪ್ರಕಟಗೊಂಡ 45 ದಿನಗಳ ಬಳಿಕ ಚುನಾವಣೆ ದಿನಾಂಕ ಘೋಷಣೆಯಾಗಲಿದೆ. ಮೇ ಮತ್ತು ಜೂನ್​ ತಿಂಗಳಲ್ಲಿ ತಾಲೂಕು ಮತ್ತು ಜಿಲ್ಲಾ ಪಂಚಾಯಿತಿ ಅವಧಿ ಪೂರ್ಣಗೊಳ್ಳಲಿದ್ದು, ರಾಜ್ಯ ಚುನಾವಣಾ ಆಯೋಗ ಚುನಾವಣೆಗೆ ಎಲ್ಲ ಸಿದ್ಧತೆ ಮಾಡಿಕೊಳ್ಳುತ್ತಿದೆ.
ಕ್ಷಣಕ್ಷಣದ ಮಾಹಿತಿಗಾಗಿ ವಿಜಯವಾಣಿ ಫೇಸ್​ಬುಕ್​ ಪೇಜ್​ ಲೈಕ್​ ಮಾಡಿ.

ಕೋಟಿ ಮೌಲ್ಯದ ಜಮೀನು ದಾನ ಕೊಡ್ತೀನಿ, ತಾಕತ್​ ಇದ್ರೆ ರಾಮಮಂದಿರ ಕಟ್ಟಿಸಿ: ಸಿದ್ದುಗೆ ರೈತನ ಸವಾಲು

ಡೆತ್​ನೋಟ್​ ಬರೆದಿಟ್ಟು ಹೈಸ್ಕೂಲ್​ ಶಿಕ್ಷಕ ಆತ್ಮಹತ್ಯೆ! ಸಾವಿಗೂ ಮುನ್ನ ಮನದ ದುಃಖ ಅಕ್ಷರಕ್ಕಿಳಿಸಿದ ಶಿಕ್ಷಕ

ಚಿಕ್ಕಬಳ್ಳಾಪುರದಲ್ಲಿ ಜಿಲೆಟಿನ್​ ಸ್ಫೋಟ: ಸ್ಥಳಕ್ಕೆ ಬಂದ ಸಿದ್ದರಾಮಯ್ಯ ಎಸ್ಪಿ ವಿರುದ್ಧ ಗರಂ

ವಿವಾಹಿತೆ ಜತೆ ಯುವಕನ ಸಲ್ಲಾಪ, ತಡರಾತ್ರಿ ಸಿಕ್ಕಿಬಿದ್ದ ಜೋಡಿಯನ್ನ ಟ್ರ್ಯಾಕ್ಟರ್​ಗೆ ಕಟ್ಟಿಹಾಕಿದ ಗ್ರಾಮಸ್ಥರು!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:fourteen + seven =
Remember me
